ಹೇಳಿಕೆ ಕೊಟ್ಟ ತಕ್ಷಣ ಯಾರೂ ಕೂಡ ದೇಶದ್ರೋಹಿ ಆಗಲು ಸಾಧ್ಯವಿಲ್ಲ : ಸೂಲಿಬೆಲೆ ಪರ ಪೇಜಾವರ ಶ್ರೀ -Vishwanews24
ಬಾಗಲಕೋಟೆ: ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆಯವರಿಗೆ ಪರೋಕ್ಷವಾಗಿ ದೇಶದ್ರೋಹಿ ಎಂಬ ಹೇಳಿಕೆ ನೀಡಿದ್ದು, ಈ ಕುರಿತು ಉಡುಪಿ ಪೇಜಾವರ ಶ್ರೀಗಳು ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೂಲಿಬೆಲೆ ಯುವಕರನ್ನು ಸೇರಿಸಿ ಉತ್ತಮ ಸಂಘಟನೆ ಮಾಡುತ್ತಿದ್ದಾರೆ. ಸದಾನಂದಗೌಡರು ಕೂಡ ಕೇಂದ್ರ ಮಂತ್ರಿಯಾಗಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಸದಾನಂದಗೌಡರು ವೈಯಕ್ತಿಕವಾಗಿ ಹೆಸರು ಹೇಳಿ ಹಾಗೆ ಮಾತಾಡಿಲ್ಲ, ಬಹುಶಃ ಅವರು ಬೇರೆ ಆರ್ಥದಲ್ಲಿ ಹೇಳಿರಬಹುದು. ಆದರೆ ಯಾರೂ ಕೂಡ ಹೇಳಿಕೆ ಕೊಟ್ಟ ತಕ್ಷಣ ದೇಶದ್ರೋಹಿ ಆಗಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಸ್ವಾಮೀಜಿ ಸೂಲಿಬೆಲೆಯವರ ಪರ ಪ್ರತಿಕ್ರಿಯೆ ನೀಡಿದ್ದಾರೆ.
ಈ ವೇಳೆ ನೆರೆ ಪರಿಹಾರದ ಕುರಿತು ಮಾತನಾಡಿದ ಶ್ರೀ ಗಳು, ಕೇಂದ್ರದಿಂದ ಇನ್ನೂ ಪರಿಹಾರದ ಹಣ ಬಾರದಿರುವುದು ಆತಂಕಕಾರಿ ವಿಷಯ ಎಂದರು. ಜೊತೆಗೆ ದೇಶದಲ್ಲಿನ ಆರ್ಥಿಕ ಕೊರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
