ಲಖನೌ: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಮತ ಎಣಿಕೆ ಪ್ರಗತಿಯಲ್ಲಿದ್ದು, ಉತ್ತರ ಪ್ರದೇಶದಲ್ಲಿ ಬಿಜೆಪಿ ಬಹುಮತದತ್ತ ಸಾಗುತ್ತಿದೆ.
ಉತ್ತರ ಪ್ರದೇಶದಲ್ಲಿ ಮಧ್ಯಾಹ್ನದ ವೇಳೆಗೆ ಬಿಜೆಪಿ ಮೈತ್ರಿಕೂಟ 271ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ. ಸಮಾಜವಾದಿ ಪಕ್ಷ ಮೈತ್ರಿಕೂಟ 121ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ. ಕಾಂಗ್ರೆಸ್ ಹಾಗೂ ಬಿಎಸ್‌ಪಿ 4 ಕ್ಷೇತ್ರಗಳಲ್ಲಿ, ಇತರರು 3 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದಾರೆ. ಇದರೊಂದಿಗೆ, ಬಿಜೆಪಿ ಮರಳಿ ಅಧಿಕಾರಕ್ಕೇರುವುದು ಬಹುತೇಕ ಖಚಿತಗೊಂಡಿದೆ.
ಉತ್ತರ ಪ್ರದೇಶದಲ್ಲಿ ಬಿಜೆಪಿ ಬಹುಮತ ಗಳಿಸಿದರೆ, 1985ರ ಬಳಿಕ ಇದೇ ಮೊದಲ ಬಾರಿಗೆ ಆಡಳಿತ ಪಕ್ಷವೇ ಚುನಾವಣೆಯಲ್ಲಿ ಗೆದ್ದು ಸತತ ಎರಡನೇ ಬಾರಿಗೆ ಅಧಿಕಾರಕ್ಕೇರಿದಂತಾಗಲಿದೆ ಎಂದು ‘ದಿ ಪ್ರಿಂಟ್’ ವರದಿ ಮಾಡಿದೆ.
ಯೋಗಿ ಆದಿತ್ಯನಾಥ್ ಅವರೇ ಇನ್ನೊಂದು ಅವಧಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿಯಾದರೆ ಅದೂ ಸಹ ದಾಖಲೆಯಾಗಲಿದೆ. 1950ರ ಬಳಿಕ ಇದೇ ಮೊದಲ ಬಾರಿಗೆ, ಐದು ವರ್ಷಗಳ ಪೂರ್ಣಾವಧಿ ಆಡಳಿತ ನಡೆಸಿದ ಬಳಿಕ ಮತ್ತೆ ಅಧಿಕಾರ ಉಳಿಸಿಕೊಂಡ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಗುರುತಿಸಿಕೊಳ್ಳಲಿದ್ದಾರೆ. 1950ರಿಂದ 54ರ ವರೆಗೆ ಗೋವಿಂದ ವಲ್ಲಭ ಪಂತ್ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದರು. 1955ರಿಂದ 61 ರವರೆಗೆ ಅವರೇ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿದ್ದರು.
2017ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 312 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೆ, ಎಸ್‌ಪಿ– 47, ಬಿಎಸ್‌ಪಿ– 19 ಹಾಗೂ ಕಾಂಗ್ರೆಸ್– 07ರಲ್ಲಿ ಗೆಲುವು ಸಾಧಿಸಿದ್ದವು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…