ಬೆಂಗಳೂರು: ಪಕ್ಷದ ಚಟುವಟಿಕೆ ಹಾಗು ಸಂಘಟನೆಯಲ್ಲಿ ನಿಷ್ಕ್ರಿಯತೆ ತೋರಿಸಿದ್ದಾರೆ ಎಂಬ ಕಾರಣಕ್ಕಾಗಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹುದ್ದೆಯಿಂದ ಅಮಾನತುಗೊಳಿಸಲಾಗಿದೆ.
ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿಲ್ಲ, ನೋಟೀಸು ನೀಡಿದ್ದಕ್ಕೆ ಉತ್ತರ ನೀಡಿಲ್ಲ ಹಾಗು ಪಕ್ಷದ ಸಭೆಗಳಿಗೆ ಹಾಜರಾಗುತ್ತಿಲ್ಲ ಎಂಬ ಕಾರಣಗಳಿಗಾಗಿ ಮಿಥುನ್ ರೈ ಸಹಿತ ರಾಜ್ಯದ 10 ಜಿಲ್ಲೆಗಳ ಯುವ ಕಾಂಗ್ರೆಸ್ ಅಧ್ಯಕ್ಷರನ್ನು, ರಾಜ್ಯ ಯುವ ಕಾಂಗ್ರೆಸ್ ನ ಎಂಟು ಮಂದಿ ಕಾರ್ಯದರ್ಶಿಗಳನ್ನು ಹಾಗು ರಾಜ್ಯ ಯುವ ಕಾಂಗ್ರೆಸ್ ನ ಒಬ್ಬ ಉಪಾಧ್ಯಕ್ಷರನ್ನು ಅಮಾನತು ಮಾಡಲಾಗಿದೆ ಎಂದು ರವೀಂದ್ರದಾಸ್ ತಿಳಿಸಿದ್ದಾರೆ.
ಮಿಥುನ್ ರೈ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮೂಡಬಿದ್ರೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಅಲ್ಲಿಂದ ಮಾಜಿ ಸಚಿವ ಅಭಯಚಂದ್ರ ಅವರಿಗೇ ಪಕ್ಷ ಮತ್ತೆ ಅವಕಾಶ ನೀಡಿತ್ತು. ಆದರೆ ಮೂಡಬಿದ್ರೆಯಿಂದ ಸ್ಪರ್ಧಿಸಲು ಸಾಕಷ್ಟು ತಯಾರಿ ಮಾಡಿಕೊಂಡಿದ್ದ ಮಿಥುನ್ ರೈ ಇದರಿಂದ ಬೇಸರಿಸಿಕೊಂಡಿದ್ದರು. ಇದೀಗ ಪಕ್ಷದ ಸಂಘಟನೆ ಮಾಡಬೇಕಾದ ಯುವ ಘಟಕವೇ ನಿಷ್ಕ್ರಿಯವಾಗಿದೆ ಎಂದು ಅವರನ್ನು ಹುದ್ದೆಯಿಂದ ಅಮಾನತು ಮಾಡಲಾಗಿದೆ..
‘ಪಕ್ಷ ಸಂಘಟನೆ ವಿಷಯದಲ್ಲಿ ನಿರ್ಲಕ್ಷ್ಯ ತೋರಿದ ಕಾರಣಕ್ಕೆ ಹಲವು ಬಾರಿ ನೋಟಿಸ್ ನೀಡಿದರೂ ಇವರು ಉತ್ತರಿಸಿಲ್ಲ. ಹೀಗಾಗಿ ಈ ಕ್ರಮ ತೆಗೆದುಕೊಳ್ಳಲಾಗಿದೆ’ ಎಂದು ಅಮಾನತು ಆದೇಶದಲ್ಲಿ ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರವೀಂದ್ರದಾಸ್ ಸ್ಪಷ್ಟಪಡಿಸಿದ್ದಾರೆ.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…