Featured

ಯತ್ನಾಳ್, ಜಾರಕಿಹೊಳಿ ತಂಡಕ್ಕೆ ಬ್ರೇಕ್ ಹಾಕಿ: ಅಮಿತ್‌ ಶಾಗೆ ವಿಜಯೇಂದ್ರ ಮನವಿ – vishwanews24

ಯತ್ನಾಳ್, ಜಾರಕಿಹೊಳಿ ತಂಡಕ್ಕೆ ಬ್ರೇಕ್ ಹಾಕುವಂತೆ ಅಮಿತ್ ಶಾಗೆ ವಿಜಯೇಂದ್ರ ಮನವಿ

ಬೆಂಗಳೂರು : ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ ತಂಡಕ್ಕೆ ಬ್ರೇಕ್ ಹಾಕುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಮನವಿ ಮಾಡಿಕೊಂಡಿದ್ದಾರೆ.

ಬುಧವಾರ ರಾತ್ರಿ ವಿಜಯೇಂದ್ರ ಅವರು ಅಮಿತ್ ಶಾ ಅವರನ್ನು ಭೇಟಿಯಾಗಿದ್ದು, ಈ ವೇಳೆ ಇತ್ತೀಚೆಗೆ ಪಕ್ಷದಲ್ಲಿ ಉಲ್ಬಣಗೊಂಡಿರುವ ಆಂತರಿಕ ಕಲಹದ ಬಗ್ಗೆ ಅವರಿಗೆ ದೂರು ನೀಡಿದ್ದಾರೆ. ಇದೇ ವೇಳೆ, ರಾಜ್ಯದಲ್ಲಿ ಕಳೆದೊಂದು ವರ್ಷದ ಪಕ್ಷ ಸಂಘಟನೆ, ಹೋರಾಟ ಕುರಿತು ರಿಪೋರ್ಟ್ ಸಲ್ಲಿಸಿದ್ದಾರೆ.

ತಮ್ಮ ಒಂದು ವರ್ಷದ ಸಾಧನೆಯ ವರದಿ ಕೊಡುವ ಮೂಲಕ ಕುತೂಹಲ ಹುಟ್ಟಿಸಿದ್ದಾರೆ. ಯತ್ನಾಳ್ ತಂಡದ 2ನೇ ಹಂತದ ವಕ್ಫ್ ಹೋರಾಟ ವಿಚಾರವನ್ನು ಅವರು ಹೈಕಮಾಂಡ್ ಗಮನಕ್ಕೆ ತಂದರು. ಈ ವರ್ಷಾರಂಭದಿಂದ ಪಕ್ಷದ ವತಿಯಿಂದ ಕೈಗೊಳ್ಳಲಿರುವ ಹೋರಾಟಗಳ ಬಗ್ಗೆ ಪ್ರತ್ಯೇಕ ವರದಿ ಕೂಡ ಸಲ್ಲಿಸಿದ್ದಾರೆ. ಜೊತೆಗೆ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೂ ಪ್ರಿಯಾಂಕ್ ಖರ್ಗೆಗೂ ಸಂಬಂಧವಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

ಪ್ರಕರಣದಲ್ಲಿ ಬಿಜೆಪಿಯ ಹೋರಾಟ, ಕಲಬುರ್ಗಿ ಪ್ರತಿಭಟನೆ, ಬಾಣಂತಿಯರ ಸರಣಿ ಸಾವು ಪ್ರಕರಣದಲ್ಲಿ ಸರ್ಕಾರದ ಲೋಪಗಳು, ನಿರ್ಲಕ್ಷ್ಯ, ಬಿಜೆಪಿ ಹೋರಾಟ ಕುರಿತು ತಿಳಿಸಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

11 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago