ಮೈಸೂರು: ಯದುವೀರ್ ಟಿಕೆಟ್ ಕೊಡುವುದು ನಿಜವಾದದರೆ ಅದನ್ನು ಸ್ವಾಗತಿಸುತ್ತೇನೆ. ಕಾರ್ಯಕರ್ತನಾಗಿ ಅವರ ಪರ ಕೆಲಸ ಮಾಡುತ್ತೇನೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರಮನೆಯ ಎಸಿ ರೂಂನಲ್ಲಿ ರಾಜನಾಗಿ ಇರುವ ಬದಲು ಪ್ರಜೆಗಳ ರೀತಿ ಬದುಕುಲು ಯದುವೀರ್ ಬಂದರೆ ಸ್ವಾಗತಿಸದೆ ಇರುವುದಕ್ಕೆ ಆಗುತ್ತಾ?. ರಾಜ – ಪ್ರಜೆ ನಡುವೆ ವ್ಯತ್ಯಾಸ ತೆಗೆದು ರಾಜರೇ ಪ್ರಜೆಗಳ ಜೊತೆ ಇರಲು ಬಂದರೆ ನನ್ನ ಸ್ವಾಗತ. ಅರಮನೆ ಆಸ್ತಿ ವಿಚಾರದಲ್ಲಿ ಸರ್ಕಾರದ ನಡುವೆ ವ್ಯಾಜ್ಯಗಳಿವೆ. ಅದರಲ್ಲಿ ಬಹುತೇಕ ಆಸ್ತಿಗಳು ಸಾರ್ವಜನಿಕರ ಬಳಕೆಯಲ್ಲಿವೆ. ಯದುವೀರ್ ಜನಪ್ರತಿನಿಧಿ ಆಗಿ ಅದನ್ನೆಲ್ಲಾ ಜನರಿಗೆ ಬಿಟ್ಟು ಕೊಡಿಸುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಹೋರಾಡಲು ರಾಜರು ಬೀದಿಗೆ ಬಂದ್ರೆ ಸಂತೋಷ: ಚಾಮುಂಡಿ ಬೆಟ್ಟದ ಮೇಲಿನ ಅರಮನೆ ಆವರಣದ ಒಳಗೆ ಪೈಪ್ ಲೈನ್ ಹಾಕಲು ಅರಮನೆ ವಿರೋಧಿಸಿದೆ. ಯದುವೀರ್ ಜನಪ್ರತಿನಿಧಿ ಆದರೆ ಆ ಸಮಸ್ಯೆ ಬಗೆಹರಿಯುತ್ತೆ. ಶ್ರೀ ರಾಜೇಂದ್ರ ಸ್ವಾಮೀಜಿ ಪ್ರತಿಮೆ ವಿಚಾರದಲ್ಲಿ ಅರಮನೆಯವರ ನ್ಯಾಯಾಲಯಕ್ಕೆ ಹೋಗಿದ್ದಾರೆ. ಯದುವೀರ್ ಈ ಸಮಸ್ಯೆ ಬಗೆಹರಿಸಿ ರಾಜೇಂದ್ರ ಶ್ರೀಗಳ ಪ್ರತಿಮೆ ಅನಾವರಣ ಮಾಡುತ್ತಾರೆ. ಅರಮನೆ ಒಳಗೆ ಆರಾಮಾಗಿ ಇದ್ದಂತ ವ್ಯಕ್ತಿ ಸಿದ್ದರಾಮಯ್ಯ ವಿರುದ್ಧ ಹೋರಾಟ ಮಾಡಲು ಬೀದಿಗೆ ಬಂದರೆ ನಮಗೆ ಸಂತೋಷ ಎಂದು ಹೇಳಿದರು.
ಮುಖಂಡರಿಗೆ ಸಿಂಹ ಧನ್ಯವಾದ: ಅರಮನೆ ವೈಭೋಗ ಬೇಕಾಗಿಲ್ಲ. ಜನರ ಜೊತೆ ಹೋರಾಟಕ್ಕೆ ಬರ್ತಿನಿ ಅಂತಾ ಹೊರಟಿದ್ದಾರೆ, ಅದಕ್ಕೆ ಸ್ವಾಗತ. ಪೊಲೀಸ್ ಠಾಣೆಗೆ ಬಂದು ನಮ್ಮ ಕಾರ್ಯಕರ್ತರ ಸಮಸ್ಯೆ ಬಗೆಹರಿಸಲು ರಾಜರು ಬಂದರೆ ಸಂತೋಷ ಅಲ್ವಾ?. ಸುಖದ ಸುಪತ್ತಿಗೆಯಲ್ಲಿ ಇದ್ದ ನಮ್ಮ ಮಹಾರಾಜರನ್ನು ಮನವೊಲಿಸಿ ರಾಜಕೀಯಕ್ಕೆ ತಂದ ನಮ್ಮ ಮುಖಂಡರಿಗೆ ಧನ್ಯವಾದ ಎಂದು ಸಿಂಹ ತಿಳಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…