ಮುಂಬೈ : ಅತೃಪ್ತ ಕಾಂಗ್ರೆಸ್ -ಜೆಡಿಎಸ್ ಶಾಸಕರು ರಾಜೀನಾಮೆ ನೀಡಿ, ಮುಂಬೈನ ಹೊಟೇಲ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಇಂತಹ ಶಾಸಕರು ತಾವು ಸದನಕ್ಕೆ ಬರುವುದಲ್ಲ. ಯಾರೇ ಮನವೊಲಿಸಿದರೂ ಹಾಜರಾಗುವುದಿಲ್ಲ ಎಂದು ತಮ್ಮ ನಿಲುವನ್ನು ಮತ್ತೆ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಮುಂಬೈನಲ್ಲಿ ಅಜ್ಞಾತ ಸ್ಥಳದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅತೃಪ್ತ ಕಾಂಗ್ರೆಸ್-ಜೆಡಿಎಸ್ ಶಾಸಕರು, ವಿಶ್ವಾಸಮತಕ್ಕೆ ನಾವು ಬರುವುದಿಲ್ಲ. ಯಾರೇ ಮನವೊಲಿಸಿದರೂ ಬರೋಲ್ಲ. ನಮ್ಮ ನಿಲುವಿನಲ್ಲಿ ಬದಲಾವಣೆ ಇಲ್ಲ ಎಂದು ಮತ್ತೆ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.
ಈ ಹಿನ್ನಲೆಯಲ್ಲಿ ವಿಶ್ವಾಸಮತ ಸಾಭೀತು ಪಡಿಸುವ ವೇಳೆ 16 ರಾಜೀನಾಮೆ ನೀಡಿರುವ ಶಾಸಕರು ಬಾರದೇ ಹೋದರೇ, ದೋಸ್ತಿ ಖತಂ ಆಗೋದು ಗ್ಯಾರಂಟಿ. ಈ ಮೂಲಕ ಮೈತ್ರಿ ಸರ್ಕಾರ ಬಿದ್ದು ಹೋಗೋದು ನಿಜ ಎಂದು ಅನೇಕ ರಾಜಕೀಯ ನಾಯಕರ ವಿಶ್ಲೇಷಣೆಯಾಗಿದೆ.
ಸದನಕ್ಕೆ ಹಾಜರಾಗಲೇಬೇಕು ಎಂದು ಈಗಾಗಲೇ ಮೈತ್ರಿ ಸರ್ಕಾರ ತಮ್ಮ ಅತೃಪ್ತ ಶಾಸಕರಿಗೆ ವಿಪ್ ಜಾರಿ ಮಾಡಿತ್ತು. ಆದರೆ, ಈ ವಿಪ್ ಪಾಲನೆ ಮಾಡುವುದು ಕಡ್ಡಾಯವಲ್ಲ ಎಂದು ಈಗ ಸುಪ್ರೀಂ ಕೋರ್ಟ್ ತಿಳಿಸಿದೆ. ಅದರಂತೆ ಅತೃಪ್ತರು ಕೂಡ ನಾಳೆ ಸದನಕ್ಕೆ ಗೈರಾಗಲಿದ್ದು, ಕುಮಾರಸ್ವಾಮಿ ನೇತೃತ್ವದ ಸರ್ಕಾರ ಬಹುಮತ ಕಳೆದುಕೊಳ್ಳಲಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…