ಹಾಸನ: ಆಹಾರ ಇಲಾಖೆಯ ಹೊಸ ಮಾನದಂಡದ ಕಾರಣದಿಂದಾಗಿ ರಾಜ್ಯದ ಅನೇಕ ಬಿಪಿಎಲ್, ಎಪಿಎಲ್ ಕಾರ್ಡ್ ರದ್ದಾಗೋ ಭಯ ಪಡಿತರ ಫಲಾನುಭವಿಗಳಲ್ಲಿ ಉಂಟಾಗಿತ್ತು. ಆದ್ರೇ ಯಾವುದೇ ಕಾರ್ಡ್ ರದ್ದು ಮಾಡೋದಿಲ್ಲ ಎಂಬುದಾಗಿ ಆಹಾರ ಮತ್ತು ನಾಗರೀಕ ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟ ಪಡಿಸುವ ಮೂಲಕ ಗುಡ್ ನ್ಯೂಸ್ ನೀಡಿದ್ದಾರೆ.
ಈ ಬಗ್ಗೆ ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿ ಯಾರು ಅರ್ಹರಿದ್ದಾರೋ ಅವರಿಗೆ ಬಿಪಿಎಲ್, ಎಪಿಎಲ್ ಕಾರ್ಡ್ ಪರಿಶೀಲನೆ ಮಾಡಿ, ನೀಡಲಾಗುತ್ತದೆ. ಯಾವುದೇ ಬಿಪಿಎಲ್, ಎಪಿಎಲ್ ಕಾರ್ಡ್ ರದ್ದು ಮಾಡೋದಿಲ್ಲ ಎಂಬುದಾಗಿ ತಿಳಿಸಿದ್ದಾರೆ.
ಕೆಲವರಿಗೆ ಬ್ಯಾಂಕ್ ಸಮಸ್ಯೆ ಕಾರಣದಿಂದಾಗಿ ಪಡಿತರ ರದ್ದಾಗಿತ್ತು. ಇದನ್ನು ಸರಿ ಪಡಿಸೋದಕ್ಕಾಗಿ ಅಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇನ್ನೂ ಮೂರು ತಿಂಗಳಲ್ಲೇ ಹೊಸದಾಗಿ ಬಿಪಿಎಲ್, ಎಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿದ್ದವರಿಗೆ ವಿತರಣೆ ಮಾಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ BPL ಪಡಿತರ ಚೀಟಿಗಾಗಿ 3 ಲಕ್ಷ ಅರ್ಜಿಗಳು ಬಂದಿದ್ದವು. ಈ ಅರ್ಜಿಗಳನ್ನು ಸೂಕ್ತ ರೀತಿಯಲ್ಲಿ ಪರಿಶೀಲನೆ ನಡೆಸಿ, ಅನುಮೋದನೆ ನೀಡಲು ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.
ಶೀಘ್ರವೇ ಹೊಸದಾಗಿ ಬಿಪಿಎಲ್, ಎಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ್ದವರ ಅರ್ಜಿಗಳನ್ನು ಪರಿಶೀಲನೆ ನಡೆಸಿ, ಅರ್ಹ ಫಲಾನುಭವಿಗಳಿಗೆ ಪಡಿತರ ಚೀಟಿಯನ್ನು ವಿತರಣೆ ಮಾಡಲಾಗುತ್ತದೆ. ಯಾವುದೇ ಜನರು ಆತಂಕ ಪಡೋ ಅಗತ್ಯವಿಲ್ಲ. ನಿಗದಿತ ಮಾನದಂಡದಂತೆ ಪರಿಶೀಲನೆ ನಡೆಸಿ, ಅರ್ಹರಿಗೆ ಹೊಸದಾಗಿ BPL, APL ಕಾರ್ಡ್ ವಿತರಣೆ ಮಾಡುವುದಾಗಿ ಹೇಳಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…