ಬೆಳಗಾವಿ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈಗಲೂ ನಮ್ಮ ತಂಡದಲ್ಲಿಯೇ ಇದ್ದಾರೆ. ಅವರ ಬಾಯಿ ಮುಚ್ಚಿಸಿ ಪಕ್ಷ ಕಟ್ಟುವ ಕೆಲಸ ಮಾಡುತ್ತೇವೆ ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಯತ್ನಾಳ್ ಮಾತಿನ ಭರದಲ್ಲಿ ಏನೇನೂ ಮಾತನಾಡುತ್ತಾರೆ. ಅವರ ಮಾತಿನಲ್ಲಿ ಯಾವುದೇ ದ್ವೇಷ ಹಾಗೂ ಕೆಟ್ಟ ಭಾವನೆ ಇಲ್ಲ. ಮಾತನಾಡುವುದು ಅವರ ಹುಟ್ಟು ಗುಣ. ಯಾರನ್ನೂ ಬೈಯದಂತೆ, ಪಕ್ಷಕ್ಕೆ ಮುಜುಗುರ ಆಗುವ ರೀತಿ ಮಾತನಾಡದಂತೆ ಮನವಿ ಮಾಡಿದ್ದೇವೆ. ಹುಬ್ಬಳ್ಳಿಯಲ್ಲಿ ಯತ್ನಾಳ್ ಮಾತನಾಡಿದ್ದು ತಪ್ಪಿದೆ. ಅದರ ಅರ್ಥ ಬೇರೆ ಇದೆ, ತಪ್ಪು ಕಲ್ಪನೆ ಬೇಡ ಎಂದರು.
ಯತ್ನಾಳ್ ಬೇರೆ ಪಕ್ಷ ಕಟ್ಟುವುದಿಲ್ಲ. ಅವರು ಬಿಜೆಪಿ ನಾಯಕರನ್ನು ಬೈಯುತ್ತಿಲ್ಲ, ಒಂದೇ ಕುಟುಂಬದ ಬಗ್ಗೆ ಮಾತನಾಡುತ್ತಿದ್ದಾರೆ. ಸಂಘಟನೆ ಮಾಡಿ ಮುಂದೆ ಸಾಗುವಂತೆ ಹೇಳಿದ್ದೇವೆ. ತಂದೆ ಹಾಗೂ ಮಗನ ಬಗ್ಗೆಯೂ ಮಾತನಾಡಬೇಡ ಎಂದು ಹೇಳಿದ್ದೇನೆ. ಸಂಘಟನೆ ಮಾಡುವುದನ್ನು ಬಿಟ್ಟು ಬೇರೆ ವಿಚಾರ ಮಾತನಾಡ ಬೇಡ ಎಂದು ಮನವಿ ಮಾಡಿದ್ದೇನೆ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…