ಯಾದಗಿರಿ : ಉಪಹಾರದಲ್ಲಿ ಹಾವು ಪತ್ತೆಯಾಗಿದ್ದು ಇದೇ ಉಪಹಾರ ಸೇವಿಸಿ 52 ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಜಿಲ್ಲಾಸ್ಪತ್ರೆ ಸೇರಿರುವ ಘಟನೆ ಯಾದಗಿರಿ ತಾಲೂಕಿನ ಅಬ್ಬೆತುಮಕೂರನ ವಿಶ್ವರಾಧ್ಯ ವಿದ್ಯಾವರ್ಧಕ ವಸತಿ ಶಾಲೆಯಲ್ಲಿ ನಡೆದಿದೆ.
ಇಂದು ಬೆಳಿಗ್ಗೆ ಉಪಹಾರವಾಗಿ ವಿದ್ಯಾರ್ಥಿಗಳು ಉಪ್ಪಿಟ್ಟು ಸೇವಿಸಿ ಅಸ್ವಸ್ಥಗೊಂಡಿದ್ದಾರೆ. ಇನ್ನು ಉಪಹಾರದಲ್ಲಿ ಸತ್ತ ಹಾವಿನ ಮರಿ ಪತ್ತೆಯಾಗಿದೆ. ಇತ್ತ ಹಾವಿನ ಮರಿ ಪತ್ತೆಯಾದ ನಂತರ ವಿದ್ಯಾರ್ಥಿಗಳು ಇನ್ನು ಹೆಚ್ಚು ಆತಂಕಗೊಂಡಿದ್ದಾರೆ.
ಸದ್ಯ ಅಸ್ವಸ್ಥಗೊಂಡ 52 ವಿದ್ಯಾರ್ಥಿಗಳಿಗೆ ಮುದ್ನಾಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಹೆಚ್ಚಿನ ಚಿಕಿತ್ಸೆ ಪಡೆಯಲು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಆಸ್ಪತ್ರೆಗೆ ಟಿಹೆಚ್ಓ ಹಣಮಂತರೆಡ್ಡಿ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿ ವಿದ್ಯಾರ್ಥಿಗಳಿಗೆ ಸದ್ಯಕ್ಕೆ ಯಾವುದೇ ತೊಂದರೆ ಇಲ್ಲ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹಣಮಂತರೆಡ್ಡಿ ಮಾಹಿತಿ ನೀಡಿದ್ದಾರೆ.
ಶಾಸಕರ ಭೇಟಿ: ಸ್ಥಳೀಯ ಶಾಸಕ ವೆಂಕಟರೆಡ್ಡಿ ಮುದ್ನಾಳ ಅವರು ವಿಷಯ ತಿಳಿಯುತ್ತಲೇ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು. ನಂತರ ವೈದ್ಯರಿಂದ ಮಾಹಿತಿ ಪಡೆದ ಅವರು, ಸದ್ಯಕ್ಕೆ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರಾಗಿಲ್ಲ. ಬಹುಶಃ ಉಪ್ಪಿಟ್ಟು ನಲ್ಲಿ ಪತ್ತೆಯಾಗಿರುವ ಹಾವಿನ ಮರಿ ಸತ್ತದ್ದಾಗಿದೆ. ಉಪಾಹಾರ ತಯಾರಿಸುವ ವೇಳೆ ಸ್ವಚ್ಛತೆ ಕಾಪಾಡ ಕಾರಣ ಇದು ಸಂಭವಿಸಿರುವ ಸಾಧ್ಯತೆ ಇದೆ ಎಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.
‘ಮುಂದೆಯೂ ವಸತಿ ಶಾಲೆಗಳಿಗೆ ದಿಢೀರ್ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆ ಪರಿಶೀಲನೆ ಮಾಡಲಾಗುವುದು. ಈಗಾಗಲೇ ಹಲವು ವಸತಿನಿಲಯಗಳಿಗೆ ಭೇಟಿ ನೀಡಲಾಗಿದೆ’ ಎಂದರು.
ಇದಕ್ಕೂ ಮೊದಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು.
ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಸಂಜೀವಕುಮಾರ ರಾಯಚೂರಕರ್ ಮಾತನಾಡಿ, ‘ಉಪಾಹಾರ ಸೇವಿಸಿದ ವಿದ್ಯಾರ್ಥಿಗಳ ಆರೋಗ್ಯ ಮೇಲೆ ನಿಗಾ ಇರಿಸಲಾಗಿದೆ. ಯಾರಿಗೂ ಜೀವಕ್ಕೆ ಅಪಾಯವಿಲ್ಲ. ಮಕ್ಕಳ ನಿಗಾ ಘಟಕದಲ್ಲಿ ಆರೈಕೆ ಮಾಡಲಾಗುತ್ತಿದೆ’ ಎಂದು ತಿಳಿಸಿದರು.
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…
ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…
ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…
ಪರ್ಕಳ: ಹೆದ್ದಾರಿಯಲ್ಲಿ ಕಂಟೇನರ್ ಲಾರಿ ಪಲ್ಟಿ: ತಪ್ಪಿದ ದುರಂತ ಮಣಿಪಾಲ: ಪರ್ಕಳದ ಕೆಳಪರ್ಕಕಳ ಹೆದ್ದಾರಿಯಲ್ಲಿ ಕೆನರಾ ಬ್ಯಾಂಕಿನ ತಿರುವಿನಲ್ಲಿ ಕಂಟೇನರ್…
ಉಡುಪಿ: ಮೂವರು ರೌಡಿ ಶೀಟರ್‌ಗಳ ಗಡಿಪಾರು : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಉಡುಪಿ: ಉಡುಪಿ ಜಿಲ್ಲೆಯ ವಿವಿಧ ಪೊಲೀಸ್…