ಬೆಂಗಳೂರು: ಯಾವುದೇ ಕಾರಣಕ್ಕೂ ಸಂಪೂರ್ಣ ಪಠ್ಯ ಪುಸ್ತಕ ಪರಿಷ್ಕರಣೆ ಕೈ ಬಿಡೋಲ್ಲ. ಯಾವುದು ಪಠ್ಯ ಲೋಪ ಇದೆಯೋ ಅದನ್ನು ಮಾತ್ರ ಸರಿ ಮಾಡುತ್ತೇವೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ನಗರದಲ್ಲಿ ಉದ್ದೇಶ ಪೂರ್ವಕವಾಗಿ ಪರಿಷ್ಕರಣೆಯಲ್ಲಿ ತಪ್ಪಾಗಿದೆ ಅಂತ ಹೇಳುತ್ತಿದ್ದಾರೆ. ಹೀಗಾಗಿ ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರಕ್ಕೆ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದೇವೆ. ಜನರಿಗೆ ಸತ್ಯ ತಿಳಿಸಲು ಸಾರ್ವಜನಿಕರಿಗೆ ಪಠ್ಯ ಪರಿಷ್ಕರಣೆ ದಾಖಲಾತಿ ಪ್ರಕಟ ಮಾಡುತ್ತೇವೆ. ಮುಡಂಬಡಿತ್ತಾಯ ಸಮಿತಿಯಲ್ಲಿ ಏನ್ ಇತ್ತು, ಬರಗೂರು ಸಮಿತಿ ಏನ್ ಮಾಡಿದೆ, ನಾವು ಏನು ಮಾಡಿದ್ದೇವೆ ಅಂತ ಜನರೇ ತೀರ್ಮಾನ ಮಾಡಲಿ. ಸಾರ್ವಜನಿಕರು ಏನಾದರೂ ಆಕ್ಷೇಪಣೆ ಸಲ್ಲಿಸಿದರೆ ಅದನ್ನು ಸರಿ ಮಾಡುತ್ತೇವೆ. ಅಂಬೇಡ್ಕರ್ ಸಂವಿಧಾನ ಶಿಲ್ಪಿ ಎನ್ನುವ ಪದವನ್ನು ಸೇರಿಸುತ್ತೇವೆ. ಬಸವಣ್ಣನವರ ಎರಡು ಸಾಲುಗಳನ್ನು ಸೇರ್ಪಡೆ ಮಾಡುತ್ತೇವೆ. ಸಣ್ಣಪುಟ್ಟ ಲೋಪಗಳು ಆಗುತ್ತದೆ. ಅದನ್ನು ನಾವು ಮುಕ್ತ ಮನಸ್ಸಿನಿಂದ ಸ್ವಾಗತ ಮಾಡುತ್ತೇವೆ ಎಂದಿದ್ದಾರೆ.
ಕಾಂಗ್ರೆಸ್ ದಿಕ್ಕೆಟ್ಟಿದೆ. ಅದಕ್ಕಾಗಿ ಹೀಗೆ ಈ ವಿಚಾರವಾಗಿ ವಿವಾದ ಮಾಡುತ್ತಿದೆ. ಕಾಂಗ್ರೆಸ್‍ಗೆ ಭಯ ಶುರುವಾಗಿದೆ. ದಿಕ್ಕು ತಪ್ಪಿದೆ ಹೀಗಾಗಿ ಇಂತಹ ಸುಳ್ಳು ಹೇಳುತ್ತಿದೆ. ಸಿದ್ದರಾಮಯ್ಯ ಇಷ್ಟು ದಿನ ನಿದ್ರೆ ಮಾಡಿದ್ದರು. ಈಗ ಎದ್ದು ಆರ್‍ಎಸ್‍ಎಸ್ ಬಗ್ಗೆ ಮಾತನಾಡುತ್ತಾರೆ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್‍ಗೆ ರಾಷ್ಟ್ರೀಯತೆ ಬಗ್ಗೆ ಮಕ್ಕಳು ಕಲಿಯುವುದು ಇಷ್ಟ ಇಲ್ಲ. ದೇಶಭಕ್ತಿ ಬಗ್ಗೆ ಕಲಿಯುವುದು ಬೇಕಿಲ್ಲ. ಹೀಗಾಗಿ ಎಲ್ಲದ್ದಕ್ಕೂ ವಿರೋಧ ಮಾಡುತ್ತಿದೆ. ನರಸಿಂಹರಾವ್ ಬರುವವರೆಗೂ ಒಂದೇ ಸಮುದಾಯದವರು ಶಿಕ್ಷಣ ಮಂತ್ರಿ ಆಗಿದ್ದರು ಎನ್ನುವುದು ಇಡೀ ದೇಶಕ್ಕೆ ಗೊತ್ತಿದೆ. 75 ವರ್ಷದ ಕಾಂಗ್ರೆಸ್ ದುರಾಡಳಿತ ಜನರಿಗೆ ಗೊತ್ತಾಗುತ್ತದೆ ಅಂತ ಕಾಂಗ್ರೆಸ್ ವಿರೋಧ ಮಾಡುತ್ತಿದೆ ಎಂದು ಹರಿಹಾಯ್ದಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…