ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ – vishwanews24
ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ
ಸುರಪುರ : ಬಸ್ ಮತ್ತು ಕಾರಿನ ಮಧ್ಯೆ ಉಂಟಾದ ಭೀಕರ ಅಪಘಾತದಲ್ಲಿ6 ಮಂದಿ ಸಜೀವ ದಹನವಾಗಿರುವ ಘಟನೆ ತಾಲೂಕಿನ ತಿಂಥಣಿ ಸೇತುವೆ ಬಳಿಯ ಶಾಂತಪುರ ಕ್ರಾಸ್ ಹತ್ತಿರ ಬೀದರ್ ಬೆಂಗಳೂರು ಹೆದ್ದಾರಿಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಲಿಂಗಸುಗೂರಿನಿಂದ ಕಲಬುರ್ಗಿ ಕಡೆಗೆ ಹೊರಟಿದ್ದ ಖಾಸಗಿ ಬಸ್ ಹಾಗೂ ಲಿಂಗಸುಗೂರು ಕಡೆಗೆ ಬರುತ್ತಿದ್ದ ಕಾರಿನ ಮಧ್ಯೆ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಢಿಕ್ಕಿಯ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದ್ದು ಕಾರು ಮತ್ತು ಬಸ್ ಸಂಪೂರ್ಣ ಸುಟ್ಟು ಕರಕಲಾಗಿವೆ.
ಇದನ್ನೂ ಓದಿ :
ಚಿಕನ್ ಪ್ರಿಯರೇ ಎಚ್ಚರ : ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ – vishwanews24
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲರೂ ಸುಟ್ಟು ಕರಕಲಾಗಿದ್ದು, ಸ್ಥಳದಲ್ಲಿರುವವರು ನೀಡಿರುವ ಮಾಹಿತಿ ಪ್ರಕಾರ ಆರು ಜನ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.
ಆದರೆ ಸುಟ್ಟ ಅವಶೇಷಗಳ ಮಧ್ಯೆ ನಾಲ್ಕು ಜನರ ತಲೆ ಬುರುಡೆಗಳು ಪತ್ತೆಯಾಗಿದ್ದು ಇನ್ನೂ ಇಬ್ಬರ ಮೃತ ದೇಹಗಳ ಹುಡುಕಾಟ ನಡೆಯುತ್ತಿದೆ. ಕಾರಿನಲ್ಲಿ ಆರು ಜನ ಪ್ರಯಾಣಿಸುತ್ತಿದ್ದರಾ ಅಥವಾ ನಾಲ್ಕೇ ಜನರು ಮಾತ್ರ ಇದ್ದರಾ ಎನ್ನುವುದು ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ.
ಖಾಸಗಿ ಬಸ್ಸಿನಲ್ಲಿದ್ದ ಯಾರಿಗೂ ಕೂಡ ಯಾವುದೇ ರೀತಿಯ ಜೀವ ಹಾನಿ ಸಂಭವಿಸಿಲ್ಲ. ಆದರೆ ಕಾರಿನಲ್ಲಿರುವ ಎಲ್ಲರೂ ಸಂಪೂರ್ಣ ಸುಟ್ಟು ಕರಕಲಾಗಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ :
ಕಾಪು : ಕಾರು-ಲಾರಿ ಮಧ್ಯೆ ಭೀಕರ ಅಪಘಾತ – ಓರ್ವ ಸಾವು, ಇಬ್ಬರು ಗಂಭೀರ – vishwanews24
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಿದ್ದಾರೆ. ಸುರಪುರ ಠಾಣೆಯ ಪಿ.ಐ ಉಮೇಶ ಎಂ ಸೇರಿದಂತೆ ಸಿಬ್ಬಂದಿಗಳು ಕೂಡ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
