Featured

ಯಾರೇ ತಪ್ಪು ಮಾಡಿದರೂ ಕಾನೂನಿನ ಮೂಲಕ ಪಾಠ ಕಲಿಸಲು ಸರ್ಕಾರ ಸಿದ್ಧ: ರಮಾನಾಥ ರೈ – Vishwanews24

ಕಾಂಗ್ರೆಸ್ ನಾಯಕರು ಯಾರೂ  ಪ್ರಚೋದನಕಾರಿ ಭಾಷಣ ಮಾಡುವುದಿಲ್ಲ: ರಮಾನಾಥ ರೈ

ಮಂಗಳೂರು: ಕಾಂಗ್ರೆಸ್ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ಸರಿ ಇಲ್ಲ ಎಂದು ಬಿಜೆಪಿ ರಾಜ್ಯಾದ್ಯಕ್ಷ ನಳಿನ್‌ ಕುಮಾರ್ ಕಟೀಲು ಅವರು ಪದೇ ಪದೇ ಹೇಳುತ್ತಿದ್ದಾರೆ ಎಂದು ಮಾಜಿ ಸಚಿವ ಬಿ ರಮಾನಾಥ ರೈ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

ಬಳಿಕ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಸರಕಾರ ಬಂದು 2 ತಿಂಗಳೂ ಪೂರ್ಣ ಆಗಿಲ್ಲ. ಅದಾಗಲೇ ಅವರು ಹತ್ಯೆಗಳ ಬಗ್ಗೆ ಮಾತನಾಡುತ್ತಾ ರಾಜಕಾರಣ ಶುರು ಮಾಡಿದ್ದಾರೆ.

ಅವರು ಪ್ರತೀ ಬಾರಿ ಹತ್ಯೆಗಳೆಲ್ಲವೂ ಕಾಂಗ್ರೆಸ್ ಸರಕಾರ ಮಾತ್ರ ಇದ್ದಾಗ ನಡೆದಿವೆ ಎನ್ನುವಂತೆ ಭ್ರಮೆ ಮೂಡಿಸುವ ಯತ್ನ ಮಾಡುತ್ತಿದ್ದಾರೆ.

ಇದನ್ನು ಮೊದಲು ಅವರು ನಿಲ್ಲಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯಾವುದೇ ಹತ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ನಾಯಕರು ಯಾರೂ ಭಾಗಿ ಆಗಿಲ್ಲ. ಮತೀಯ ಸಂಘಟನೆ, ಬಿಜೆಪಿಯ ಸಂಘಟನೆಯಲ್ಲಿ ಇರುವ ಹಲವು ಕಾರ್ಯಕರ್ತರೇ ಅಧಿಕ ಸಂಖ್ಯೆಯಲ್ಲಿ ಇದ್ದಾರೆ.

ಜನ ಇದನ್ನು ಅರ್ಥ ಮಾಡಿಕೊಳ್ಳಬೇಕು. ಕತ್ತಿ, ತಲ್ವಾರ್ ಬಗ್ಗೆ ಪ್ರಚೋದನಕಾರಿ ಭಾಷಣ ಮಾಡುವವರು ಯಾರು..?

ಎಲ್ಲರೂ ಹಿಂದು ಸಂಘಟನೆ ನಾಯಕರೇ. ಕಾಂಗ್ರೆಸ್ ನಾಯಕರು ಯಾರೂ ಇಂತಹ ಭಾಷಣ ಮಾಡುವುದಿಲ್ಲ. ಸಿದ್ಧರಾಮಯ್ಯ ಎಂದಿಗೂ ಹೊಡಿ, ಬಡಿ, ಕಡಿ ಎಂದು ಯಾವತ್ತೂ ಹೇಳಿಲ್ಲ, ಹೇಳಲ್ಲ.

ಆದರೆ ನಳಿನ್‌ ಕುಮಾರ್ ಕಟೀಲು ಸೇರಿದಂತೆ ಬಿಜೆಪಿಯ ಹಲವು ನಾಯಕರು ಇಂತಹ ಉಗ್ರ ಭಾಷಣ, ಕೋಮುಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂದರು.

ಬಂಟ್ವಾಳದಲ್ಲಿ ದಾರಿ ಹೋಕ ಹರೀಶ್ ಪೂಜಾರಿಯನ್ನು ಕೊಲೆ ಮಾಡಿಸಿದವರೇ ಶ್ರದ್ಧಾಂಜಲಿ ಸಭೆಯಲ್ಲಿ ಭಾಷಣ ಮಾಡಿದ್ದಾರೆ, ಇನ್ನೊಬ್ಬರ ತಲೆಗೆ ಕಟ್ಟುವ ಯತ್ನ ಮಾಡಿದ್ದಾರೆ.

ಇದನ್ನು ಜನ ಅರ್ಥ ಮಾಡಿಕೊಳ್ಳಬೇಕು ಎಂದರು.

ವಿನಾಯಕ ಬಾಳಿಗ, ಪ್ರಶಾಂತ್‌ ಪೂಜಾರಿ, ಶರತ್‌ ಮಡಿವಾಳ, ದೀಪಕ್ , ಫಾಝಿಲ್, ಝಲೀಲ್‌, ಕೊಲೆ ಕೃತ್ಯಗಳ ಹಿಂದೆ ಯಾರಿದ್ದಾರೆ ಎನ್ನುವುದನ್ನು ಪತ್ತೆ ಹಚ್ಚಲು ಎಸ್‌ಐಟಿ ರಚನೆ ಆಗಬೇಕು ಎಂದು ಒತ್ತಾಯಿಸಿದರು.

ಯಾರೇ ತಪ್ಪು ಮಾಡಿದರೂ ಕಾನೂನಿನ ಮೂಲಕ ಪಾಠ ಕಲಿಸಲು ಸರ್ಕಾರ ಸಿದ್ಧವಾಗಿದೆ.

ಜಿಲ್ಲೆಯಲ್ಲಿ ನಡೆದ ಎಲ್ಲಾ ಹತ್ಯೆಗಳ ಹಿಂದಿನ ಶಕ್ತಿಯಾರು ಅಂತ ಪತ್ತೆ ಮಾಡಿದರೆ ಸಾಮಾಜಿಕ ಸಾಮರಸ್ಯ ನೆಲೆಸಲಿದೆ.

ನಾವು ಸಿಎಂ ಅವರನ್ನು ಭೇಟಿ ಮಾಡಿ ಎಸ್ಐಟಿ ಮಾಡಲು ಮನವಿ ಮಾಡಲಿದ್ದೇವೆ ಎಂದರು.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

19 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

19 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

19 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

19 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

19 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

20 hours ago