Featured

ಯಾವುದೇ ಷರತ್ತುಗಳು ಬೇಡ , ಬಿಜೆಪಿ ಸೇರ್ಪಡೆಯಾಗಿ ಎಂದು ಅರುಣ್ ಕುಮಾರ್ ಪುತ್ತಿಲಗೆ ಸೂಚಿಸಿದ್ದೇನೆ : ಬಿವೈ ವಿಜಯೇಂದ್ರ – Vishwanews24

ಯಾವುದೇ ಷರತ್ತುಗಳು ಬೇಡ , ಬಿಜೆಪಿ ಸೇರ್ಪಡೆಯಾಗಿ ಎಂದು ಅರುಣ್ ಕುಮಾರ್ ಪುತ್ತಿಲಗೆ ಸೂಚಿಸಿದ್ದೇನೆ : ಬಿವೈ ವಿಜಯೇಂದ್ರ

ಮೈಸೂರು: ದಕ್ಷಿಣ ಕನ್ನಡ ಜಿಲ್ಲೆಯ ಹಿಂದೂ ಮುಖಂಡ, ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್ ಕುಮಾರ್ ಪುತ್ತಿಲ ಅವರು ಭೇಟಿಯಾಗಿರುವುದು ನಿಜ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಪುತ್ತಿಲ ನನ್ನನ್ನು ಭೇಟಿ ಮಾಡಿದ್ದು ಸತ್ಯ.

ಬೆಷರತ್ ಆಗಿ ಬಿಜೆಪಿ ಸೇರ್ಪಡೆಯಾಗಿ ಎಂದು ಅವರಿಗೆ ಸೂಚಿಸಿದ್ದೇನೆ. ಯಾವುದೇ ಷರತ್ತುಗಳು ಬೇಡ. ಪ್ರಧಾನಿ ಮೋದಿ ನಾಯಕತ್ವಕ್ಕಾಗಿ ಎಲ್ಲರೂ ಒಂದಾಗಬೇಕು ಎಂದು ಹೇಳಿದ್ದೇನೆ ಎಂದು ತಿಳಿಸಿದ್ದಾರೆ. ಪುತ್ತಿಲ ವಿಚಾರವಾಗಿ ದಕ್ಷಿಣ ಕನ್ನಡದ ಸ್ಥಳೀಯ ಮುಖಂಡರ ಜೊತೆ ಚರ್ಚೆ ಮಾಡುತ್ತೇನೆ. ಎಲ್ಲಾ ಕ್ಷೇತ್ರಕ್ಕೂ ನಮಗೆ ಬಿಜೆಪಿ, ಕಮಲ ಚಿಹ್ನೆಯಷ್ಟೇ ಅಭ್ಯರ್ಥಿ. ಬೇರೆ ಯಾವ ಭಿನ್ನಾಭಿಪ್ರಾಯಗಳೂ ನಮ್ಮ ನಡುವೆ ಇಲ್ಲ ಎಂದು ಅವರು ತಿಳಿಸಿದ್ದಾರೆ.

ಪುತ್ತಿಲ ಪರಿವಾರವನ್ನು ಬಿಜೆಪಿ ಜತೆ ವಿಲೀನಗೊಳಿಸಿ ಪಕ್ಷ ಸೇರ್ಪಡೆಯಾಗುವುದಾದರೆ ಸ್ವಾಗತ ಎಂದು ಬಿಜೆಪಿ ನಾಯಕರು ಹೇಳಿದ್ದರು. ಇದರ ಬೆನ್ನಲ್ಲೇ ಪುತ್ತೂರಿನಲ್ಲಿ ಪರಿವಾರದ ಕಾರ್ಯಕರ್ತರ ಸಮಾಲೋಚನಾ ಸಭೆ ನಡೆಸಿದ್ದ ಪುತ್ತಿಲ, ಲೋಕಸಭಾ ಚುನಾವಣೆಗೂ ಮುನ್ನ ಪುತ್ತೂರು ಬಿಜೆಪಿ ಮಂಡಲದ ಅಧ್ಯಕ್ಷ ಸ್ಥಾನ ನೀಡಿದರೆ ಮಾತ್ರ ಬಿಜೆಪಿಗೆ ಸೇರ್ಪಡೆಯಾಗುವುದಾಗಿ ಹೇಳಿದ್ದರು. ಅಲ್ಲದೆ, ಈ ವಿಚಾರವಾಗಿ 3 ದಿನಗಳ ಒಳಗಾಗಿ ನಿರ್ಧಾರ ತಿಳಿಸಬೇಕು ಎಂದೂ ಬಿಜೆಪಿಗೆ ಗಡುವು ನೀಡಿದ್ದರು. ಇದಾಗಿ ಹಲವು ದಿನಗಳೂ ಕಳೆದೂ ಈ ವಿಚಾರವಾಗಿ ಯಾವುದೇ ಬೆಳವಣಿಗೆ ಆಗಿಲ್ಲ ಎಂಬುದು ಗಮನಾರ್ಹ. ಇದೀಗ ಪುತ್ತಿಲ ಮಾತುಕತೆ ನಡೆಸಿರುವ ಬಗ್ಗೆ ವಿಜಯೇಂದ್ರ ಹೇಳಿಕೆ ನೀಡಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

3 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

4 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

4 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

4 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

4 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

5 hours ago