Featured

ಯಾರು ಕಾಂಗ್ರೆಸ್‌ಗೆ ಮತ ಹಾಕುತ್ತಾರೋ ಅವರ ಮತಗಳನ್ನೇ ಕದಿಯಲಾಗಿದೆ : ಬಿ.ಕೆ. ಹರಿಪ್ರಸಾದ್ – vishwanews24

ಯಾರು ಕಾಂಗ್ರೆಸ್‌ಗೆ ಮತ ಹಾಕುತ್ತಾರೋ ಅವರ ಮತಗಳನ್ನೇ ಕದಿಯಲಾಗಿದೆ : ಬಿ.ಕೆ. ಹರಿಪ್ರಸಾದ್

ಮಂಗಳೂರು: ನಾನು ಹರಿಯಾಣ ಉಸ್ತುವಾರಿಯಲ್ಲಿದ್ದ 8 ಕ್ಷೇತ್ರಗಳಲ್ಲಿ 22 ಸಾವಿರ ಮತಗಳ ಕಳವಾಗಿದೆ. ಎಲ್ಲ ಮತಗಟ್ಟೆ ಸಮೀಕ್ಷೆ ನಮ್ಮ ಪರ ಇತ್ತು. ಹಾಗಿದ್ದರೂ ನಾವು ಸೋತಿರುವುದಕ್ಕೆ ವೋಟರ್ ದಂಧೆಯೇ ಕಾರಣ. ಯಾರು ಕಾಂಗ್ರೆಸ್‌ಗೆ ಅಚಲವಾಗಿ ಮತ ಹಾಕುತ್ತಾರೋ ಅವರ ಮತಗಳನ್ನೇ ಕದಿಯಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಪಾದಿಸಿದರು.

ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಬಿಜೆಪಿಯವರು ಓಟ್ ಚೋರಿಗೆ ಖರ್ಚು ಕಮ್ಮಿ ಎಂದು ಅದಕ್ಕೆ ಕೈ ಹಾಕಿದ್ದಾರೆ. ಇಷ್ಟು ದಿನ ಶಾಸಕರ ಕಳವು ನಡೆಯುತ್ತಿತ್ತು. ಬಿಜೆಪಿ ಈವರೆಗೂ ಚುನಾವಣೆಯನ್ನು ವಾಮಮಾರ್ಗದಲ್ಲಿಯೇ ಗೆದ್ದಿದೆ ಎಂದರು.

ಜನಗಣಮನ ರಾಷ್ಟ್ರಗೀತೆ ಅಲ್ಲ ಎಂಬ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಈ ದೇಶದ್ರೋಹದ ಹೇಳಿಕೆಗೆ ಕೇಸು ದಾಖಲಿಸಬೇಕು. ಬಿಜೆಪಿಯವರು ರಾಷ್ಟ್ರಗೀತೆ ಹಾಗೂ ನೊಬೆಲ್ ಪುರಸ್ಕೃತ ರವೀಂದ್ರನಾಥ ಠಾಗೋರ್ ಅವರಿಗೆ ಅವಮಾನ ಮಾಡುತ್ತಿದ್ದಾರೆ. ಮಹಾತ್ಮಾ ಗಾಂಧಿ ಕೊಂದಾಯಿತು. ಈಗ ರಾಷ್ಟ್ರದ ಸಂಸ್ಕೃತಿ ಬಿಂಬಿಸಿದ ಠಾಗೋರ್ ಮೇಲೆ ದಾಳಿ ಮಾಡುತ್ತಿದ್ದಾರೆ. ಇದನ್ನು ನೋಡಿದಾಗ ಇವರು ದೇಶದ್ರೋಹಿಗಳು ಎನ್ನುವುದು ಸ್ಪಷ್ಟ ಎಂದರು.

ರಾಜ್ಯದಲ್ಲಿ ಆರೆಸ್ಸೆಸ್ ನಿಷೇಧ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿ, ಆರೆಸ್ಸೆಸ್ ಏನು ಅನ್ನುವುದು ಕೇರಳದಲ್ಲಿ ಗೊತ್ತಾಗಿದೆ. ಕಾಶ್ಮೀರದ ಕಟುವಾದಲ್ಲಿ ಬಾಲಕಿ ಮೇಲೆ ಅತ್ಯಾಚಾರ ನಡೆಸಲಾಗಿತ್ತು. ಆ ಪ್ರಕರಣದ ಆರೋಪಿಯ ಪರ ಬಿಜೆಪಿ ಸಚಿವರು ನಿಂತಿದ್ದರು. ಆರೆಸ್ಸೆಸ್‌ನಿಂದ ನಾವು ಕಲಿಯಬೇಕಾದದ್ದಿಲ್ಲ. 5 ಸಾವಿರ ವರ್ಷಗಳ ಇತಿಹಾಸದ ಸನಾತನ ಧರ್ಮಕ್ಕೆ ಆರೆಸ್ಸೆಸ್‌ನಿಂದ ಅಪಾಯವಿದೆ. ಈ ಹಿಂದೆ ತಾಲಿಬಾನ್ ವಿರೋಧಿಸಿದವರು ಈಗ ಅವರನ್ನೇ ಆಹ್ವಾನಿಸುತ್ತಿದ್ದು, 200 ಕೋಟಿ ರೂ. ಸಹಾಯಧನ ನೀಡುತ್ತಿದ್ದಾರೆ ಎಂದರು.

 

Vishwa News 24

Recent Posts

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

2 hours ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

3 hours ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

3 hours ago

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

3 hours ago

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

3 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

5 hours ago