Featured

ಯುಪಿಎ ಅವಧಿಯ ಸಂದರ್ಭ ಭ್ರಷ್ಟಾಚಾರದಲ್ಲಿ ಮುಳುಗಿದ್ದ ಕೈ ಮುಖಂಡರಿಗೆ ಈಗ ವಿಲವಿಲ ಒದ್ದಾಡುವಂತಾಗಿದೆ : ಪ್ರಹ್ಲಾದ್‌ ಜೋಶಿ -Vishwanews24

ಯುಪಿಎ ಅವಧಿಯ ಸಂದರ್ಭ ಭ್ರಷ್ಟಾಚಾರದಲ್ಲಿ ಮುಳುಗಿದ್ದ ಕೈ ಮುಖಂಡರಿಗೆ ಈಗ ವಿಲವಿಲ ಒದ್ದಾಡುವಂತಾಗಿದೆ : ಪ್ರಹ್ಲಾದ್‌ ಜೋಶಿ -Vishwanews24

ಬೆಂಗಳೂರು : “ಯುಪಿಎ ಅವಧಿಯ ಸಂದರ್ಭ ಭ್ರಷ್ಟಾಚಾರದಲ್ಲಿ ಮುಳುಗಿದ್ದ ಕೈ ಮುಖಂಡರಿಗೆ ಈಗ ವಿಲವಿಲ ಒದ್ದಾಡುವಂತಾಗಿದೆ” ಎಂದು ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದ್ದಾರೆ.

ಬಿಜೆಪಿ ರಾಜ್ಯ ಮಟ್ಟದ ‘ಇ ಪ್ರಶಿಕ್ಷಣ’ ಚಿಂತನವರ್ಗದಲ್ಲಿ ವೆಬೆಕ್ಸ್‌ ಮೂಲಕ ಮಾತನಾಡಿದ ಅವರು, “ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಒದಗಿಸುವ ವಿವಿಧ ಆರ್ಥಿಕ ನೆರವನ್ನು ನೇರ ನಗದು ವರ್ಗಾವಣೆಯ ವ್ಯವಸ್ಥೆಯನ್ನು ಅನುಷ್ಠಾನಕ್ಕೆ ತಂದಿರುವ ಕಾರಣ ಒಂದು ರೂ. ಕೂಡಾ ಭ್ರಷ್ಟಾಚಾರ ಮಾಡಲು ಆಗುತ್ತಿಲ್ಲ. ಹಾಗಾಗಿ ಭ್ರಷ್ಟಾಚಾರದಲ್ಲಿ ಮುಳುಗಿದ್ದ ಕೈ ಮುಖಂಡರಿಗೆ ಈಗ ವಿಲವಿಲ ಒದ್ದಾಡುವಂತಾಗಿದೆ” ಎಂದಿದ್ದಾರೆ.

“ಪ್ರಧಾನಿ ಮೋದಿ ಅವರು 46 ಕೋಟಿ ಜನರ ಬ್ಯಾಂಕ್‌ ಖಾತೆಗಳನ್ನು ಜನ್‌ಧನ್‌‌ ಯೋಜನೆಯಡಿ ತೆರೆಸಿ ನೇರ ನಗದು ವರ್ಗಾವಣೆ ಜಾರಿಗೆ ತರುವ ಮೂಲಕ ಭ್ರಷ್ಟಾಚಾರ ಕಡಿವಾಣ ಹಾಕಿದ್ದಾರೆ. ಬ್ಯಾಂಕ್‌ಗಳ ರಾಷ್ಟ್ರೀಕರಣ ಮಾಡಿದರು ಕೂಡಾ ದೇಶದ ಬಡ ಜನರಿಗೆ ಅದರಿಂದ ಪ್ರಯೋಜನವಾಗಲಿಲ್ಲ. ಕಾಂಗ್ರೆಸ್ಸಿಗರ ಗರೀಬಿ ಹಠಾವೋ ಒಂದು ಘೋಷಣೆಯಾಗಿತ್ತು. ಆದರೆ, ಅದರಿಂದ ಬಡ ಜನರ ಅಭಿವೃದ್ದಿಯಾಗಿಲ್ಲ. ಅವರ ಅವಧಿಯಲ್ಲಿ ಭ್ರಷ್ಟಾಚಾರ ಹೆಚ್ಚಾಗಿತ್ತು. ಆದರೆ, ಪ್ರಧಾನಿ ಮೋದಿ ಅವರ ಒಂದು ತೀರ್ಮಾನ ಬಡವರ ಪಾಲಿಗೆ ಬೆಳಕಾಗಿದೆ” ಎಂದು ತಿಳಿಸಿದ್ದಾರೆ.

“ಲಕ್ಷಾಂತರ ಹಳ್ಳಿಗಳಿಗೆ ಜಲ ಮಿಷನ್‌ ಯೋಜನೆಯಡಿ ಪ್ರಯೋಜನವಾಗಿದೆ. ಹುಬ್ಬಳ್ಳಿ, ಬೆಳಗಾವಿ, ತೋರಣಗಲ್‌, ಬೀದರ್‌ ಹಾಗೂ ಕಲಬುರ್ಗಿಯಲ್ಲಿ ಉಡಾನ್‌ ಯೋಜನೆಯಡಿ ವಿಮಾನ ನಿಲ್ದಾಣಗಳನ್ನು ಅಭಿವೃದ್ದಿ ಪಡಿಸಲಾಯಿತು. ಲಕ್ಷಾಂತರ ಹಳ್ಳಿಗಳಿಗೆ ಉಜಾಲಾ ಯೋಜನೆಯಡಿ ವಿದ್ಯುತ್ ಸಂರ್ಕ ಕಲ್ಪಿಸಲಾಗಿದೆ. ಕಿಸಾನ್‌ ಸಮ್ಮಾನ್‌ ಯೋಜನೆಯಡಿ ರೈತರು ಸ್ವಾವಲಂಬಿಯಾಗುವ ಸಲುವಾಗಿ ಕೈಗೊಂಡ ಮಹತ್ವದ ಕಾರ್ಯವಾಗಿದೆ” ಎಂದಿದ್ದಾರೆ.

Vishwa News 24

Recent Posts

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

1 hour ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

2 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

2 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

2 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

2 hours ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

3 hours ago