ಯಾವುದೇ ಕಾರಣಕ್ಕೂ ಮತ್ತೆ ಕಾಂಗ್ರೆಸ್ ಗೆ ಹೋಗುವುದಿಲ್ಲ, ನನ್ನ ಕ್ಷೇತ್ರದಲ್ಲಿ ಗೆಲ್ಲುವ ವಿಶ್ವಾಸವಿದೆ : ಬಿ.ಸಿ.ಪಾಟೀಲ್ -Vishwanews24

Featured, ರಾಜ್ಯ ನ್ಯೂಸ್

ಮೈಸೂರು : ರಾಜ್ಯದಲ್ಲಿ ನಡೆಯುವ ವಿಧಾನಸಭೆ ಉಪಚುನಾವಣೆಯಲ್ಲಿ ನನ್ನ ಕ್ಷೇತ್ರದಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಅನರ್ಹ ಶಾಸಕ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಮತ್ತೆ ಕಾಂಗ್ರೆಸ್ ಗೆ ಹೋಗುವುದಿಲ್ಲ. ಹಿರೇಕೆರೂರು ಕ್ಷೇತ್ರದಲ್ಲಿ ಖಂಡಿತ ನಾನು ಗೆಲ್ಲುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನು ಶಾಸಕರನ್ನು ಅನರ್ಹ ಮಾಡಿರುವ ಸ್ಪೀಕರ್ ತೀರ್ಮಾನ ಸಂವಿಧಾನ ಬಾಹಿರ, ಸುಪ್ರೀಂನಲ್ಲಿ ನಮ್ಮ ಪರ ತೀರ್ಪು ಬರುವ ವಿಶ್ವಾಸವಿದೆ ಎಂದರು.