ನವದೆಹಲಿ: ‘ಯಾರೇ ಆಗಿರಲಿ, ಯಾರ ಮಗನೇ ಆಗಿರಲಿ, ಅಂತಹ ಅಹಂಕಾರ ಮತ್ತು ದುರ್ವರ್ತನೆಯನ್ನು ಸಹಿಸಿಕೊಳ್ಳಲು ಸಾಧ್ಯವೇ ಇಲ್ಲ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ ಅವರ ಮಗ, ಶಾಸಕ ಆಕಾಶ್ ವಿಜಯವರ್ಗೀಯ ಅವರು ಇತ್ತೀಚೆಗೆ ಅಧಿಕಾರಿಯೊಬ್ಬರಿಗೆ ಕ್ರಿಕೆಟ್ ಬ್ಯಾಟ್‌ನಿಂದ ಹೊಡೆದ ಪ್ರಕರಣ ದಾಖಲಾಗಿತ್ತು. ಅವರನ್ನು ಬಂಧಿಸಿ ಬಳಿಕ ಜಾಮೀನಿನಲ್ಲಿ ಬಿಡುಗಡೆ ಮಾಡಲಾಗಿತ್ತು
ಇಂತಹ ವರ್ತನೆ ಪಕ್ಷಕ್ಕೆ ಕೆಟ್ಟ ಹೆಸರು ತರುತ್ತದೆ ಮತ್ತು ಅದು ಸ್ವೀಕಾರಾರ್ಹವಲ್ಲ. ಯಾರಾದರೂ ತಪ್ಪು ಮಾಡಿದರೆ ಕ್ಷಮೆ ಯಾಚಿಸುವ ಮನೋಭಾವವಾದರೂ ಇರಬೇಕು ಎಂದು ಮೋದಿ ಹೇಳಿದರು. ಆಕಾಶ್ ತಮ್ಮ ಕೃತ್ಯವನ್ನು ಸಮರ್ಥಿಸಿಕೊಂಡಿದ್ದಲ್ಲದೆ ಕ್ಷಮೆ ಯಾಚಿಸಲು ನಿರಾಕರಿಸಿದ್ದರು.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಭಾರಿ ಗೆಲುವು ಪಡೆದ ಬಳಿಕ ನಡೆದ ಮೊದಲ ಸಂಸದೀಯ ಪಕ್ಷ ಸಭೆಯಲ್ಲಿ ಅವರು ಮಾತನಾಡಿದರು. ಹಿರಿಯ ಮುಖಂಡರು ಈ ಸಂದರ್ಭದಲ್ಲಿ ಮೋದಿ ಅವರನ್ನು ಸನ್ಮಾನಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…