Featured

ಯಶಸ್ವಿನಿ ಯೋಜನೆ’ ಹೊಸ ಸದಸ್ಯರ ನೋಂದಣಿಗೆ ಅವಧಿ ವಿಸ್ತರಣೆ – VIshwanews24

ಯಶಸ್ವಿನಿ ಯೋಜನೆ’ ಹೊಸ ಸದಸ್ಯರ ನೋಂದಣಿಗೆ ಅವಧಿ ವಿಸ್ತರಣೆ

ಬೆಂಗಳೂರು: ಯಶಸ್ವಿನಿ ಆರೋಗ್ಯ ರಕ್ಷಾ ಯೋಜನೆಯನ್ನು ಪರಿಷ್ಕರಿಸಿ ಮರು ಜಾರಿ ಮಾಡಿ ರಾಜ್ಯ ಸರ್ಕಾರ  ಆದೇಶ ಹೊರಡಿಸಿದ್ದು, ಇದೇ ವೇಳೆ ದಿನಾಂಕವನ್ನು ವಿಸ್ತರಣೆ ಮಾಡಿ ಆದೇಶವನ್ನು ಹೊರಡಿಸಿದೆ.

ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯ ಹೊಸ ಸದಸ್ಯರನ್ನು ನೋಂದಾಯಿಸುವ ಅವಧಿಯನ್ನು ಮಾರ್ಚ್.31ರವರೆಗೆ ವಿಸ್ತರಿಸಲಾಗಿದೆ.

ಹಲವು ಸಹಕಾರಿಗಳು, ಶಾಸಕರು, ವಿಧಾನಪರಿಷತ್ ಸದಸ್ಯರ ಕೋರಿಕೆ ಮೇರೆಗೆ ರಾಜ್ಯ ಸರ್ಕಾರ ಈ ಹಿಂದೆ ಫೆ.28 ರವರೆಗೆ ಹೊಸ ಸದಸ್ಯರನ್ನು ನೋಂದಾಯಿಸುವ ಅವಕಾಶ ವಿಸ್ತರಿಸಿತ್ತು. ಈ ಬಳಿಕ ಇಂದು ಮಾರ್ಚ್ 31ರವರೆಗೆ ವಿಸ್ತರಿಸಲಾಗಿದೆ ಎಂದು ಸಹಕಾರ ಇಲಾಖೆ, ಆದೇಶದಲ್ಲಿ ತಿಳಿಸಿದೆ. ಪ್ರಸಕ್ತ ಸಾಲಿಗೆ, 30 ಲಕ್ಷ ಸದಸ್ಯರನ್ನು ನೋಂದಾಯಿಸುವ ಗುರಿ ಹೊಂದಲಾಗಿದೆ. ಹೀಗಾಗಿ ಈ ಅವಧಿಯನ್ನು, ಒಂದು ತಿಂಗಳು ವಿಸ್ತರಿಸಿರುವುದಾಗಿ ಇಲಾಖೆ ಹೇಳಿದೆ.

ಅಂದ ಹಾಗೇ ಈ ಯೋಜನೆ ಅಡಿಯಲ್ಲಿ, ಈ ಯೋಜನೆಯಡಿ ಯಶಸ್ವಿನಿ ನೆಟ್ ವರ್ಕ್ ಆಸ್ಪತ್ರೆಗಳಲ್ಲಿ ಒಂದು ಕುಟುಂಬಕ್ಕೆ 5 ಲಕ್ಷ ರೂ. ವರೆಗಿನ ವೆಚ್ಚದಲ್ಲಿ ನಗದು ರಹಿತ ಚಿಕಿತ್ಸೆ ಪಡೆಯಬಹುದು. ರಾಜ್ಯ ಸರ್ಕಾರವು ಇದಕ್ಕಾಗಿ ಪ್ರಸಕ್ತ ಆಯವ್ಯಯದಲ್ಲಿ 300 ಕೋಟಿ ರೂ. ಅನುದಾನ ನಿಗದಿ ಪಡಿಸಿದೆ.

ಗ್ರಾಮೀಣ ಸಹಕಾರ ಸಂಘಗಳ, ಸ್ವ-ಸಹಾಯ ಗುಂಪುಗಳ ಗರಿಷ್ಟ ನಾಲ್ಕು ಸದಸ್ಯರ ಕುಟುಂಬ ಒಂದಕ್ಕೆ ವಾರ್ಷಿಕ ರೂ.500/- ಗಳ ವಂತಿಗೆ ಮತ್ತು ಹೆಚ್ಚುವರಿ ಪ್ರತಿಯೊಬ್ಬ ಸದಸ್ಯರಿಗೆ ರೂ.100/-ಗಳನ್ನು ಪಾವತಿಸಬೇಕು. ನಗರ ಸಹಕಾರ ಸಂಘಗಳ ಗರಿಷ್ಠ ನಾಲ್ಕು ಸದಸ್ಯರ ಕುಟುಂಬ ಒಂದಕ್ಕೆ ರೂ.1,000/- ಗಳ ವಂತಿಗೆ ಮತ್ತು ಹೆಚ್ಚುವರಿ ಪ್ರತಿಯೊಬ್ಬ ಸದಸ್ಯರಿಗೆ ರೂ.200/- ಗಳನ್ನು ಪಾವತಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸದಸ್ಯರಿಗೆ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ಸಹಾಯಧನ ನೀಡುವ ಮೂಲಕ ಅವರ ವಾರ್ಷಿಕ ಸದಸ್ಯತ್ವದ ವಂತಿಗೆಯನ್ನು ಸರ್ಕಾರವೇ ಭರಿಸುತ್ತದೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

7 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

8 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

8 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

9 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

9 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

9 hours ago