Featured

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ, ಆತಂಕಬೇಡ :ಸಿಎಂ ಡಿಕೆಶಿ ಭರವಸೆ  – vishwanews24

ಎಲ್ಲಾ ಗ್ಯಾರಂಟಿ ಯೋಜನೆಗಳು ಎಂದಿನಂತೆ ಮುಂದುವರಿಯಲಿವೆ : ಸಿಎಂ ಡಿಕೆಶಿ ಸ್ಪಷ್ಟನೆ

ಬೆಂಗಳೂರು :ಫಲಾನುಭವಿಗಳು ಯಾವುದೇ ಆತಂಕಪಡಬೇಕಾದ ಅಗತ್ಯವಿಲ್ಲ, ಎಲ್ಲಾ ಗ್ಯಾರಂಟಿ ಯೋಜನೆಗಳು ಎಂದಿನಂತೆ ಮುಂದುವರಿಯಲಿವೆ ಎಂದು ಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಸರ್ಕಾರ ಗ್ಯಾರಂಟಿ ಯೋಜನೆಯ ಪರಿಷ್ಕರಣೆಗೆ ಮುಂದಾದ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, “ಗ್ಯಾರಂಟಿ ಇದೆ, ಗ್ಯಾರಂಟಿ ಇರುತ್ತದೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ, ಆತಂಕಬೇಡ” ಎಂದು ಭರವಸೆ ನೀಡಿದ್ದಾರೆ.

“ಕಾಂಗ್ರೆಸ್ ಸರ್ಕಾರದ ಜನಪರ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿಯನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ. ಈ ಯೋಜನೆಗಳನ್ನು ನಿಲ್ಲಿಸಲಾಗುತ್ತಿದೆ ಎಂಬ ವಿರೋಧ ಪಕ್ಷಗಳ ಸುಳ್ಳು ಪ್ರಚಾರ ಹಾಗೂ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು” ಎಂದಿದ್ದಾರೆ.

“ಕೆಲವರು ಮೃತಪಟ್ಟವರ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಯೋಜನೆಗಳ ಲಾಭ ಪಡೆಯುತ್ತಿರುವುದು ಗಮನಕ್ಕೆ ಬಂದಿದೆ. ಹೀಗಾಗಿ ನಿಜವಾದ ಫಲಾನುಭವಿಗಳ ಹೆಸರು, ವಿಳಾಸ ಹಾಗೂ ಬ್ಯಾಂಕ್ ಖಾತೆ ವಿವರಗಳನ್ನು ದೃಢೀಕರಿಸಲು ಮರುಪರಿಶೀಲನೆ ಪ್ರಕ್ರಿಯೆ ಕೈಗೊಳ್ಳಲಾಗಿದೆ. ಇದು ಯೋಜನೆಗಳನ್ನು ನಿಲ್ಲಿಸುವ ಕ್ರಮವಲ್ಲ, ಬದಲಾಗಿ ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯಗಳು ಸಮರ್ಪಕವಾಗಿ ತಲುಪುವಂತೆ ಮಾಡುವ ಕ್ರಮವಾಗಿದೆ” ಎಂದು ತಿಳಿಸಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

24 hours ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago