Featured

ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್‌ ಗಾಂಧಿ ಆರೋಪ – vishwanews24

ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ : ರಾಹುಲ್‌ ಗಾಂಧಿ ಆರೋಪ

ಹೊಸದಿಲ್ಲಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ಆರೋಪಿಗಳಿಗೆ ಶಿಕ್ಷೆ ವಿಧಿಸಲು ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಲಾಗುವುದು ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಎಕ್ಸ್‌ ಪೋಸ್ಟ್‌ಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ಯುವಕರ ಭವಿಷ್ಯಕ್ಕೆ ಅತಿ ಹೆಚ್ಚು ಹಾನಿ ಮಾಡಿರುವುದು ಪ್ರಧಾನಿ ಮೋದಿ ಅವರೇ ಎಂದು ಅವರು ಆರೋಪಿಸಿದ್ದಾರೆ.

ಗುರುವಾರ ಬೆಳಿಗ್ಗೆ ಪ್ರಧಾನಿ ಮೋದಿ ಎಕ್ಸ್‌ನಲ್ಲಿ, ‘ನಮ್ಮ ಯುವಕರ ಭವಿಷ್ಯಕ್ಕಿಂತ ಮುಖ್ಯವಾದುದು ಬೇರೆ ಯಾವುದೂ ಇಲ್ಲ. ಯುವಕರ ಭವಿಷ್ಯಕ್ಕೆ ಹಾನಿ ಉಂಟುಮಾಡಿದವರನ್ನು ಬಿಡುವುದಿಲ್ಲ’ ಎಂದು ಪೋಸ್ಟ್‌ ಮಾಡಿದ್ದರು. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ಆರೋಪಿಗಳಿಗೆ ಶಿಕ್ಷೆ ವಿಧಿಸಲು ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಲಾಗುವುದು ಎಂದೂ ಅವರು ಘೋಷಿಸಿದ್ದರು.

ಇದನ್ನೂ ಓದಿ :

ಇದಕ್ಕೆ ಪ್ರತಿಕ್ರಿಯಿಸಿದ ರಾಹುಲ್‌ ಗಾಂಧಿ, ‘ನೀವು ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಸಂಪೂರ್ಣವಾಗಿ ಧ್ವಂಸಗೊಳಿಸಲು ಹಾಗೂ ಅದನ್ನು ನಿಮ್ಮ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಅವಕಾಶ ಮಾಡಿಕೊಟ್ಟಿದ್ದೀರಿ. ಅದನ್ನು ಪ್ರೋತ್ಸಾಹಿಸಿದ್ದೀರಿ. ಅಲ್ಲದೆ, ಅದಕ್ಕೆ ಕಾರಣರಾದ ಪ್ರತಿಯೊಬ್ಬರನ್ನೂ ರಕ್ಷಿಸಿದ್ದೀರಿ’ ಎಂದು ಆರೋಪಿಸಿದ್ದಾರೆ.

‘ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು. ವಿದ್ಯಾರ್ಥಿಗಳಿಗೆ ಬಹಿರಂಗವಾಗಿ ಕ್ಷಮೆಯಾಚಿಸಬೇಕು. ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬುದು ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಸ್ಪಷ್ಟ ಬೇಡಿಕೆಯಾಗಿದೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ :

ಪ್ರಧಾನಿಯವರ ಹೇಳಿಕೆಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಪ್ರತಿಕ್ರಿಯಿಸಿದ್ದಾರೆ. ‘ಮೋದಿ ಸರ್ಕಾರದ ಆಡಳಿತದಲ್ಲಿ ದೇಶದ ಶಿಕ್ಷಣ ವ್ಯವಸ್ಥೆಯು ಸಂಪೂರ್ಣವಾಗಿ ನಶಿಸಿಹೋಗಿದೆ. ಪ್ರಧಾನಿ ಹವಾಮಾನ ನಿಯಂತ್ರಿತ ಐಷಾರಾಮಿ ಕೊಠಡಿಗಳಿಂದ ಹೊರಬಂದು, ಬೀದಿಗಳಲ್ಲಿ ರಕ್ತ ಸುರಿಸಿದ ಯುವಕ-ಯುವತಿಯರ ಕಣ್ಣುಗಳನ್ನು ನೇರವಾಗಿ ನೋಡಲಿ’ ಎಂದು ಅವರು ಹೇಳಿದ್ದಾರೆ.

ಸಿಜೆಪಿ ಸಂಸ್ಥಾಪಕ ಅಭಿಜೀತ್‌ ದೀಪ್ಕೆ ಅವರು ಪ್ರಧಾನಿಯವರ ‘ನಮ್ಮ ಯುವಕರ ಭವಿಷ್ಯಕ್ಕಿಂತ ಮುಖ್ಯವಾದುದು ಬೇರೆ ಯಾವುದೂ ಇಲ್ಲ’ ಎಂಬ ಹೇಳಿಕೆಗೆ ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದಾರೆ. ‘ಯಾವುದೂ ಇಲ್ಲ’ ಎಂಬ ಪದಗಳ ಬದಲಿಗೆ ‘ಧರ್ಮೇಂದ್ರ ಪ್ರಧಾನ್’ ಎಂಬ ಹೆಸರನ್ನು ಬಳಸಿ ಅವರು ಪೋಸ್ಟ್‌ ಮಾಡಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌, ಪ್ರಧಾನಿ ಮೋದಿಯವರ ಎಕ್ಸ್‌ ಪೋಸ್ಟ್‌ ಅವರು ತೀವ್ರ ಒತ್ತಡದಲ್ಲಿದ್ದು ತಲ್ಲಣಗೊಂಡಿರುವುದನ್ನು ತೋರಿಸುತ್ತದೆ. ಸಂಸತ್ತಿನಲ್ಲಿ ನಿಂತು ಮಾತನಾಡುವ ಅಥವಾ ಗಂಭೀರ ಚರ್ಚೆಗಳಲ್ಲಿ ಭಾಗವಹಿಸುವ ಧೈರ್ಯ ಪ್ರಧಾನಿಗೆ ಇಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago