ಮಂಗಳೂರು : ದೇಶದ ಬ್ಯಾಂಕ್ ಗಳಲ್ಲಿ ಒಂದಾದ ಯುಕೊ ಬ್ಯಾಂಕ್ 41 ಸಾವಿರಕ್ಕೂ ಅಧಿಕ ಖಾತೆದಾರರ ಖಾತೆಗೆ ಸುಮಾರು 820 ಕೋಟಿ ರೂಪಾಯಿ ತಾಂತ್ರಿಕ ದೋಷದಿಂದ ಜಮೆಯಾಗಿದೆ ಎಂದು ಬ್ಯಾಂಕ್ ತಿಳಿಸಿದ್ದು, ಈ ಸಂಬಂಧ ಸಿಬಿಐ ಎಫ್ಐಆರ್ ದಾಖಲಿಸಿದ್ದು, ಮಂಗಳೂರು ಸೇರಿದಂತೆ 13 ಸ್ಥಳಗಳಲ್ಲಿ ಶೋಧ ನಡೆಸಿದೆ.
ಈ ಕುರಿತು ಯುಕೊ ಬ್ಯಾಂಕ್, ಸಂಶಯಾಸ್ಪದ ಐಎಂಪಿಎಸ್ ವ್ಯವಹಾರಗಳಿಗೆ ಸಂಬಂಧಿಸಿ ತನ್ನೊಂದಿಗೆ ಕಾರ್ಯ ನಿರ್ವಹಿಸುತ್ತಿದ್ದ ಇಬ್ಬರು ಎಂಜಿನಿಯರ್ ಹಾಗೂ ಇತರ ಕೆಲ ಅಪರಿಚಿತರ ವಿರುದ್ಧ ದೂರು ನೀಡಿದೆ. ಈ ದೂರಿನ ಆಧಾರದಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ನ. 10 ಹಾಗೂ 13ರ ಮಧ್ಯೆ 820 ಕೋಟಿ ರೂ. ಮೊತ್ತವನ್ನು ಏಳು ಖಾಸಗಿ ಬ್ಯಾಂಕ್‌ಗಳ 14,000 ಖಾತೆದಾರರಿಂದ ಐಎಂಪಿಎಸ್ ಆಂತರಿಕ ವಹಿವಾಟುಗಳ ಮೂಲಕ ಯುಕೋ ಬ್ಯಾಂಕ್‌ನ 41,000 ಖಾತೆದಾರರಿಗೆ ವರ್ಗಾಯಿಸಲಾಗಿದೆ ಎಂದು ಆರೋಪಿಸಲಾಗಿದೆ.
ಹುಡುಕಾಟದ ಸಮಯದಲ್ಲಿ, ಮೊಬೈಲ್ ಫೋನ್‌ಗಳು, ಲ್ಯಾಪ್‌ಟಾಪ್‌ಗ್ಳು, ಕಂಪ್ಯೂಟರ್ ಸಿಸ್ಟಮ್‌ಗಳು, ಇಮೇಲ್ ಆಕ್ರೈವ್‌ಗಳು ಮತ್ತು ಡೆಬಿಟ್/ಕ್ರೆಡಿಟ್ ಕಾರ್ಡ್‌ಗಳು ಸೇರಿದಂತೆ ಎಲೆಕ್ಟ್ರಾನಿಕ್ ಪುರಾವೆಗಳನ್ನು ಪಡೆಯಲಾಗಿದೆ.
ಅಚಾನಕ್ ಆಗಿ ಖಾತೆಗೆ ಹಣ ಬಿದ್ದ ಕೂಡಲೇ ಕೆಲವರು ವಿತ್‌ಡ್ರಾ ಕೂಡ ಮಾಡಿಕೊಂಡಿದ್ದಾರೆ. ಎಲ್ಲ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ ಎಂದು ಸಿಬಿಐ ತಿಳಿಸಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…