Categories: ಉಡುಪಿ

ಯವ‌ ಕಾಂಗ್ರೆಸ್ ಅಧ್ಯಕ್ಷ ಹುದ್ದೆಯಿಂದ ಮಿಥುನ್ ರೈ ಸಹಿತ 18 ಯುವ ಕಾಂಗ್ರೆಸ್ ಪದಾಧಿಕಾರಿಗಳ ಅಮಾನತು

ಬೆಂಗಳೂರು: ಪಕ್ಷದ ಚಟುವಟಿಕೆ ಹಾಗು ಸಂಘಟನೆಯಲ್ಲಿ ನಿಷ್ಕ್ರಿಯತೆ ತೋರಿಸಿದ್ದಾರೆ ಎಂಬ ಕಾರಣಕ್ಕಾಗಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹುದ್ದೆಯಿಂದ ಅಮಾನತುಗೊಳಿಸಲಾಗಿದೆ.

ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿಲ್ಲ, ನೋಟೀಸು ನೀಡಿದ್ದಕ್ಕೆ ಉತ್ತರ ನೀಡಿಲ್ಲ ಹಾಗು ಪಕ್ಷದ ಸಭೆಗಳಿಗೆ ಹಾಜರಾಗುತ್ತಿಲ್ಲ ಎಂಬ ಕಾರಣಗಳಿಗಾಗಿ ಮಿಥುನ್ ರೈ ಸಹಿತ ರಾಜ್ಯದ 10 ಜಿಲ್ಲೆಗಳ ಯುವ ಕಾಂಗ್ರೆಸ್ ಅಧ್ಯಕ್ಷರನ್ನು, ರಾಜ್ಯ ಯುವ ಕಾಂಗ್ರೆಸ್ ನ ಎಂಟು ಮಂದಿ ಕಾರ್ಯದರ್ಶಿಗಳನ್ನು ಹಾಗು ರಾಜ್ಯ ಯುವ ಕಾಂಗ್ರೆಸ್ ನ ಒಬ್ಬ ಉಪಾಧ್ಯಕ್ಷರನ್ನು ಅಮಾನತು ಮಾಡಲಾಗಿದೆ ಎಂದು ರವೀಂದ್ರದಾಸ್ ತಿಳಿಸಿದ್ದಾರೆ.

ಮಿಥುನ್ ರೈ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮೂಡಬಿದ್ರೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಅಲ್ಲಿಂದ ಮಾಜಿ ಸಚಿವ ಅಭಯಚಂದ್ರ ಅವರಿಗೇ ಪಕ್ಷ ಮತ್ತೆ ಅವಕಾಶ ನೀಡಿತ್ತು. ಆದರೆ ಮೂಡಬಿದ್ರೆಯಿಂದ ಸ್ಪರ್ಧಿಸಲು ಸಾಕಷ್ಟು ತಯಾರಿ ಮಾಡಿಕೊಂಡಿದ್ದ ಮಿಥುನ್ ರೈ ಇದರಿಂದ ಬೇಸರಿಸಿಕೊಂಡಿದ್ದರು. ಇದೀಗ ಪಕ್ಷದ ಸಂಘಟನೆ ಮಾಡಬೇಕಾದ ಯುವ ಘಟಕವೇ ನಿಷ್ಕ್ರಿಯವಾಗಿದೆ ಎಂದು ಅವರನ್ನು ಹುದ್ದೆಯಿಂದ ಅಮಾನತು ಮಾಡಲಾಗಿದೆ..

ಪಕ್ಷ ಸಂಘಟನೆ ವಿಷಯದಲ್ಲಿ ನಿರ್ಲಕ್ಷ್ಯ ತೋರಿದ ಕಾರಣಕ್ಕೆ ಹಲವು ಬಾರಿ ನೋಟಿಸ್ನೀಡಿದರೂ ಇವರು ಉತ್ತರಿಸಿಲ್ಲ. ಹೀಗಾಗಿ ಕ್ರಮ ತೆಗೆದುಕೊಳ್ಳಲಾಗಿದೆಎಂದು ಅಮಾನತು ಆದೇಶದಲ್ಲಿ ಯುವ ಕಾಂಗ್ರೆಸ್ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರವೀಂದ್ರದಾಸ್ಸ್ಪಷ್ಟಪಡಿಸಿದ್ದಾರೆ.

Vishwa News 24

Recent Posts

ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ -vishwanews24

ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ ಕುಂದಾಪುರ: ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ…

23 minutes ago

ನಂದಿನಿ ಹಾಲಿನ ದರ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ -vishwanews24

ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ…

52 minutes ago

ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ -vishwanews24

ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ ನವದೆಹಲಿ/ಉಡುಪಿ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ…

1 hour ago

ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್‌ ಠಾಣಾ…

1 hour ago

ವಂದೇ ಮಾತರಂ ಹಾಡುವುದು ಕಡ್ಡಾಯವಲ್ಲ, ಹಾಡದಿದ್ದರೆ ಶಿಕ್ಷೆ ಇಲ್ಲ :  ಕೇಂದ್ರಕ್ಕೆ ಸುಪ್ರೀಂ ಮಹತ್ವದ ಸೂಚನೆ -vishwanews24

ವಂದೇ ಮಾತರಂ ಹಾಡುವುದು ಕಡ್ಡಾಯವಲ್ಲ, ಹಾಡದಿದ್ದರೆ ಶಿಕ್ಷೆ ಇಲ್ಲ :  ಕೇಂದ್ರಕ್ಕೆ ಸುಪ್ರೀಂ ಮಹತ್ವದ ಸೂಚನೆ ನವದೆಹಲಿ : ವಂದೇ…

2 hours ago

ಮಂಗಳೂರು : ಅಕ್ರಮವಾಗಿ ಜಾನುವಾರುಗಳ ಹಿಂಸಾತ್ಮಕ ಸಾಗಾಟ: 17 ಜಾನುವಾರುಗಳ ರಕ್ಷಣೆ ; ಓರ್ವ ಬಂಧನ  -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರುಗಳ ಹಿಂಸಾತ್ಮಕ ಸಾಗಾಟ: 17 ಜಾನುವಾರುಗಳ ರಕ್ಷಣೆ ; ಓರ್ವ ಬಂಧನ  ಮಂಗಳೂರು: ಅಕ್ರಮವಾಗಿ ಜಾನುವಾರುಗಳನ್ನು…

3 hours ago