ವ್ಲಾಡಿವೋಸ್ಟಾಕ್: ಯಾವುದೇ ದೇಶದ ಆಂತರಿಕ ವ್ಯವಹಾರದಲ್ಲಿ ಇತರ ದೇಶವು ಮೂಗು ತೂರಿಸುವುದನ್ನು ಭಾರತ ಮತ್ತು ರಷ್ಯಾ ಒಪ್ಪುವುದಿಲ್ಲ- ಹೀಗೆಂದು ರಷ್ಯಾ ಹಾಗೂ ಭಾರತ ಜಂಟಿಯಾಗಿ ಬುಧವಾರ ಘೋಷಿಸಿದ್ದು, ಪಾಕಿಸ್ತಾನವನ್ನು ಪರೋಕ್ಷವಾಗಿ ತರಾಟೆಗೆ ತೆಗೆದುಕೊಂಡಿದೆ.
ಎರಡು ದಿನಗಳ ರಷ್ಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ವ್ಲಾಡಿವೊಸ್ಟೋಕ್‌ನಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜೊತೆಗೆ ಬುಧವಾರ ಹಲವು ವಿಚಾರಗಳ ಕುರಿತು ಮಾತುಕತೆ ನಡೆಸಿದ್ದು, ನಂತರ ನಡೆಸಿದ ಜಂಟಿ ಹೇಳಿಕೆಯಲ್ಲಿ ಪಾಕಿಸ್ತಾನವನ್ನು ಪರೋಕ್ಷವಾಗಿ ಉಲ್ಲೇಖೀಸಿ ಈ ಹೇಳಿಕೆ ನೀಡಿದ್ದಾರೆ. ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಗೊಳಿಸಿರುವುದು ಸಂಪೂರ್ಣ ಆಂತರಿಕ ವಿಷಯ ಎಂದು ಭಾರತವು ಅಂತಾರಾಷ್ಟ್ರೀಯ ಸಮುದಾಯಕ್ಕೆ ತಿಳಿಸಿದೆ. ಹೀಗಾಗಿ ಪಾಕಿಸ್ತಾನ ಈ ವಾಸ್ತವವನ್ನು ಒಪ್ಪಿಕೊಳ್ಳಬೇಕು ಎಂದು ಭಾರತವು ಪಾಕ್‌ಗೆ ಸೂಚಿಸಿದೆ. ಈ ನಿಟ್ಟಿನಲ್ಲಿ ಭಾರತಕ್ಕೆ ರಷ್ಯಾ ಬೆಂಬಲ ನೀಡಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…