Featured

ಯಾರೇ ಬಂದರೂ ಈ ಹಿಂದೂ ದೇಶವನ್ನು ಮತಾಂತರ ಮಾಡಲು ಸಾಧ್ಯವಿಲ್ಲ : ಡಾ. ಕಲ್ಲಡ್ಕ ಪ್ರಭಾಕರ್‌ ಭಟ್‌ -Vishwanews24

ಜಗತ್ತಿನಲ್ಲೇ ಸರ್ವ ಶ್ರೇಷ್ಠ ಧರ್ಮ ಎಂದರೆ ಹಿಂದೂ ಧರ್ಮ, ಯಾರೇ ಬಂದರೂ ಈ ಹಿಂದೂ ದೇಶವನ್ನು ಮತಾಂತರ ಮಾಡಲು ಸಾಧ್ಯವಿಲ್ಲ , : ಡಾ. ಕಲ್ಲಡ್ಕ ಪ್ರಭಾಕರ್‌ ಭಟ್‌

ಬೆಳ್ಮಣ್‌ : ಮೋಸದಿಂದ ಹಿಂದೂಗಳನ್ನು ಮತಾಂತರ ಮಾಡುವ ಕೆಲಸ ಕೊನೆಗೊಳ್ಳಲಿ. ಯಾರೇ ಬಂದರೂ ಈ ಹಿಂದೂ ದೇಶವನ್ನು ಮತಾಂತರ ಮಾಡಲು ಸಾಧ್ಯವಿಲ್ಲ. ಹಿಂದೂ ಧರ್ಮವನ್ನು ಎಂದೂ ಕೆಣಕದಿರಿ. ಜಗತ್ತಿನಲ್ಲೇ ಸರ್ವ ಶ್ರೇಷ್ಠ ಧರ್ಮ ಎಂದರೆ ಹಿಂದೂ ಧರ್ಮ ಎಂದು ಆರೆಸ್ಸೆಸ್‌ ಮುಖಂಡ ಹಾಗೂ ದಕ್ಷಿಣ ಮಧ್ಯ ಕ್ಷೇತ್ರೀಯ ಕಾರ‍್ಯಕಾರಿಣಿ ಸದಸ್ಯ ಡಾ. ಕಲ್ಲಡ್ಕ ಪ್ರಭಾಕರ್‌ ಭಟ್‌ ಹೇಳಿದರು.

‘ಭಾರತ ಹಿಂದು ರಾಷ್ಟ್ರ, ಮುಸ್ಲಿಮರು ಬರಕೂಡದು’ ಎಂದವನ ಮೇಲೆ ಹಲ್ಲೆ ಮಾಡಿದವರ ಬಂಧನ ವಿಹಿಂಪ, ಭಜರಂಗದಳ ಕಾರ್ಕಳ ಪ್ರಖಂಡ ವತಿಯಿಂದ ಬೆಳ್ಮಣ್‌ನಲ್ಲಿ ಜರುಗಿದ ‘ಮತಾಂತರದ ವಿರುದ್ಧ ಬೆಳ್ಮಣ್‌ ಚಲೋ’ ಬೃಹತ್‌ ಜನಾಂದಲೋನ ಸಭೆಯಲ್ಲಿ ಮಾಡಿದ ದಿಕ್ಸೂಚಿ ಭಾಷಣದಲ್ಲಿ ಹೇಳಿದ್ದಾರೆ. ಮತಾಂತರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಸಹಾಯಕ ಎಸ್ಪಿ ಕುಮಾರ್‌ ಚಂದ್ರ, ಕಾರ್ಕಳ ಗ್ರಾಮಾಂತರ ಠಾಣಾಧಿಕಾರಿ ನಾಸಿರ್‌ ಹುಸೇನ್‌ ಅವರಿಗೆ ಹಿಂದೂ ಮುಖಂಡರು ಮನವಿ ಸಲ್ಲಿಸಿದರು. ನಂದಳಿಕೆ ಚಾವಡಿ ಅರಮನೆ ಸುಹಾಸ್‌ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯಅತಿಥಿಗಳಾಗಿ ಜಿಲ್ಲಾ ಹಿಂಜಾವೇ ಕಾರ‍್ಯದರ್ಶಿ ಪ್ರಕಾಶ್‌ ಕುಕ್ಕೆಹಳ್ಳಿ, ಜಿಲ್ಲಾ ಗೋರಕ್ಷಾ ಪ್ರಮುಖ್‌ ದಿನೇಶ್‌ ಶೆಟ್ಟಿ ಹೆಬ್ರಿ, ವಿಹಿಂಪ ಜಿಲ್ಲಾ ಗೋರಕ್ಷ ಪ್ರಮುಖ್‌ ಉಮೇಶ್‌ ನಾಯಕ್‌ ಸೂಡ, ಭಜರಂಗದಳ ತಾಲೂಕು ಸಂಚಾಲಕ ಗುರುಪ್ರಸಾದ್‌ ನಾರಾವಿ, ಬೆಳ್ಮಣ್‌ ವಲಯ ವಿಹಿಂಪ ಅಧ್ಯಕ್ಷ ಪ್ರಸಾದ್‌ ಶೆಟ್ಟಿ ಕಾಡಿ ಕಂಬಳ, ಹಿಂದೂ ಮುಖಂಡ ರತ್ನಾಕರ್‌ ಅಮೀನ್‌ ಉಪಸ್ಥಿತರಿದ್ದರು. ಭಾರತ ಹಿಂದೂ ರಾಷ್ಟ್ರ ಘೋಷಣೆಯಾಗಲಿ ಜಿಲ್ಲಾ ಭಜರಂಗದಳ ಸುರಕ್ಷ ಪ್ರಮುಖ್‌ ಮಹೇಶ್‌ ಬೈಲೂರು ಸ್ವಾಗತಿಸಿದರು. ಧರ್ಮ ಜಾಗರಣ ಮಂಗಳೂರು ವಿಭಾಗ ಸಹ ಸಂಯೋಜಕ ಪ್ರಸಾದ್‌ ಶೆಟ್ಟಿ ಕುತ್ಯಾರು ಪ್ರಾಸ್ತಾವಿಕ ಮಾತನಾಡಿದರು. ಅಶೋಕ್‌ ನಾರಾವಿ ನಿರೂಪಿಸಿದರು. ಜಯಪ್ರಕಾಶ್‌ ಪ್ರಭು ವಂದಿಸಿದರು.

 

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

10 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

14 hours ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

15 hours ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

15 hours ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

2 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

2 days ago