ಚಾಮರಾಜನಗರ: ಹಿಂದೂ ಧರ್ಮ ರಕ್ಷಣೆಗೆ ಮೈಸೂರು ಅರಮನೆ ಹಿಂದೆಯೂ ಸದಾ ಸಿದ್ಧವಾಗಿತ್ತು, ಈಗಲೂ ಧರ್ಮ ರಕ್ಷಣೆಗೆ ನಾವು ಸಿದ್ಧವಾಗಿದ್ದೇವೆ ಎಂದು ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಚಾಮರಾಜನಗರದ ನಂದಿ ಭವನದಲ್ಲಿ ಆಯೋಜಿಸಿರುವ ಎಬಿವಿಪಿ 41ನೇ ರಾಜ್ಯ ಸಮ್ಮೇಳನದಲ್ಲಿ ಮಾತನಾಡಿದ ಅವರು, ನಮ್ಮ ಸಮಾಜದಲ್ಲಿನ ಬಹುತೇಕ ಸಮಸ್ಯೆಗಳಿಗೆ ಹಿಂದೂ ಧರ್ಮದಲ್ಲೇ ಪರಿಹಾರ, ಉತ್ತರವಿದೆ. ಆದ್ದರಿಂದ ಧರ್ಮ ರಕ್ಷಣೆ ಅಗತ್ಯವಾಗಿದೆ. ಧರ್ಮ ರಕ್ಷಣೆಗೆ ಜಾತಿ-ಜಾತಿಗಳು ಒಗ್ಗಟ್ಟಾಗಬೇಕು ಎಂದು ತಿಳಿಸಿದರು.
ಕಡಿಮೆ ಸಂಖ್ಯೆಯಲ್ಲಿದ್ದ ಬ್ರಿಟಿಷರು ಭಾರತವನ್ನು ಆಳಲು ಸಾಧ್ಯವಾಗಿದ್ದು ನಮ್ಮಲ್ಲಿ ಒಗ್ಗಟ್ಟಿಲ್ಲದ ಕಾರಣದಿಂದಾಗಿ. ಜಯ ಚಾಮರಾಜ ಒಡೆಯರ್ ವಿಶ್ವ ಹಿಂದೂ ಪರಿಷತ್‌ನ ಅದ್ಯಕ್ಷರಾಗಿದ್ದರು. ಜೊತೆಗೆ ಬೇಸಿಗೆ ಅರಮನೆಯಲ್ಲಿ ವಿಎಚ್‌ಪಿ ಸಮ್ಮೇಳನವೂ ನಡೆದಿತ್ತು ಎಂದು ನೆನಪಿಸಿಕೊಂಡರು.
ಇದನ್ನೂ ಓದಿ :
ಧರ್ಮದ ಜೊತೆ ಪರಿಸರ ರಕ್ಷಣೆಗೂ ನಾವು ಆದ್ಯತೆ ಕೊಡಬೇಕು. ಇದಕ್ಕೆಲ್ಲಾ ಶಿಕ್ಷಣವೇ ಪರಿಹಾರ ಕೊಡಬೇಕು. ಶಿಕ್ಷಣದಿಂದಲೇ ಈ ಬಗ್ಗೆ ಜಾಗೃತಿ ಮಾಡಿಸಬೇಕಿದೆ ಎಂದು ಅಭಿಪ್ರಾಯಪಟ್ಟರು.
ಸಮ್ಮೇಳನಾಧ್ಯಕ್ಷೆ ಬಾಗೇಶ್ರೀ, ಎಬಿವಿಪಿ ರಾಷ್ಟ್ರೀಯ ಅಧ್ಯಕ್ಷ ಛಗನ್ಭಾಯಿ ಪಟೇಲ್, ರಾಜ್ಯಾಧ್ಯಕ್ಷ ವೀರೇಶ್ಬಾಳೇಕಾಯಿ, ಮೈಸೂರು ವಿವಿ ಕುಲಪತಿ ಪ್ರೊ.ಹೇಮಂತ್ಕುಮಾರ್, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಸುಬ್ಬಯ್ಯ ಅಯ್ಯಪ್ಪನ್ಸೇರಿದಂತೆ ರಾಜ್ಯದ ನಾನಾ ಭಾಗಗಳಿಂದ ಎಪಿಬಿವಿ ಸಂಘಟನೆಯ ಪದಾಧಿಕಾರಿಗಳು ಭಾಗವಹಿಸಿದ್ದರು.
ಇದನ್ನೂ ಓದಿ :
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…