ವಿಜಯಪುರ: ಈ ಬಾರಿ 28 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ. ಮತದಾರರು ಮೋದಿಯವರನ್ನ ಗೆಲ್ಲಿಸಲು ತುದಿಗಾಲ ಮೇಲೆ ನಿಂತಿದ್ದಾರೆ. ಅಭಿವೃದ್ಧಿ ಆಧಾರದ ಮೇಲೆ ಮತ ಕೇಳ್ತೇವೆ. ನಮ್ಮ ಕ್ಷೇತ್ರದಲ್ಲಿಯೂ ಅಭಿವೃದ್ಧಿ ಆಧಾರದ ಮೇಲೆ ಓಟು ಕೇಳ್ತೇವೆ. ಯಾರಿಗೆ ಟಿಕೇಟ್ ಕೊಟ್ಟರು ಕೆಲಸ ಮಾಡ್ತೇವೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ, ಟಿಕೇಟ್ ವಿಚಾರದಲ್ಲಿ ಗೊಂದಲ ಇರೋದು ನಿಜ. ನಮ್ಮದು ಸಂಘ ಪರಿವಾರ ಗಟ್ಟಿ ಇರುವ ಜಿಲ್ಲೆ. ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಯಾರಿಗೆ ಟಿಕೇಟ್ ಕೊಟ್ಟರು ಗೆಲ್ಲಬಹುದು. ಹೀಗಾಗಿ ಬೇರೆಯವರು ಟಿಕೇಟ್ ಕೇಳ್ತಿದ್ದಾರೆ. ನನಗೆ ಎರಡು ಬಾರಿ ಟಿಕೇಟ್ ಕೊಟ್ಟಿದ್ದಾರೆ. ನನ್ನ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದೇನೆ. ಇನ್ನೊಬ್ಬರಿಗೆ ಅವಮಾನ ಮಾಡಿ ಟಿಕೇಟ್ ಕೇಳಬಾರದು. ಅದು ನನ್ನ ಕ್ಷೇತ್ರದಲ್ಲಿ ನಡೆಯುತ್ತಿದೆ ಎಂದು ಕೇಂದ್ರ ಸಚಿವೆ ಆರೋಪಿಸಿದ್ದಾರೆ.
ಬೇಸರ ಹೊರಹಾಕಿದ ಶೋಭಾ ಕರಂದ್ಲಾಜೆ. ಟಿಕೇಟ್ ತೆಗೆದುಕೊಳ್ಳಲು ನನ್ನ ವಿರುದ್ಧ ಷಡ್ಯಂತ್ರ ಮಾಡ್ತಿದ್ದಾರೆ. ನನ್ನ ವಿರುದ್ಧ ಕಾರ್ಯಕರ್ತರು ಅಲ್ಲ ವ್ಯವಸ್ಥಿತವಾಗಿ ಒಂದು ಗುಂಪು ವಿರೋಧ ಮಾಡ್ತಿದೆ. ಇದರಿಂದ ನಾನು ವಿಚಲಿತಳಾಗಿಲ್ಲ ಎಂದು ಹೇಳಿದ್ದಾರೆ.
ಟಿಕೇಟ್ ನೀಡೋದು ಹೈಕಮಾಂಡ್ ಗೆ ಬಿಟ್ಟಿದ್ದು. ಸರ್ವೆ ಮಾಡಿ ಟಿಕೇಟ್ ಕೊಡ್ತಾರೆ. ಟಿಕೆಟ್ ಸಿಗಲಿ ಬಿಡಲಿ, ಮೋದಿ ಗೆಲ್ಲಿಸೋದು ನಮ್ಮ ಗುರಿ ಎಂದ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಘೋಷಿತ ಅಭ್ಯರ್ಥಿ ಪರವಾಗಿ ಕೆಲ್ಸ ಮಾಡ್ತೀನಿ
ಘೋಷಿತ ಅಭ್ಯರ್ಥಿ ಪರವಾಗಿ ಕೆಲ್ಸ ಮಾಡ್ತೀನಿ. ಯುಪಿಎ ಸರ್ಕಾರ ಗೊಟಾಲಾ ಸರ್ಕಾರ ಎನ್ನುವ ಪರಿಸ್ಥಿತಿ. ವಿದೇಶಗಳಲ್ಲಿ ಪ್ರಧಾನಿಗಳಿಗೆ ಎದ್ದುನಿಂತು ಮರ್ಯಾದೆ ಕೊಡ್ತಿರಲಿಲ್ಲ, ನಮಗೆ ದುಃಖ ಎನಿಸುತ್ತಿತ್ತು. ದೇಶದ ಗಡಿ, ಆಂತರಿಕ ಭದ್ರತೆ, ಸ್ವಾವಲಂಬಿ ಸೈನ್ಯವಾಗಿಸುವ ನಿಟ್ಟಿನಲ್ಲಿ ಯೋಜನೆ ಜಾರಿಗೆ ತಂದಿದ್ದಾರೆ. ರಾಗಿ, ಜೋಳಕ್ಕೆ ಅಂತರಾಷ್ಟ್ರೀಯ ಮಾನ್ಯತೆ ಕೊಡಿಸಿದ್ದು ಮೋದಿ. ಪ್ರಪಂಚದ ಯಾವುದೇ ಮೂಲೆಗೆ ಹೋದರು ಮರ್ಯಾದೆ ಸಿಗುತ್ತಿದೆ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…