Featured

ಯಾವ ಪವರ್ ಇಲ್ಲ, ಯಾವ ಶೇರಿಂಗ್ ಇಲ್ಲ,  ಐದು ವರ್ಷ ಕಾಂಗ್ರೆಸ್ ಸರ್ಕಾರ ಇರಲಿದೆ : ಡಿ.ಕೆ.ಶಿವಕುಮಾರ್ – vishwanews24

ನಮ್ಮ ಸರ್ಕಾರದ ವಿಚಾರದಲ್ಲಿ ಯಾರೂ ಭವಿಷ್ಯ ನುಡಿಯೋದು ಬೇಡ : ಡಿಸಿಎಂ ವಿನಂತಿ

ಬೆಂಗಳೂರು: ಯಾವ ಪವರ್ ಇಲ್ಲ, ಯಾವ ಶೇರಿಂಗ್ ಇಲ್ಲ. ಐದು ವರ್ಷ ಕಾಂಗ್ರೆಸ್ ಸರ್ಕಾರ ಇರಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದರು.

ಜಾತಿ ಗಣತಿಗೆ ಪ್ರಬಲ ಸಮುದಾಯಗಳ ವಿರೋಧ ವಿಚಾರವಾಗಿ ಮಾತನಾಡಿ, ಯಾವ ಸಭೆಯೂ ಇಲ್ಲ, ನನಗೆ ತಿಳಿದಂತೆ ಯಾವ ಸಭೆಯೂ ಇಲ್ಲ. ಸಿಎಂ ಕ್ಯಾಬಿನೆಟ್ ಸಭೆಗೆ ತರ್ತೀನಿ ಅಂತ ಹೇಳಿದ್ದಾರೆ. ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆಯಾಗಲಿದೆ ಎಂದರು.

ನಾನು, ಸಿಎಂ ಸಭೆ ಕರೆದಿದ್ದೇವೆ. ಎಲ್ಲಾ ಸಭೆ ರದ್ದು ಮಾಡಿ ಸಂಜೆ ಪದಾಧಿಕಾರಿಗಳ ಇತರೆ ಸಭೆ ಇದೆ. ಸುರ್ಜೇವಾಲ ಬರ್ತಾರೆ, ಸಂಜೆ ಶಾಸಕಾಂಗ ಪಕ್ಷದ ಸಭೆ ಇದೆ. ಎಂಎಲ್‌ಎ, ಮಂತ್ರಿಗಳಿಗೆ ಜವಾಬ್ದಾರಿ ಕೊಡಬೇಕಿದೆ.  ಸಿಎಂ, ನಾನು ದೆಹಲಿಗೆ ಹೋಗ್ತಿದ್ದೇವೆ. ದೆಹಲಿಯಲ್ಲಿ ಹೊಸ ಕಟ್ಟಡ ಉದ್ಘಾಟನೆಯಲ್ಲಿ ಭಾಗಿಯಾಗಲಿದ್ದೇವೆ ಎಂದರು.

ಎಲ್ಲಾ ಇಲಾಖೆಯಲ್ಲಿ ರೇಟ್ ಕಾರ್ಡ್ ಫಿಕ್ಸ್ ಮಾಡಿದ್ದಾರೆ ಅಂತ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿ, ಹೌದಾ.? ಅವರ ರೇಟ್ ಕಾರ್ಡಾ? ಅವರ ಕಾರ್ಡ್ ಫಿಕ್ಸ್ ಇರಬೇಕು. ಅವರ ಅನುಭವ ಮಾತಾಡ್ತಿದ್ದಾರೆ, ನನಗೆ ಗೊತ್ತಿಲ್ಲ. ಅದ್ಯಾವ್ದೋ ಪೂಜೆದೆಲ್ಲಾ ಹೇಳಿದ್ದಾರೆ ಅಲ್ವಾ? ಅದು ಅವರ ಅನುಭವ. ಅವರು ಕದ್ದು ಮಾಡ್ತಾರೆ, ನಾನು ಓಪನ್ ಆಗಿ ಮಾಡ್ತೀನಿ. ಅವರು ಕದ್ದು ಪೂಜೆ ಮಾಡ್ತಾರೆ. ನಾನು ಓಪನ್ ಆಗಿ ದಿನಾ ಬೆಳಗ್ಗೆ ಪೂಜೆ ಮಾಡ್ತೀನಿ. ನಾನು ಹಿಂದೆ ಮುಂದೆ ಮಾಡಲ್ಲ. ನಿಮ್ಮಂತವರು ತೊಂದರೆ ಕೊಡ್ತಾರೆ. ರಕ್ಷಣೆ ಕೊಡಪ್ಪಾ ಅಂತ ಮನವಿ ಮಾಡ್ತೀನಿ ಎಂದು ಟಾಂಗ್ ಕೊಟ್ಟರು.

ವಿನಯ್ ಗುರೂಜಿ ಭವಿಷ್ಯ ಬಗ್ಗೆ ಮಾತನಾಡಿ, ನಾನು ಎಲ್ಲಾ ಸ್ವಾಮೀಜಿ, ಗುರೂಜಿಗಳಿಗೆ ವಿನಂತಿ ಮಾಡ್ತೀನಿ. ನಮ್ಮ ಸರ್ಕಾರದ ವಿಚಾರದಲ್ಲಿ ತಮ್ಮ ಯಾವ ಹೇಳಿಕೆ ಬೇಡ. ನಮ್ಮ ಸರ್ಕಾರ ಸುಭದ್ರವಾಗಿ ನಡೆಯುತ್ತಿದೆ. ರಾಜ್ಯದ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಅವರು ಕೆಲಸ ಮಾಡ್ತಿದ್ದಾರೆ. ಅವರ ನೇತೃತ್ವದಲ್ಲಿ ನಾವೆಲ್ಲ ಒಟ್ಟಿಗೆ ಕೆಲಸ ಮಾಡ್ತಿದ್ದೇವೆ. ಯಾರೂ ಭವಿಷ್ಯ ನುಡಿಯೋದು ಬೇಕಿಲ್ಲ ಎಂದು ಮನವಿ ಮಾಡಿದರು.

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

5 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

8 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

11 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

12 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

12 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

12 hours ago