Featured

ಯಾರ ಧರ್ಮವನ್ನೂ ನಾವು ಬದಲಾಯಿಸಲು ಒತ್ತಾಯಿಸುವುದಿಲ್ಲ : ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌‌ – VIshwanews24

ಯಾರ ಧರ್ಮವನ್ನೂ ನಾವು ಬದಲಾಯಿಸಲು ಒತ್ತಾಯಿಸುವುದಿಲ್ಲ : ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌‌ – VIshwanews24

ಛತ್ತೀಸ್‌ಗಡ : “ನಾವು ಯಾರನ್ನೂ ಮತಾಂತರಗೊಳಿಸಬೇಕಾಗಿಲ್ಲ. ಆದರೆ, ಹೇಗೆ ಬದುಕಬೇಕು ಎನ್ನುವುದನ್ನು ಕಲಿಸುತ್ತೇವೆ” ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌‌ ತಿಳಿಸಿದ್ದಾರೆ.

ಛತ್ತೀಸ್‌ಗಡದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಭಾರತವನ್ನು ವಿಶ್ವಗುರುವನ್ನಾಗಿ ಮಾಡಲು ಎಲ್ಲರೂ ಒಗ್ಗಟ್ಟಾಗಿ ಮುನ್ನಡೆಯಬೇಕು. ನಾವು ಯಾರನ್ನೂ ಮತಾಂತರಗೊಳಿಸುವ ಅಗತ್ಯವಿಲ್ಲ. ಇಡೀ ಜಗತ್ತಿಗೆ ಈ ಪಾಠವನ್ನು ಭಾರತ ಕಲಿಸಿದೆ. ಎಲ್ಲರಿಗೂ ಸಹ ನಮ್ಮ ಪಂಥ ಒಳ್ಳೆಯದನ್ನೇ ಮಾಡುತ್ತದೆ. ಯಾರ ಧರ್ಮವನ್ನೂ ನಾವು ಬದಲಾಯಿಸಲು ಒತ್ತಾಯಿಸುವುದಿಲ್ಲ” ಎಂದಿದ್ದಾರೆ.

“1930ರಿಂದ ದೇಶದಲ್ಲಿ ಮುಸ್ಲಿಂ ಜನಶಕ್ತಿಯನ್ನು ಹೆಚ್ಚಿಸು ಯತ್ನ ನಡೆಯುತ್ತಿದೆ. ಭಾರತವನ್ನು ಮತ್ತೊಂದು ಪಾಕಿಸ್ತಾನವನ್ನಾಗಿ ಮಾಡುವ ಉದ್ದೇಶದಿಂದ ಮುಸ್ಲಿಮರ ಪ್ರಾಬಲ್ಯವನ್ನು ಹೆಚ್ಚಿಸಲು ಸಾಕಷ್ಟು ಯತ್ನಗಳು ನಡೆಯುತ್ತಿದೆ. 1930ರಿಂದಲೇ ಅಸ್ಸಾಂ ಸೇರಿದಂತೆ ಪಂಜಾಬ್‌‌, ಸಿಂಧ್‌ ಹಾಗೂ ಪಶ್ಚಿಮ ಬಂಗಾಳದಲ್ಲಿ ಈ ರೀತಿಯಾದ ಯತ್ನಗಳು ನಡೆಯುತ್ತಿದೆ. ಅಲ್ಲದೇ, ಇದು ನಿರ್ದಿಷ್ಟ ಮಟ್ಟದಲ್ಲಿ ಯಶಸ್ವಿ ಆಗಿದೆ” ಎಂದು ಆರೋಪಿಸಿದ್ದರು.

“ಎಲ್ಲಾ ಭಾರತ ವಾಸಿಗಳ ಡಿಎನ್‌ಎ ಒಂದೇ ಆಗಿದೆ. ಹಾಗಾಗಿ ಅವರು ಯಾವ ಧರ್ಮವನ್ನು ಆರಾಧಿಸುತ್ತಾರೆ ಎನ್ನುವುದರ ಮೇಲೆ ಅವರನ್ನು ಬೇರೆ ಮಾಡಲು ಆಗುವುದಿಲ್ಲ. ಹಾಗಾಗಿ ಮುಸ್ಲಿಮರು ಭಾರತದಲ್ಲಿ ಇಸ್ಲಾಂ ಧರ್ಮ ಅಪಾಯದಲ್ಲಿದೆ ಎನ್ನುವ ತಪ್ಪು ತಿಳುವಳಿಕೆಯನ್ನು ಬಿಡಿ” ಎಂದಿದ್ದರು.

Vishwa News 24

Recent Posts

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

15 hours ago

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ – vishwanews24

ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ  ಸಂಭ್ರಮದ ನಡುವೆಯೇ…

15 hours ago

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ  – vishwanews24

ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ  : ಅಕ್ಷಿತ್ ಸುವರ್ಣ   ಮಂಗಳೂರು:…

15 hours ago

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ – vishwanews24

ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…

15 hours ago

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

3 days ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

3 days ago