Featured

ಯುವಕ ನಾಪತ್ತೆ : ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು – vishwanews24

ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸ್ ಮಾಹಿತಿಯ ಪ್ರಕಾರ, ಮೂಡೂರು ನಿವಾಸಿ ತಮೀಮ್ ಅವರ ಪುತ್ರ ಸುಫಿಯಾನ್ (23) ಮಂಗಳೂರಿನ ಮುನ್ನೂರು ಪ್ರದೇಶದಲ್ಲಿರುವ ಪ್ಲೈವುಡ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಮೇ 16, 2026ರಂದು ಸಂಜೆ ಕೆಲಸಕ್ಕೆ ತೆರಳಿದ್ದ ಅವರು, ಮೇ 17ರಂದು ಬೆಳಿಗ್ಗೆ ಸುಮಾರು 11 ಗಂಟೆಗೆ ದೂರವಾಣಿ ಮೂಲಕ ಕುಟುಂಬದವರನ್ನು ಸಂಪರ್ಕಿಸಿ ತಾನು ಕೆಲಸದ ಸ್ಥಳ ತಲುಪಿರುವುದಾಗಿ ತಿಳಿಸಿದ್ದರು.

ಆದರೆ, ಬಳಿಕ ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದು, ಕುಟುಂಬದವರು ಹಾಗೂ ಸಂಬಂಧಿಕರು ಸಂಪರ್ಕಿಸಲು ಯತ್ನಿಸಿದರೂ ಯಾವುದೇ ಮಾಹಿತಿ ದೊರೆತಿಲ್ಲ. ಎಲ್ಲೆಡೆ ಹುಡುಕಾಟ ನಡೆಸಿದರೂ ಸುಫಿಯಾನ್ ಅವರ ಪತ್ತೆಯಾಗದ ಹಿನ್ನೆಲೆಯಲ್ಲಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮೊ.ನಂ. 59/2026ರಂತೆ “ಗಂಡಸು ಕಾಣೆ” ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

ಇದನ್ನೂ ಓದಿ:

ನಾಪತ್ತೆಯಾದ ಯುವಕನ ವಿವರ:

* ಹೆಸರು: ಸುಫಿಯಾನ್
* ತಂದೆಯ ಹೆಸರು: ತಮೀಮ್
* ವಯಸ್ಸು: 23 ವರ್ಷ
* ಎತ್ತರ: ಸುಮಾರು 5.6 ಅಡಿ
* ಮೈಬಣ್ಣ: ಕಪ್ಪು
* ಚಹರೆ: ಸಾಧಾರಣ ಶರೀರ
* ವಿಶೇಷ ಗುರುತು: ಬಲ ಭುಜದ ಮೇಲೆ ಸುಟ್ಟ ಗಾಯದ ಗುರುತು
* ಶಿಕ್ಷಣ: 10ನೇ ತರಗತಿ ತನಕ ವಿದ್ಯಾಭ್ಯಾಸ
* ಧರಿಸಿದ್ದ ಉಡುಪು: ಕಪ್ಪು ಬಣ್ಣದ ಟಿ-ಶರ್ಟ್ ಹಾಗೂ ನೀಲಿ ಬಣ್ಣದ ಪ್ಯಾಂಟ್
* ತಿಳಿದಿರುವ ಭಾಷೆ: ಕನ್ನಡ

ಸುಫಿಯಾನ್ ಅವರ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ನಿಯಂತ್ರಣ ಕೊಠಡಿ (0824-2220800) ಅಥವಾ ಕೊಣಾಜೆ ಪೊಲೀಸ್ ಠಾಣೆ (0824-2220536 / 9480802350) ಸಂಖ್ಯೆಗೆ ಮಾಹಿತಿ ನೀಡುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ:

Vishwa News 24

Recent Posts

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ – vishwanews24

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…

2 hours ago

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ – vishwanews24

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…

3 hours ago

ಮಂಗಳೂರು: ಗಾಯಗೊಂಡ ತಾಯಿ, ಮಗುವನ್ನು ಆಸ್ಪತ್ರೆಗೆ ಸಾಗಿಸಿದ ಬಸ್ ಸಿಬ್ಬಂದಿ; ಮಾನವೀಯತೆಗೆ ಶ್ಲಾಘನೆ – vishwanews24

ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…

3 hours ago

ಮಂಗಳೂರು – ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ – vishwanews24

ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…

4 hours ago

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ – vishwanews24

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…

5 hours ago

ಜೂನ್ 1ರಂದು ಉಡುಪಿ ಕ್ಷೇತ್ರದ ಸರಕಾರಿ ಶಾಲೆಗಳ 20 ಸಾವಿರ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ನೀಡಿ ಸ್ವಾಗತ: ಯಶಪಾಲ್ ಸುವರ್ಣ – vishwanews24

ಜೂನ್ 1ರಂದು ಉಡುಪಿ ಕ್ಷೇತ್ರದ ಸರಕಾರಿ ಶಾಲೆಗಳ 20 ಸಾವಿರ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ನೀಡಿ ಸ್ವಾಗತ: ಯಶಪಾಲ್ ಸುವರ್ಣ…

5 hours ago