ಬೆಂಗಳೂರು (VISHWANEWS24): ಬಿಜೆಪಿ, ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬರಲು ಇಚ್ಛಿಸಿರುವ ಶಾಸಕರು ಹಾಗೂ ಸಚಿವರ ಬಳಿ ನಾನಾಗಿಯೇ ಮಾತನಾಡುವುದಿಲ್ಲ. ಅವರಾಗಿ ಬಂದರೆ ಮಾತನಾಡುತ್ತೇನೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಕಾಂಗ್ರೆಸ್ ಬಿಟ್ಟು ಹೋದವರನ್ನು ಮತ್ತೆ ಸೇರಿಸಿಕೊಳ್ಳುವುದಿಲ್ಲ ಎಂದು ವಿಧಾನಸಭೆಯಲ್ಲಿ ಹೇಳಿದ್ದರ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹೌದು ಹೇಳಿದ್ದೆ. ಆ ಮಾತಿಗೆ ಈಗಲೂ ಬದ್ಧ.ಅವರನ್ನು ಸೇರಿಸಿಕೊಳ್ಳುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ ಎಂದರು.
ಇನ್ನು ಕಾಂಗ್ರೆಸ್ ಸಿದ್ಧಾಂತ ಒಪ್ಪಿ ನಮ್ಮ ಪಕ್ಷಕ್ಕೆ ಬರುವವರಿಗೆ ಸ್ವಾಗತವಿದೆ. ಯಾವುದೇ ಷರತ್ತು ಇಲ್ಲದೆ ಬಂದರೆ ಸೇರಿಸಿಕೊಳ್ಳಲಾಗುವುದು ಎಂದಿದ್ದಾರೆ.
ಚಾಮುಂಡೇಶ್ವರಿ ಕ್ಷೇತ್ರದಿಂದ ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡಬಾರದು ಎಂದುಕೊಂಡಿದ್ದೇನೆ. ಬಾದಾಮಿ, ವರುಣಾ ಸೇರಿ ಹತ್ತು ಕ್ಷೇತ್ರಗಳಿಂದ ಸ್ಪರ್ಧೆಗೆ ಆಹ್ವಾನ ಇದೆ. ಎಲ್ಲಿ ಸ್ಪರ್ಧೆ ಮಾಡಬೇಕು ಎಂದು ತೀರ್ಮಾನಿಸಿಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ :
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…