Featured

ಯಾವುದೇ ಕಾರಣಕ್ಕೂ ಸಂಪೂರ್ಣ ಪಠ್ಯ ಪುಸ್ತಕ ಪರಿಷ್ಕರಣೆ ಕೈ ಬಿಡೋಲ್ಲ , ಯಾವುದು ಪಠ್ಯ ಲೋಪ ಇದೆಯೋ ಅದನ್ನು ಮಾತ್ರ ಸರಿ ಮಾಡುತ್ತೇವೆ : ಬಿ.ಸಿ.ನಾಗೇಶ್ – Vishwnaews24

ಯಾವುದೇ ಕಾರಣಕ್ಕೂ ಸಂಪೂರ್ಣ ಪಠ್ಯ ಪುಸ್ತಕ ಪರಿಷ್ಕರಣೆ ಕೈ ಬಿಡೋಲ್ಲ ,

ಯಾವುದು ಪಠ್ಯ ಲೋಪ ಇದೆಯೋ ಅದನ್ನು ಮಾತ್ರ ಸರಿ ಮಾಡುತ್ತೇವೆ

ಬೆಂಗಳೂರು: ಯಾವುದೇ ಕಾರಣಕ್ಕೂ ಸಂಪೂರ್ಣ ಪಠ್ಯ ಪುಸ್ತಕ ಪರಿಷ್ಕರಣೆ ಕೈ ಬಿಡೋಲ್ಲ. ಯಾವುದು ಪಠ್ಯ ಲೋಪ ಇದೆಯೋ ಅದನ್ನು ಮಾತ್ರ ಸರಿ ಮಾಡುತ್ತೇವೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ನಗರದಲ್ಲಿ ಉದ್ದೇಶ ಪೂರ್ವಕವಾಗಿ ಪರಿಷ್ಕರಣೆಯಲ್ಲಿ ತಪ್ಪಾಗಿದೆ ಅಂತ ಹೇಳುತ್ತಿದ್ದಾರೆ. ಹೀಗಾಗಿ ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರಕ್ಕೆ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದೇವೆ. ಜನರಿಗೆ ಸತ್ಯ ತಿಳಿಸಲು ಸಾರ್ವಜನಿಕರಿಗೆ ಪಠ್ಯ ಪರಿಷ್ಕರಣೆ ದಾಖಲಾತಿ ಪ್ರಕಟ ಮಾಡುತ್ತೇವೆ. ಮುಡಂಬಡಿತ್ತಾಯ ಸಮಿತಿಯಲ್ಲಿ ಏನ್ ಇತ್ತು, ಬರಗೂರು ಸಮಿತಿ ಏನ್ ಮಾಡಿದೆ, ನಾವು ಏನು ಮಾಡಿದ್ದೇವೆ ಅಂತ ಜನರೇ ತೀರ್ಮಾನ ಮಾಡಲಿ. ಸಾರ್ವಜನಿಕರು ಏನಾದರೂ ಆಕ್ಷೇಪಣೆ ಸಲ್ಲಿಸಿದರೆ ಅದನ್ನು ಸರಿ ಮಾಡುತ್ತೇವೆ. ಅಂಬೇಡ್ಕರ್ ಸಂವಿಧಾನ ಶಿಲ್ಪಿ ಎನ್ನುವ ಪದವನ್ನು ಸೇರಿಸುತ್ತೇವೆ. ಬಸವಣ್ಣನವರ ಎರಡು ಸಾಲುಗಳನ್ನು ಸೇರ್ಪಡೆ ಮಾಡುತ್ತೇವೆ. ಸಣ್ಣಪುಟ್ಟ ಲೋಪಗಳು ಆಗುತ್ತದೆ. ಅದನ್ನು ನಾವು ಮುಕ್ತ ಮನಸ್ಸಿನಿಂದ ಸ್ವಾಗತ ಮಾಡುತ್ತೇವೆ ಎಂದಿದ್ದಾರೆ.

ಕಾಂಗ್ರೆಸ್ ದಿಕ್ಕೆಟ್ಟಿದೆ. ಅದಕ್ಕಾಗಿ ಹೀಗೆ ಈ ವಿಚಾರವಾಗಿ ವಿವಾದ ಮಾಡುತ್ತಿದೆ. ಕಾಂಗ್ರೆಸ್‍ಗೆ ಭಯ ಶುರುವಾಗಿದೆ. ದಿಕ್ಕು ತಪ್ಪಿದೆ ಹೀಗಾಗಿ ಇಂತಹ ಸುಳ್ಳು ಹೇಳುತ್ತಿದೆ. ಸಿದ್ದರಾಮಯ್ಯ ಇಷ್ಟು ದಿನ ನಿದ್ರೆ ಮಾಡಿದ್ದರು. ಈಗ ಎದ್ದು ಆರ್‍ಎಸ್‍ಎಸ್ ಬಗ್ಗೆ ಮಾತನಾಡುತ್ತಾರೆ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್‍ಗೆ ರಾಷ್ಟ್ರೀಯತೆ ಬಗ್ಗೆ ಮಕ್ಕಳು ಕಲಿಯುವುದು ಇಷ್ಟ ಇಲ್ಲ. ದೇಶಭಕ್ತಿ ಬಗ್ಗೆ ಕಲಿಯುವುದು ಬೇಕಿಲ್ಲ. ಹೀಗಾಗಿ ಎಲ್ಲದ್ದಕ್ಕೂ ವಿರೋಧ ಮಾಡುತ್ತಿದೆ. ನರಸಿಂಹರಾವ್ ಬರುವವರೆಗೂ ಒಂದೇ ಸಮುದಾಯದವರು ಶಿಕ್ಷಣ ಮಂತ್ರಿ ಆಗಿದ್ದರು ಎನ್ನುವುದು ಇಡೀ ದೇಶಕ್ಕೆ ಗೊತ್ತಿದೆ. 75 ವರ್ಷದ ಕಾಂಗ್ರೆಸ್ ದುರಾಡಳಿತ ಜನರಿಗೆ ಗೊತ್ತಾಗುತ್ತದೆ ಅಂತ ಕಾಂಗ್ರೆಸ್ ವಿರೋಧ ಮಾಡುತ್ತಿದೆ ಎಂದು ಹರಿಹಾಯ್ದಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

12 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

13 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

13 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

13 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

13 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

15 hours ago