Featured

ಯಾವುದೇ ಬಿಪಿಎಲ್, ಎಪಿಎಲ್ ಕಾರ್ಡ್ ರದ್ದು ಮಾಡೋದಿಲ್ಲ : ಸಚಿವ K H ಮುನಿಯಪ್ಪ ಸ್ಪಷ್ಟನೆ – Vishwanews24

ಯಾವುದೇ ಬಿಪಿಎಲ್, ಎಪಿಎಲ್ ಕಾರ್ಡ್ ರದ್ದು ಮಾಡೋದಿಲ್ಲ : ಸಚಿವ K H ಮುನಿಯಪ್ಪ ಸ್ಪಷ್ಟನೆ

ಹಾಸನ: ಆಹಾರ ಇಲಾಖೆಯ  ಹೊಸ ಮಾನದಂಡದ ಕಾರಣದಿಂದಾಗಿ ರಾಜ್ಯದ ಅನೇಕ ಬಿಪಿಎಲ್, ಎಪಿಎಲ್ ಕಾರ್ಡ್ ರದ್ದಾಗೋ ಭಯ ಪಡಿತರ ಫಲಾನುಭವಿಗಳಲ್ಲಿ ಉಂಟಾಗಿತ್ತು. ಆದ್ರೇ ಯಾವುದೇ ಕಾರ್ಡ್ ರದ್ದು ಮಾಡೋದಿಲ್ಲ ಎಂಬುದಾಗಿ ಆಹಾರ ಮತ್ತು ನಾಗರೀಕ ಸಚಿವ ಕೆ.ಹೆಚ್ ಮುನಿಯಪ್ಪ  ಸ್ಪಷ್ಟ ಪಡಿಸುವ ಮೂಲಕ ಗುಡ್ ನ್ಯೂಸ್ ನೀಡಿದ್ದಾರೆ.

ಈ ಬಗ್ಗೆ ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿ ಯಾರು ಅರ್ಹರಿದ್ದಾರೋ ಅವರಿಗೆ ಬಿಪಿಎಲ್, ಎಪಿಎಲ್ ಕಾರ್ಡ್ ಪರಿಶೀಲನೆ ಮಾಡಿ, ನೀಡಲಾಗುತ್ತದೆ. ಯಾವುದೇ ಬಿಪಿಎಲ್, ಎಪಿಎಲ್ ಕಾರ್ಡ್ ರದ್ದು ಮಾಡೋದಿಲ್ಲ ಎಂಬುದಾಗಿ ತಿಳಿಸಿದ್ದಾರೆ.

ಕೆಲವರಿಗೆ ಬ್ಯಾಂಕ್ ಸಮಸ್ಯೆ ಕಾರಣದಿಂದಾಗಿ ಪಡಿತರ ರದ್ದಾಗಿತ್ತು. ಇದನ್ನು ಸರಿ ಪಡಿಸೋದಕ್ಕಾಗಿ ಅಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇನ್ನೂ ಮೂರು ತಿಂಗಳಲ್ಲೇ ಹೊಸದಾಗಿ ಬಿಪಿಎಲ್, ಎಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿದ್ದವರಿಗೆ ವಿತರಣೆ ಮಾಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ BPL ಪಡಿತರ ಚೀಟಿಗಾಗಿ 3 ಲಕ್ಷ ಅರ್ಜಿಗಳು ಬಂದಿದ್ದವು. ಈ ಅರ್ಜಿಗಳನ್ನು ಸೂಕ್ತ ರೀತಿಯಲ್ಲಿ ಪರಿಶೀಲನೆ ನಡೆಸಿ, ಅನುಮೋದನೆ ನೀಡಲು ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.

ಶೀಘ್ರವೇ ಹೊಸದಾಗಿ ಬಿಪಿಎಲ್, ಎಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ್ದವರ ಅರ್ಜಿಗಳನ್ನು ಪರಿಶೀಲನೆ ನಡೆಸಿ, ಅರ್ಹ ಫಲಾನುಭವಿಗಳಿಗೆ ಪಡಿತರ ಚೀಟಿಯನ್ನು ವಿತರಣೆ ಮಾಡಲಾಗುತ್ತದೆ. ಯಾವುದೇ ಜನರು ಆತಂಕ ಪಡೋ ಅಗತ್ಯವಿಲ್ಲ. ನಿಗದಿತ ಮಾನದಂಡದಂತೆ ಪರಿಶೀಲನೆ ನಡೆಸಿ, ಅರ್ಹರಿಗೆ ಹೊಸದಾಗಿ BPL, APL ಕಾರ್ಡ್ ವಿತರಣೆ ಮಾಡುವುದಾಗಿ ಹೇಳಿದರು.

Vishwa News 24

Recent Posts

ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ ಅಧಿಕೃತವಾಗಿ ಸೇರ್ಪಡೆ – vishwanews24

ದೇಶದ ಶೈಕ್ಷಣಿಕ ಇತಿಹಾಸದಲ್ಲೇ ಅತ್ಯಂತ ದೊಡ್ಡ ಪಠ್ಯ ಪರಿಷ್ಕರಣೆ.. ಮೊದಲ ಬಾರಿಗೆ NCERT 9ನೇ ಕ್ಲಾಸ್‌ನಲ್ಲಿ ತುರ್ತು ಪರಿಸ್ಥಿತಿ ಪಠ್ಯ…

25 minutes ago

ಮಂಗಳೂರು: ಜೂ.29ರಂದು ವಿಶೇಷ ಸಹಕಾರ ಸಪ್ತಾಹ ಉದ್ಘಾಟನೆ – vishwanews24

ಮಂಗಳೂರು:  ಜೂ.29ರಿಂದ ಜು.6ರವರೆಗೆ ದೇಶದಾದ್ಯಂತ ವಿಶೇಷ ಸಹಕಾರ ಸಪ್ತಾಹ ಆಚರಣೆ ಮಂಗಳೂರು: ಸುಮಾರು 122 ವರ್ಷಗಳ ಇತಿಹಾಸವಿರುವ ರಾಷ್ಟ್ರದ ಸಹಕಾರ…

43 minutes ago

ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ – vishwanews24

ಉಡುಪಿ: ಬಡಗುಬೆಟ್ಟು ಸೊಸೈಟಿಯಿಂದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ; 15 ಲಕ್ಷ ಮೌಲ್ಯದ ಪರಿಕರ ವಿತರಣೆ ಉಡುಪಿ: ಸಹಕಾರ…

55 minutes ago

ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ – vishwanews24

ಇಂದು ಮಂಗಳೂರಿಗೆ ಶಾರುಕ್ ಖಾನ್ ಆಗಮನ : ಸಾರ್ವಜನಿಕರಿಗೆ ಪೋಲಿಸರ ಮಾರ್ಗಸೂಚಿ ಪ್ರಕಟ ಮಂಗಳೂರು: ನಗರದಲ್ಲಿ ಗುರುವಾರ ಆಯೋಜಿಸಲಾಗಿರುವ ಬಹುನಿರೀಕ್ಷಿತ…

1 hour ago

ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಬೆಂಗಳೂರು: ನಟಿ ಕೃಷಿ ತಾಪಂಡ ಅವರ ಆರ್‌ಆರ್ ನಗರದ …

2 hours ago

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ : ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ – vishwanews24

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ  ; ಸಿನಿಮಾಗಳಿಂದ ತಾತ್ಕಾಲಿಕ ಬ್ರೇಕ್ ನಟಿ ಸಮಂತಾ  ರುತ್ ಪ್ರಭು ತಾವು ಮೊದಲ…

2 hours ago