ಛತ್ತೀಸ್‌ಗಡ : “ನಾವು ಯಾರನ್ನೂ ಮತಾಂತರಗೊಳಿಸಬೇಕಾಗಿಲ್ಲ. ಆದರೆ, ಹೇಗೆ ಬದುಕಬೇಕು ಎನ್ನುವುದನ್ನು ಕಲಿಸುತ್ತೇವೆ” ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ತಿಳಿಸಿದ್ದಾರೆ.
ಛತ್ತೀಸ್‌ಗಡದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಭಾರತವನ್ನು ವಿಶ್ವಗುರುವನ್ನಾಗಿ ಮಾಡಲು ಎಲ್ಲರೂ ಒಗ್ಗಟ್ಟಾಗಿ ಮುನ್ನಡೆಯಬೇಕು. ನಾವು ಯಾರನ್ನೂ ಮತಾಂತರಗೊಳಿಸುವ ಅಗತ್ಯವಿಲ್ಲ. ಇಡೀ ಜಗತ್ತಿಗೆ ಈ ಪಾಠವನ್ನು ಭಾರತ ಕಲಿಸಿದೆ. ಎಲ್ಲರಿಗೂ ಸಹ ನಮ್ಮ ಪಂಥ ಒಳ್ಳೆಯದನ್ನೇ ಮಾಡುತ್ತದೆ. ಯಾರ ಧರ್ಮವನ್ನೂ ನಾವು ಬದಲಾಯಿಸಲು ಒತ್ತಾಯಿಸುವುದಿಲ್ಲ” ಎಂದಿದ್ದಾರೆ.
“1930ರಿಂದ ದೇಶದಲ್ಲಿ ಮುಸ್ಲಿಂ ಜನಶಕ್ತಿಯನ್ನು ಹೆಚ್ಚಿಸು ಯತ್ನ ನಡೆಯುತ್ತಿದೆ. ಭಾರತವನ್ನು ಮತ್ತೊಂದು ಪಾಕಿಸ್ತಾನವನ್ನಾಗಿ ಮಾಡುವ ಉದ್ದೇಶದಿಂದ ಮುಸ್ಲಿಮರ ಪ್ರಾಬಲ್ಯವನ್ನು ಹೆಚ್ಚಿಸಲು ಸಾಕಷ್ಟು ಯತ್ನಗಳು ನಡೆಯುತ್ತಿದೆ. 1930ರಿಂದಲೇ ಅಸ್ಸಾಂ ಸೇರಿದಂತೆ ಪಂಜಾಬ್, ಸಿಂಧ್ ಹಾಗೂ ಪಶ್ಚಿಮ ಬಂಗಾಳದಲ್ಲಿ ಈ ರೀತಿಯಾದ ಯತ್ನಗಳು ನಡೆಯುತ್ತಿದೆ. ಅಲ್ಲದೇ, ಇದು ನಿರ್ದಿಷ್ಟ ಮಟ್ಟದಲ್ಲಿ ಯಶಸ್ವಿ ಆಗಿದೆ” ಎಂದು ಆರೋಪಿಸಿದ್ದರು.
“ಎಲ್ಲಾ ಭಾರತ ವಾಸಿಗಳ ಡಿಎನ್‌ಎ ಒಂದೇ ಆಗಿದೆ. ಹಾಗಾಗಿ ಅವರು ಯಾವ ಧರ್ಮವನ್ನು ಆರಾಧಿಸುತ್ತಾರೆ ಎನ್ನುವುದರ ಮೇಲೆ ಅವರನ್ನು ಬೇರೆ ಮಾಡಲು ಆಗುವುದಿಲ್ಲ. ಹಾಗಾಗಿ ಮುಸ್ಲಿಮರು ಭಾರತದಲ್ಲಿ ಇಸ್ಲಾಂ ಧರ್ಮ ಅಪಾಯದಲ್ಲಿದೆ ಎನ್ನುವ ತಪ್ಪು ತಿಳುವಳಿಕೆಯನ್ನು ಬಿಡಿ” ಎಂದಿದ್ದರು.
ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…
ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…