ಬೆಂಗಳೂರು: ಯಾವುದೇ ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನ ರದ್ದು ಮಾಡಲ್ಲ, ಎಲ್ಲವನ್ನು ಪರಿಷ್ಕರಣೆ ಮಾಡುತ್ತೇವೆ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಅನರ್ಹ ರೇಷನ್ ಕಾರ್ಡ್‌ಗಳ ರದ್ದು ವಿಚಾರವಾಗಿ ಮಾತನಾಡಿದ ಅವರು, ಬಿಪಿಎಲ್‌ನಲ್ಲಿರುವ ಅನರ್ಹರನ್ನು ನಿಯಮಗಳ ಪ್ರಕಾರ ಪರಿಷ್ಕರಣೆ ಮಾಡಿ, ಎಪಿಎಲ್‌ಗೆ ವರ್ಗಾವಣೆ ಮಾಡುತ್ತೇವೆ. ಯಾವ ಕಾರ್ಡನ್ನು ರದ್ದು ಮಾಡಲ್ಲ, ಎಲ್ಲಾ ಕಾರ್ಡ್‌ಗಳನ್ನು ಪರಿಷ್ಕರಣೆ ಮಾಡುತ್ತೇವೆ. ವರ್ಗಾವಣೆ ಸಂದರ್ಭದಲ್ಲಿ ಏನಾದರೂ ಸಣ್ಣಪುಟ್ಟ ಸಮಸ್ಯೆಯಾದರೆ 24 ಗಂಟೆಯೊಳಗೆ ಅದನ್ನು ಸರಿಪಡಿಸಿ ಆಹಾರ ಧಾನ್ಯ ಕೊಡುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಇನ್ನೂ ಇದೇ ವೇಳೆ ಯಾದಗಿರಿಯಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಣೆ ವಿಚಾರವಾಗಿ ಮಾತನಾಡಿ, ಪ್ರಕರಣವನ್ನು ವಿವರವಾಗಿ ತನಿಖೆ ನಡೆಸಬೇಕು. ದೊಡ್ಡಮಟ್ಟದಲ್ಲಿ ನಡೆದಿದೆ. ಅಧಿಕಾರಿಗಳು ತನಿಖೆ ನಡೆಸುತ್ತಾರೆ. ಯಾರೇ ತಪ್ಪು ಮಾಡಿದ್ದರೂ ಅವರ ವಿರುದ್ಧ ಕ್ರಮ ಆಗುತ್ತದೆ ಎಂದಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…