Featured

ಯಾರಾಗಲಿದ್ದಾರೆ ಕಾಂಗ್ರೆಸ್ ನೂತನ ಸಾರಥಿ? Vishwanews24

ಯಾರಾಗಲಿದ್ದಾರೆ ಕಾಂಗ್ರೆಸ್ ನೂತನ ಸಾರಥಿ? Vishwanews24

ಬೆಂಗಳೂರು: ಅಖಿಲ ಭಾರತ ಕಾಂಗ್ರೆಸ್ ಸಮಿತಿ(ಎಐಸಿಸಿ) ಅಧ್ಯಕ್ಷ ಗಾದಿಯಲ್ಲಿ ಯಾರನ್ನು ಕೂರಿಸುವುದು ಎನ್ನುವ ಬಗ್ಗೆ ತೀವ್ರ ಕುತೂಹಲಕಾರಿ ಬೆಳವಣಿಗೆಗಳು ನಡೆಯುತ್ತಿವೆ. ಮಧ್ಯಂತರ ಅಧ್ಯಕ್ಷೆ ಆಗಿರುವ ಸೋನಿಯಾ ಗಾಂಧಿ ಅವರ ಅವಧಿ ಈಗಾಗಲೇ ಮುಕ್ತಾಯಗೊಂಡಿದೆ. ಇಂದು ನವದೆಹಲಿಯಲ್ಲಿ, ಪಕ್ಷದ ಅತ್ಯುನ್ನತ ನೀತಿ ನಿರ್ಧಾರ ಮಂಡಳಿಯಾಗಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ.

ಕೋವಿಡ್ 19 ಹಿನ್ನೆಲೆಯಲ್ಲಿ ಆನ್​​ಲೈನ್ ಮೂಲಕ ವರ್ಚುವಲ್ ಸಭೆ ನಡೆಯುತ್ತಿದೆ. ಸಭೆಯಲ್ಲಿ ಸೋನಿಯಾ ಗಾಂಧಿಯವರೇ ಎಐಸಿಸಿ ಅಧ್ಯಕ್ಷರಾಗಿ ಮುಂದುವರಿಯಬೇಕೆಂದು ಸದಸ್ಯರಿಂದ ಒತ್ತಾಯ ಕೇಳಿಬರುವ ಸಾಧ್ಯತೆ ಇದೆ. ಹಾಗೇ ಸೋನಿಯಾ ಗಾಂಧಿ ಅಧ್ಯಕ್ಷ ಸ್ಥಾನ ಹಸ್ತಾಂತರಕ್ಕೆ ಮನಸ್ಸು ಮಾಡಿದರೆ ರಾಹುಲ್ ಗಾಂಧಿ ಅಧ್ಯಕ್ಷರಾಗಲಿ ಎಂಬ ಅಭಿಪ್ರಾಯ ವ್ಯಕ್ತವಾಗಲಿದೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಇಬ್ಬರೂ ಅಚಲ ನಿರ್ಧಾರ ಮಾಡಿ‌ ಅಧ್ಯಕ್ಷ ಸ್ಥಾನ ನಿರಾಕರಿಸಿದರಷ್ಟೇ ಪರ್ಯಾಯ ಹೆಸರು ಪರಿಗಣಿಸಲಾಗುತ್ತದೆ ಎನ್ನಲಾಗ್ತಿದೆ.

ಕಾಂಗ್ರೆಸ್ ಪಕ್ಷಕ್ಕೆ ಗಾಂಧಿ ಕುಟುಂಬಯೇತರು ಅಧ್ಯಕ್ಷರಾಗಬೇಕು ಎಂದು ಪ್ರಿಯಾಂಕ ಗಾಂಧಿ ಅವರು ಹೇಳಿದ್ದು, ಆ ಮೂಲಕ ಕಾಂಗ್ರೆಸ್ ನಾಯಕರ ಮಧ್ಯೆ ಅಧ್ಯಕ್ಷರು ಯಾರಾಗಬೇಕು ಎಂಬುದರ ಬಗ್ಗೆ ಗೊಂದಲ ಹೆಚ್ಚಿದೆ. ಪಂಜಾಬ್ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್, ತಿರುವನಂತಪುರದದ ಸಂಸದ ಶಶಿ ತರೂರ್ ಪರ ಪ್ರಿಯಾಂಕಾ ಗಾಂಧಿ ಒಲವು ವ್ಯಕ್ತಪಡಿಸಿದ್ದರೆ. ಇತ್ತ ಮಲ್ಲಕಾರ್ಜುನ ಖರ್ಜೆ ಕೂಡ ಈ ಸಾಲಿನಲ್ಲಿ ಗುರುತಿಸಿಕೊಂಡಿದ್ದಾರೆ. ಆದರೆ ಮನೀಶ್ ತಿವಾರಿ ಸೇರಿದಂತೆ ಕೆಲ ನಾಯಕರು ಪಕ್ಷದ ಒಳಗಡೆ ಒಂದು ಚುನಾವಣೆ ನಡೆಸಿ ಆಯ್ಕೆ ಮಾಡಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

5 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

5 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

5 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

5 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

5 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

6 hours ago