Featured

ಯಾರೂ ಊಹಿಸದ ಅಂತ್ಯ ಸಿಕ್ಕಿದೆ : ವಿಚ್ಛೇದನ ಕುರಿತು ಎ.ಆರ್. ರೆಹಮಾನ್ ರಿಯಾಕ್ಷನ್ – vishwanews24

ಯಾರೂ ಊಹಿಸದ ಅಂತ್ಯ ಸಿಕ್ಕಿದೆ : ವಿಚ್ಛೇದನ ಕುರಿತು ಎ.ಆರ್. ರೆಹಮಾನ್ ರಿಯಾಕ್ಷನ್

ಖ್ಯಾತ ಸಂಗೀತ ಸಂಯೋಜಕ, ಗಾಯಕ ಎ.ಆರ್. ರೆಹಮಾನ್  ಮತ್ತು ಸಾಯಿರಾ ಬಾನು  29 ವರ್ಷಗಳ ದಾಂಪತ್ಯಕ್ಕೆ  ಅಂತ್ಯ ಹಾಡಿದ್ದಾರೆ. ಡಿವೋರ್ಸ್ ಕುರಿತು ನಿನ್ನೆ (ನ.19) ಅಧಿಕೃತವಾಗಿ ಸಾಯಿರಾ ಖಚಿತಪಡಿಸಿದ್ದರು. ಇದೀಗ ಎ.ಆರ್. ರೆಹಮಾನ್ ಅವರು ವಿಚ್ಛೇದನ ಕುರಿತು ಮೌನ ಮುರಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಎ.ಆರ್. ರೆಹಮಾನ್ ಪ್ರತಿಕ್ರಿಯಿಸಿ, ನಾವು ಇನ್ನೇನು 30 ವರ್ಷಗಳ ದಾಂಪತ್ಯಕ್ಕೆ ಕಾಲಿಡಬೇಕಿತ್ತು. ಆದರೆ, ಯಾರೂ ಊಹಿಸದ ಅಂತ್ಯ ಸಿಕ್ಕಿದೆ. ಮುರಿದ ಹೃದಯಗಳ ಭಾರಕ್ಕೆ ದೇವರ ಸಿಂಹಾಸನವೂ ನಡುಗಬಹುದು. ಆದರೂ, ಈ ಚೂರಾದ ಸಂಬಂಧದಲ್ಲೂ ನಾವು ಅರ್ಥವನ್ನು ಹುಡುಕುತ್ತೇವೆ. ಒಡೆದ ತುಣುಕುಗಳು ಮತ್ತೆ ಎಂದಿಗೂ ಒಂದಾಗಲಾರದು. ನಮ್ಮ ಖಾಸಗಿತನ ಗೌರವಿಸಿದ ಗೆಳೆಯರಿಗೆ ಧನ್ಯವಾದ ಎಂದಿದ್ದಾರೆ.

ಅಂದಹಾಗೆ, ಈ ನಿರ್ಧಾರವು ಅವರ ಸಂಬಂಧದಲ್ಲಿ ಗಮನಾರ್ಹವಾದ ಭಾವನಾತ್ಮಕ ಒತ್ತಡದ ನಂತರ ಬಂದಿದೆ. ಒಬ್ಬರಿಗೊಬ್ಬರು ಆಳವಾದ ಪ್ರೀತಿಯ ಹೊರತಾಗಿಯೂ, ಉದ್ವಿಗ್ನತೆ ಮತ್ತು ತೊಂದರೆಗಳು ತಮ್ಮ ನಡುವೆ ದುಸ್ತರವಾದ ಅಂತರವನ್ನು ಸೃಷ್ಟಿಸಿವೆ ಎಂದು ಸಾಯಿರಾ ಬಾನು ಅವರು ದಾಂಪತ್ಯ ಅಂತ್ಯವಾಗಿರುವ ಬಗ್ಗೆ ಖಚಿತಪಡಿಸಿದ್ದರು.

ಎ.ಆರ್.ರೆಹಮಾನ್ ಅವರು 1995ರಲ್ಲಿ ಸಾಯಿರಾ ಬಾನು ಅವರೊಂದಿಗೆ ವಿವಾಹವಾಗಿದ್ದರು. ದಂಪತಿಗೆ ಖತೀಜಾ, ರಹೀಮಾ ಮತ್ತು ಅಮೀನ್ ಎಂಬ ಮೂವರು ಮಕ್ಕಳಿದ್ದಾರೆ.

Vishwa News 24

Recent Posts

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

18 minutes ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

49 minutes ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

14 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

18 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

20 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

21 hours ago