ಯಾರು ಏನೇ ಹೇಳಿದರೂ ಧರ್ಮ ದೊಡ್ಡದಾಗಿ ಬೆಳೆಸಿ ; ಧರ್ಮ ರಕ್ಷಣೆಗೆ ನಾವು ಸಿದ್ಧ : ಯದುವೀರ್ ಒಡೆಯರ್ – Vishwanews24

Featured, ರಾಜ್ಯ ನ್ಯೂಸ್

ಯಾರು ಏನೇ ಹೇಳಿದರೂ ಧರ್ಮ ದೊಡ್ಡದಾಗಿ ಬೆಳೆಸಿ

ಹಿಂದೂ ಧರ್ಮ ರಕ್ಷಣೆಗೆ ಮೈಸೂರು ಅರಮನೆ ಸದಾ ಸಿದ್ಧ

ಧರ್ಮ ರಕ್ಷಣೆಗೆ ಜಾತಿ-ಜಾತಿಗಳು ಒಗ್ಗಟ್ಟಾಗಬೇಕು..

ಚಾಮರಾಜನಗರ: ಹಿಂದೂ ಧರ್ಮ ರಕ್ಷಣೆಗೆ ಮೈಸೂರು ಅರಮನೆ ಹಿಂದೆಯೂ ಸದಾ ಸಿದ್ಧವಾಗಿತ್ತು, ಈಗಲೂ ಧರ್ಮ ರಕ್ಷಣೆಗೆ ನಾವು ಸಿದ್ಧವಾಗಿದ್ದೇವೆ ಎಂದು ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

ಚಾಮರಾಜನಗರದ ನಂದಿ ಭವನದಲ್ಲಿ ಆಯೋಜಿಸಿರುವ ಎಬಿವಿಪಿ 41ನೇ ರಾಜ್ಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ನಮ್ಮ ಸಮಾಜದಲ್ಲಿನ ಬಹುತೇಕ ಸಮಸ್ಯೆಗಳಿಗೆ ಹಿಂದೂ ಧರ್ಮದಲ್ಲೇ ಪರಿಹಾರ, ಉತ್ತರವಿದೆ. ಆದ್ದರಿಂದ‌ ಧರ್ಮ ರಕ್ಷಣೆ ಅಗತ್ಯವಾಗಿದೆ. ಧರ್ಮ ರಕ್ಷಣೆಗೆ ಜಾತಿ-ಜಾತಿಗಳು ಒಗ್ಗಟ್ಟಾಗಬೇಕು ಎಂದು ತಿಳಿಸಿದರು.

ಕಡಿಮೆ ಸಂಖ್ಯೆಯಲ್ಲಿದ್ದ ಬ್ರಿಟಿಷರು ಭಾರತವನ್ನು ಆಳಲು ಸಾಧ್ಯವಾಗಿದ್ದು ನಮ್ಮಲ್ಲಿ ಒಗ್ಗಟ್ಟಿಲ್ಲದ ಕಾರಣದಿಂದಾಗಿ. ಜಯ ಚಾಮರಾಜ ಒಡೆಯರ್ ವಿಶ್ವ ಹಿಂದೂ ಪರಿಷತ್‌ನ ಅದ್ಯಕ್ಷರಾಗಿದ್ದರು. ಜೊತೆಗೆ ಬೇಸಿಗೆ ಅರಮನೆಯಲ್ಲಿ ವಿಎಚ್‌ಪಿ ಸಮ್ಮೇಳನವೂ ನಡೆದಿತ್ತು ಎಂದು ನೆನಪಿಸಿಕೊಂಡರು.

ಇದನ್ನೂ ಓದಿ :

ಹಿಜಾಬ್ ವಿವಾದ : ಉಡುಪಿ ಎಂಜಿಎಂ ಪಿಯು ಕಾಲೇಜಿಗೆ ಇನ್ನೆರಡು ದಿನ ರಜೆ ಘೋಷಣೆ – Vishwanews24

ಧರ್ಮದ ಜೊತೆ ಪರಿಸರ ರಕ್ಷಣೆಗೂ ನಾವು ಆದ್ಯತೆ ಕೊಡಬೇಕು. ಇದಕ್ಕೆಲ್ಲಾ ಶಿಕ್ಷಣವೇ ಪರಿಹಾರ ಕೊಡಬೇಕು. ಶಿಕ್ಷಣದಿಂದಲೇ ಈ ಬಗ್ಗೆ ಜಾಗೃತಿ ಮಾಡಿಸಬೇಕಿದೆ ಎಂದು ಅಭಿಪ್ರಾಯಪಟ್ಟರು.

ಸಮ್ಮೇಳನಾಧ್ಯಕ್ಷೆ ಬಾಗೇಶ್ರೀ, ಎಬಿವಿಪಿ ರಾಷ್ಟ್ರೀಯ ಅಧ್ಯಕ್ಷ ಛಗನ್ಭಾಯಿ ಪಟೇಲ್, ರಾಜ್ಯಾಧ್ಯಕ್ಷ ವೀರೇಶ್ಬಾಳೇಕಾಯಿ, ಮೈಸೂರು ವಿವಿ ಕುಲಪತಿ ಪ್ರೊ.ಹೇಮಂತ್ಕುಮಾರ್, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಸುಬ್ಬಯ್ಯ ಅಯ್ಯಪ್ಪನ್ಸೇರಿದಂತೆ ರಾಜ್ಯದ ನಾನಾ ಭಾಗಗಳಿಂದ ಎಪಿಬಿವಿ ಸಂಘಟನೆಯ ಪದಾಧಿಕಾರಿಗಳು ಭಾಗವಹಿಸಿದ್ದರು.

ಇದನ್ನೂ ಓದಿ :

ಮಂಗಳೂರು: ಗೋಶಾಲೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ : ಡಾ. ರಾಜೇಂದ್ರ ಕೆ.ವಿ – Vishwanews24

Leave a Reply