Featured

ಯಾರೂ ಕರೆಂಟ್‌ ಬಿಲ್‌ ಕಟ್ಟಬೇಡಿ : ಜನರಿಗೆ ಕರೆ ನೀಡಿದ ಸಂಸದ ನಳಿನ್‌ – Vishwanews24

ಯಾರೂ ಕರೆಂಟ್‌ ಬಿಲ್‌ ಕಟ್ಟಬೇಡಿ : ಜನರಿಗೆ ಕರೆ ನೀಡಿದ ಸಂಸದ ನಳಿನ್‌

ಮಂಗಳೂರು: ಚುನಾವಣೆ ಪೂರ್ವದಲ್ಲಿ ಐದು ಉಚಿತ ಭರವಸೆ ಮೂಲಕ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದೆ. ಸಿದ್ದರಾಮಯ್ಯ ಮತ್ತು ಡಿಕೆಶಿ ಸರ್ಕಾರ ಬಂದು 24 ಗಂಟೆಯಲ್ಲಿ ಉಚಿತ ಭರವಸೆ ಈಡೇರಿಸುತ್ತೇವೆ ಎಂದು ಹೇಳಿದ್ದರು. ಇವತ್ತು 20 ದಿನ ಕಳೆದರೂ ಯಾವುದೇ ಯೋಜನೆ ಬಗ್ಗೆ ಮಾತನಾಡುತ್ತಿಲ್ಲ. ಆದೇಶ ಮಾಡಿದ್ದರೂ ಈವರೆಗೆ ಯಾವಾಗಿಂದ ಬರುತ್ತದೆ ಎಂಬ ಉಲ್ಲೇಖ ಇಲ್ಲ. ಸುಳ್ಳು ಆಶ್ವಾಸನೆ ಕೊಟ್ಟು ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದಿದೆ.

ಸಿದ್ದರಾಮಯ್ಯ ತನ್ನನ್ನೂ ಸೇರಿಸಿ ಉಚಿತ ಕರೆಂಟ್ ಅಂತ ಹೇಳಿದ್ದರು. ಎಲ್ಲ ಮಹಿಳೆಯರಿಗೂ ಹಣ ಬರುತ್ತದೆ ಎಂದು ಹೇಳಿದ್ದರು. ಅಲ್ಲದೆ ಯಾವುದೇ ಮಾನದಂಡ ಇಲ್ಲದೆ ಭಾಗ್ಯ ದೊರೆಯುತ್ತದೆ ಎಂದು ಸ್ಪಷ್ಟಪಡಿಸಿದ್ದರು ಆದರೆ ಅವುಗಳನ್ನು ಈಡೇರಿಸುವಲ್ಲಿ ಕಾಂಗ್ರೆಸ್‌ ವಿಫಲವಾಗಿದೆ. ಜನ ಆಶ್ವಾಸನೆ ನಂಬಿ ಮತ ಹಾಕಿದ್ದಾರೆ, ಮತದಾರರು ಆಕ್ರೋಶದಲ್ಲಿ ಇದ್ದಾರೆ. ಕರೆಂಟ್ ಬಿಲ್ ಸಂಗ್ರಹಕ್ಕೆ ಬಂದ ಸಿಬ್ಬಂದಿ ಮೇಲೆ ಹಲ್ಲೆ ನಡೆಯುತ್ತಿದೆ. ಹೀಗಾಗಿ ನಾನೂ ಕೂಡ ಕರೆಂಟ್‌ ಬಿಲ್‌ ನೀಡಬೇಡಿ ಎಂದು ಕರೆಕೊಡುತ್ತೇನೆ.

ಜನರ ಆಕ್ರೋಶ ಸಹಜ, ಯಾರೂ ಬಿಲ್ ಕಟ್ಟಲೇ ಬಾರದು ಎಂದರು. ಈ ವೇಳೆ ಜನರಿಗೆ ತೊಂದರೆಯಾದರೆ ನಾವು ಜನರ ಪರವಾಗಿ ನಿಲ್ಲುತ್ತೇವೆ ಎಂದರು. ನೌಕರರಿಗೆ ಹಲ್ಲೆಯಾದ್ರೆ ಸರ್ಕಾರವೇ ಹೊಣೆ ಎಂದು ತಿಳಿಸಿದರು. ಕಾಂಗ್ರೆಸ್ ನ ರಾಜನೀತಿಯಿಂದ ರಾಜ್ಯದಲ್ಲಿ ಅರಾಜಕತೆ ಪ್ರಾರಂಭವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ದ್ವೇಷದ ರಾಜಕಾರಣ ಪ್ರಾರಂಭ ಮಾಡಿದೆ. ಅಶ್ವಥ್ ನಾರಾಯಣ್ ಯಾವುದೋ ಸಂದರ್ಭ ನೀಡಿದ ಹೇಳಿಕೆಗೆ ಈಗ ಅವರ ಮೇಲೆ ಎಫ್ಐಆರ್ ದಾಖಲು ಮಾಡಲಾಗಿದೆ.

ಸಿದ್ದರಾಮಯ್ಯ ಸರ್ಕಾರ 20 ಸಾವಿರ ಕೋಟಿ ಟೆಂಡರ್ ವಾಪಾಸ್ ಪಡೆದಿದೆ. 80 ಶೇ. ಕಮಿಷನ್ ಗೆ ಡಿಮ್ಯಾಂಡ್ ಇಡಲು ಈ ರೀತಿ ಮಾಡಿದ್ದಾರೆ. ಕಾಮಗಾರಿ ಪ್ರಾರಂಭವಾದ ಪ್ರಕ್ರಿಯೆಯನ್ನು ನಿಲ್ಲಿಸಲಾಗಿದೆ. ಪರ್ಸೆಂಟೇಜ್ ಗಾಗಿ ಕಾಮಗಾರಿ ನಿಲ್ಲಿಸಿದ್ದಾರೆ, ಇದು 80 ಶೇ ಪರ್ಸಂಟೇಜ್‌ ಸರ್ಕಾರ ಎಂದರು. ನಮ್ಮ ಸರ್ಕಾರದ ಯಾವುದೇ ವಿಚಾರ ತನಿಖೆ ಮಾಡಿ ನಾವು ಸಿದ್ದರಾಗಿದ್ದೇವೆ. ಅದರ ಜೊತೆಗೆ ಲೋಕಾಯುಕ್ತದ ಸಿದ್ದರಾಮಯ್ಯ ಕೇಸ್ ಕೂಡ ತನಿಖೆ ಆಗಲಿ. ನಮ್ಮ‌ ಕಾಲಘಟ್ಟದ ಯಾವುದು ಬೇಕಾದ್ರೂ ತನಿಖೆ‌ ಅಗಲಿ. ಆದರೆ 20 ಸಾವಿರ ಕೋಟಿ ಬಗ್ಗೆ ಬಹಿರಂಗ ಪಡಿಸಿ ಎಂದು ಆಗ್ರಹಿಸಿದರು.

Vishwa News 24

Recent Posts

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

31 minutes ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

36 minutes ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

1 hour ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

1 hour ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

1 hour ago

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago