ಬೆಂಗಳೂರು: ಅಖಿಲ ಭಾರತ ಕಾಂಗ್ರೆಸ್ ಸಮಿತಿ(ಎಐಸಿಸಿ) ಅಧ್ಯಕ್ಷ ಗಾದಿಯಲ್ಲಿ ಯಾರನ್ನು ಕೂರಿಸುವುದು ಎನ್ನುವ ಬಗ್ಗೆ ತೀವ್ರ ಕುತೂಹಲಕಾರಿ ಬೆಳವಣಿಗೆಗಳು ನಡೆಯುತ್ತಿವೆ. ಮಧ್ಯಂತರ ಅಧ್ಯಕ್ಷೆ ಆಗಿರುವ ಸೋನಿಯಾ ಗಾಂಧಿ ಅವರ ಅವಧಿ ಈಗಾಗಲೇ ಮುಕ್ತಾಯಗೊಂಡಿದೆ. ಇಂದು ನವದೆಹಲಿಯಲ್ಲಿ, ಪಕ್ಷದ ಅತ್ಯುನ್ನತ ನೀತಿ ನಿರ್ಧಾರ ಮಂಡಳಿಯಾಗಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ.
ಕೋವಿಡ್ 19 ಹಿನ್ನೆಲೆಯಲ್ಲಿ ಆನ್ಲೈನ್ ಮೂಲಕ ವರ್ಚುವಲ್ ಸಭೆ ನಡೆಯುತ್ತಿದೆ. ಸಭೆಯಲ್ಲಿ ಸೋನಿಯಾ ಗಾಂಧಿಯವರೇ ಎಐಸಿಸಿ ಅಧ್ಯಕ್ಷರಾಗಿ ಮುಂದುವರಿಯಬೇಕೆಂದು ಸದಸ್ಯರಿಂದ ಒತ್ತಾಯ ಕೇಳಿಬರುವ ಸಾಧ್ಯತೆ ಇದೆ. ಹಾಗೇ ಸೋನಿಯಾ ಗಾಂಧಿ ಅಧ್ಯಕ್ಷ ಸ್ಥಾನ ಹಸ್ತಾಂತರಕ್ಕೆ ಮನಸ್ಸು ಮಾಡಿದರೆ ರಾಹುಲ್ ಗಾಂಧಿ ಅಧ್ಯಕ್ಷರಾಗಲಿ ಎಂಬ ಅಭಿಪ್ರಾಯ ವ್ಯಕ್ತವಾಗಲಿದೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಇಬ್ಬರೂ ಅಚಲ ನಿರ್ಧಾರ ಮಾಡಿ ಅಧ್ಯಕ್ಷ ಸ್ಥಾನ ನಿರಾಕರಿಸಿದರಷ್ಟೇ ಪರ್ಯಾಯ ಹೆಸರು ಪರಿಗಣಿಸಲಾಗುತ್ತದೆ ಎನ್ನಲಾಗ್ತಿದೆ.
ಕಾಂಗ್ರೆಸ್ ಪಕ್ಷಕ್ಕೆ ಗಾಂಧಿ ಕುಟುಂಬಯೇತರು ಅಧ್ಯಕ್ಷರಾಗಬೇಕು ಎಂದು ಪ್ರಿಯಾಂಕ ಗಾಂಧಿ ಅವರು ಹೇಳಿದ್ದು, ಆ ಮೂಲಕ ಕಾಂಗ್ರೆಸ್ ನಾಯಕರ ಮಧ್ಯೆ ಅಧ್ಯಕ್ಷರು ಯಾರಾಗಬೇಕು ಎಂಬುದರ ಬಗ್ಗೆ ಗೊಂದಲ ಹೆಚ್ಚಿದೆ. ಪಂಜಾಬ್ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್, ತಿರುವನಂತಪುರದದ ಸಂಸದ ಶಶಿ ತರೂರ್ ಪರ ಪ್ರಿಯಾಂಕಾ ಗಾಂಧಿ ಒಲವು ವ್ಯಕ್ತಪಡಿಸಿದ್ದರೆ. ಇತ್ತ ಮಲ್ಲಕಾರ್ಜುನ ಖರ್ಜೆ ಕೂಡ ಈ ಸಾಲಿನಲ್ಲಿ ಗುರುತಿಸಿಕೊಂಡಿದ್ದಾರೆ. ಆದರೆ ಮನೀಶ್ ತಿವಾರಿ ಸೇರಿದಂತೆ ಕೆಲ ನಾಯಕರು ಪಕ್ಷದ ಒಳಗಡೆ ಒಂದು ಚುನಾವಣೆ ನಡೆಸಿ ಆಯ್ಕೆ ಮಾಡಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…