Featured

ಯಾರೇ ಆಗಿರಲಿ, ಯಾರ ಮಗನೇ ಆಗಿರಲಿ ದುರಹಂಕಾರ ಮತ್ತು ದುರ್ವರ್ತನೆಯನ್ನು ಸಹಿಸಿಕೊಳ್ಳಲು ಸಾಧ್ಯವೇ ಇಲ್ಲ : ಪ್ರಧಾನಿ ಮೋದಿ -Vishwanews24

ನವದೆಹಲಿ: ‘ಯಾರೇ ಆಗಿರಲಿ, ಯಾರ ಮಗನೇ ಆಗಿರಲಿ, ಅಂತಹ ಅಹಂಕಾರ ಮತ್ತು ದುರ್ವರ್ತನೆಯನ್ನು ಸಹಿಸಿಕೊಳ್ಳಲು ಸಾಧ್ಯವೇ ಇಲ್ಲ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್‌ ವಿಜಯವರ್ಗೀಯ ಅವರ ಮಗ, ಶಾಸಕ ಆಕಾಶ್‌ ವಿಜಯವರ್ಗೀಯ ಅವರು ಇತ್ತೀಚೆಗೆ ಅಧಿಕಾರಿಯೊಬ್ಬರಿಗೆ ಕ್ರಿಕೆಟ್‌ ಬ್ಯಾಟ್‌ನಿಂದ ಹೊಡೆದ ಪ್ರಕರಣ ದಾಖಲಾಗಿತ್ತು. ಅವರನ್ನು ಬಂಧಿಸಿ ಬಳಿಕ ಜಾಮೀನಿನಲ್ಲಿ ಬಿಡುಗಡೆ ಮಾಡಲಾಗಿತ್ತು

ಇಂತಹ ವರ್ತನೆ ಪಕ್ಷಕ್ಕೆ ಕೆಟ್ಟ ಹೆಸರು ತರುತ್ತದೆ ಮತ್ತು ಅದು ಸ್ವೀಕಾರಾರ್ಹವಲ್ಲ. ಯಾರಾದರೂ ತಪ್ಪು ಮಾಡಿದರೆ ಕ್ಷಮೆ ಯಾಚಿಸುವ ಮನೋಭಾವವಾದರೂ ಇರಬೇಕು ಎಂದು ಮೋದಿ ಹೇಳಿದರು. ಆಕಾಶ್‌ ತಮ್ಮ ಕೃತ್ಯವನ್ನು ಸಮರ್ಥಿಸಿಕೊಂಡಿದ್ದಲ್ಲದೆ ಕ್ಷಮೆ ಯಾಚಿಸಲು ನಿರಾಕರಿಸಿದ್ದರು.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಭಾರಿ ಗೆಲುವು ಪಡೆದ ಬಳಿಕ ನಡೆದ ಮೊದಲ ಸಂಸದೀಯ ಪಕ್ಷ ಸಭೆಯಲ್ಲಿ ಅವರು ಮಾತನಾಡಿದರು. ಹಿರಿಯ ಮುಖಂಡರು ಈ ಸಂದರ್ಭದಲ್ಲಿ ಮೋದಿ ಅವರನ್ನು ಸನ್ಮಾನಿಸಿದರು.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago