Featured

ಯಾವುದೇ ಪಕ್ಷದೊಂದಿಗೆ ಮೈತ್ರಿಗೆ ಸಿದ್ಧ , ನಮ್ಮ ಷರತ್ತು ಒಪ್ಪಿದವರ ಜೊತೆ ಸರ್ಕಾರ ನಡೆಸುತ್ತೇವೆ : ಹೆಚ್‌.ಡಿ.ಕುಮಾರಸ್ವಾಮಿ – Vishwanews24

ಯಾವುದೇ ಪಕ್ಷದೊಂದಿಗೆ ಮೈತ್ರಿಗೆ ಸಿದ್ಧ , ನಮ್ಮ ಷರತ್ತಿಗೆ ಒಪ್ಪಿಗೆ ಕೊಟ್ಟರೆ ಮಾತ್ರ ದೋಸ್ತಿ : ಹೆಚ್‌.ಡಿ.ಕುಮಾರಸ್ವಾಮಿ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ ಮತಗಟ್ಟೆ ಸಮೀಕ್ಷೆಗಳು ಹೇಳಿವೆ. ಮೂರು ಪಕ್ಷಗಳು ಅಲರ್ಟ್‌ ಆಗಿದ್ದು, ಸರ್ಕಾರ ರಚನೆಗೆ ಪ್ಲಾನ್‌ ನಡೆಸಿವೆ. ಈ ಹೊತ್ತಿನಲ್ಲೇ ಜೆಡಿಎಸ್‌ ನಾಯಕ ಹೆಚ್‌.ಡಿ.ಕುಮಾರಸ್ವಾಮಿ ಅವರು, ನಾವು ಮೈತ್ರಿಗೆ ಸಿದ್ಧ ಎಂಬ ಸಂದೇಶವನ್ನು ರವಾನಿಸಿದ್ದಾರೆ.

ಮತದಾನ ನಡೆದ ಬೆನ್ನಲ್ಲೇ ಹೆಚ್‌.ಡಿ.ಕುಮಾರಸ್ವಾಮಿ ಅವರು ಸಿಂಗಾಪುರಕ್ಕೆ ಹಾರಿದರು. ವಿದೇಶದಲ್ಲಿ ವಿಶ್ರಾಂತಿ ಪಡೆಯುತ್ತಿದ್ದು, ಅಲ್ಲಿಂದಲೇ ರಾಜಕೀಯ ಲೆಕ್ಕಾಚಾರ ಶುರು ಮಾಡಿದ್ದಾರೆ. ಯಾರೊಂದಿಗಾದರೂ ಓಕೆ, ಮೈತ್ರಿಗೆ ಸಿದ್ಧ. ಆದರೆ ಕೆಲವು ಷರತ್ತುಗಳು ಇವೆ ಎಂದು ಆಪ್ತರ ಮೂಲಕ ಹೆಚ್‌ಡಿಕೆ ಖಡಕ್‌ ಸಂದೇಶ ಕೊಟ್ಟಿದ್ದಾರೆ.

ಯಾರೇ ಮೈತ್ರಿಗೆ ಬಂದರೂ, ನಮ್ಮ ಷರತ್ತಿಗೆ ಒಪ್ಪಿಗೆ ಕೊಟ್ಟರೆ ಮಾತ್ರ ದೋಸ್ತಿ. ನಮ್ಮ ಬೇಡಿಕೆ, ನಮ್ಮ ಷರತ್ತು ಒಪ್ಪಿದವರ ಜೊತೆ ಸರ್ಕಾರ ನಡೆಸುತ್ತೇವೆ. ಎರಡು ಬಾರಿಯಾದ ಅವಾಂತರ ಈ ಬಾರಿ ಆಗಬಾರದು. ದೋಸ್ತಿ ಮಾಡಿಕೊಳ್ಳುವ ಮುನ್ನವೇ ಷರತ್ತುಗಳಿಗೆ ಒಪ್ಪಿಕೊಂಡರೆ ನಾವು ಸಿದ್ಧ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಕುಮಾರಸ್ವಾಮಿ ಷರತ್ತು
ಸಿಎಂ ಜೊತೆಗೆ ಪ್ರಮುಖ ಖಾತೆಗಳು ನಮಗೆ ನೀಡಬೇಕು. ಜಲಸಂಪನ್ಮೂಲ ಇಲಾಖೆ, ಇಂಧನ, ಲೋಕೋಪಯೋಗಿ ಇಲಾಖೆ ಸೇರಿದಂತೆ ಪ್ರಮುಖ ಖಾತೆಗಳು ಕೊಡಬೇಕು. ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಹೈಕಮಾಂಡ್‌ಗಳು ಹಸ್ತಕ್ಷೇಪ ಮಾಡಬಾರದು. ದೋಸ್ತಿ ಸರ್ಕಾರದ ಮಧ್ಯೆ ಯಾವುದೇ ಸಮನ್ವಯ ಸಮಿತಿ ಇರಬಾರದು.

ಯಾವುದೇ ನಿರ್ಧಾರ ತೆಗೆದುಕೊಳ್ಳಲು ಯಾವುದೇ ನಿರ್ಬಂಧ ಹಾಕಬಾರದು. ಸರ್ಕಾರದ ಯಾವುದೇ ನಿರ್ಧಾರ ತೆಗೆದುಕೊಳ್ಳಲು ನನಗೆ ಸ್ವತಂತ್ರ ಕೊಡಬೇಕು. ಜೆಡಿಎಸ್ ಕೊಟ್ಟಿರುವ ಪ್ರಣಾಳಿಕೆಗೆ ಯಾವುದೇ ವಿರೋಧ ಮಾಡದೇ ಜಾರಿಗೆ ಒಪ್ಪಿಕೊಳ್ಳಬೇಕು. ಜೆಡಿಎಸ್ ಭದ್ರಕೋಟೆ ಹಳೆ‌ ಮೈಸೂರು ಭಾಗದ ಜಿಲ್ಲೆಗಳ ಮೇಲೆ ಮೈತ್ರಿ ‌ಪಕ್ಷ ಯಾವುದೇ ಹಸ್ತಕ್ಷೇಪ ಮಾಡಬಾರದು ಎಂದು ಮೈತ್ರಿ ಬಯಸಿ ಬರುವ ಪಕ್ಷಕ್ಕೆ ಕುಮಾರಸ್ವಾಮಿ ಷರತ್ತು ಹಾಕಿದ್ದಾರೆ.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

2 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

10 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

10 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

10 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

10 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

10 hours ago