ಮಂಗಳೂರು: ನಾನು ಹರಿಯಾಣ ಉಸ್ತುವಾರಿಯಲ್ಲಿದ್ದ 8 ಕ್ಷೇತ್ರಗಳಲ್ಲಿ 22 ಸಾವಿರ ಮತಗಳ ಕಳವಾಗಿದೆ. ಎಲ್ಲ ಮತಗಟ್ಟೆ ಸಮೀಕ್ಷೆ ನಮ್ಮ ಪರ ಇತ್ತು. ಹಾಗಿದ್ದರೂ ನಾವು ಸೋತಿರುವುದಕ್ಕೆ ವೋಟರ್ ದಂಧೆಯೇ ಕಾರಣ. ಯಾರು ಕಾಂಗ್ರೆಸ್‌ಗೆ ಅಚಲವಾಗಿ ಮತ ಹಾಕುತ್ತಾರೋ ಅವರ ಮತಗಳನ್ನೇ ಕದಿಯಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಪಾದಿಸಿದರು.
ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಬಿಜೆಪಿಯವರು ಓಟ್ ಚೋರಿಗೆ ಖರ್ಚು ಕಮ್ಮಿ ಎಂದು ಅದಕ್ಕೆ ಕೈ ಹಾಕಿದ್ದಾರೆ. ಇಷ್ಟು ದಿನ ಶಾಸಕರ ಕಳವು ನಡೆಯುತ್ತಿತ್ತು. ಬಿಜೆಪಿ ಈವರೆಗೂ ಚುನಾವಣೆಯನ್ನು ವಾಮಮಾರ್ಗದಲ್ಲಿಯೇ ಗೆದ್ದಿದೆ ಎಂದರು.
ಜನಗಣಮನ ರಾಷ್ಟ್ರಗೀತೆ ಅಲ್ಲ ಎಂಬ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಈ ದೇಶದ್ರೋಹದ ಹೇಳಿಕೆಗೆ ಕೇಸು ದಾಖಲಿಸಬೇಕು. ಬಿಜೆಪಿಯವರು ರಾಷ್ಟ್ರಗೀತೆ ಹಾಗೂ ನೊಬೆಲ್ ಪುರಸ್ಕೃತ ರವೀಂದ್ರನಾಥ ಠಾಗೋರ್ ಅವರಿಗೆ ಅವಮಾನ ಮಾಡುತ್ತಿದ್ದಾರೆ. ಮಹಾತ್ಮಾ ಗಾಂಧಿ ಕೊಂದಾಯಿತು. ಈಗ ರಾಷ್ಟ್ರದ ಸಂಸ್ಕೃತಿ ಬಿಂಬಿಸಿದ ಠಾಗೋರ್ ಮೇಲೆ ದಾಳಿ ಮಾಡುತ್ತಿದ್ದಾರೆ. ಇದನ್ನು ನೋಡಿದಾಗ ಇವರು ದೇಶದ್ರೋಹಿಗಳು ಎನ್ನುವುದು ಸ್ಪಷ್ಟ ಎಂದರು.
ರಾಜ್ಯದಲ್ಲಿ ಆರೆಸ್ಸೆಸ್ ನಿಷೇಧ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿ, ಆರೆಸ್ಸೆಸ್ ಏನು ಅನ್ನುವುದು ಕೇರಳದಲ್ಲಿ ಗೊತ್ತಾಗಿದೆ. ಕಾಶ್ಮೀರದ ಕಟುವಾದಲ್ಲಿ ಬಾಲಕಿ ಮೇಲೆ ಅತ್ಯಾಚಾರ ನಡೆಸಲಾಗಿತ್ತು. ಆ ಪ್ರಕರಣದ ಆರೋಪಿಯ ಪರ ಬಿಜೆಪಿ ಸಚಿವರು ನಿಂತಿದ್ದರು. ಆರೆಸ್ಸೆಸ್‌ನಿಂದ ನಾವು ಕಲಿಯಬೇಕಾದದ್ದಿಲ್ಲ. 5 ಸಾವಿರ ವರ್ಷಗಳ ಇತಿಹಾಸದ ಸನಾತನ ಧರ್ಮಕ್ಕೆ ಆರೆಸ್ಸೆಸ್‌ನಿಂದ ಅಪಾಯವಿದೆ. ಈ ಹಿಂದೆ ತಾಲಿಬಾನ್ ವಿರೋಧಿಸಿದವರು ಈಗ ಅವರನ್ನೇ ಆಹ್ವಾನಿಸುತ್ತಿದ್ದು, 200 ಕೋಟಿ ರೂ. ಸಹಾಯಧನ ನೀಡುತ್ತಿದ್ದಾರೆ ಎಂದರು.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…