ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆ, ಆರಂಭಿಕ ಹಂತದಲ್ಲೇ ಸೋಂಕು ಪತ್ತೆಹಚ್ಚಿ, ಕಡಿವಾಣ ಹಾಕುವ ನಿರ್ಧಾರಕ್ಕೆ ಆರೋಗ್ಯ ಇಲಾಖೆ ಮುಂದಾಗಿದೆ. ಅದಕ್ಕಾಗಿ ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್‌ಐವಿ ಪರೀಕ್ಷೆ ನಡೆಸಲು ಆರೋಗ್ಯ ಇಲಾಖೆ ನಿರ್ಧಾರ ಮಾಡಿದೆ.
ಏಕೆ ಈ ಮಹತ್ವದ ನಿರ್ಧಾರ?
ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ (NACO) ಹಾಗೂ ಇತರ ಸಂಸ್ಥೆಗಳ ವರದಿಗಳ ಪ್ರಕಾರ, ಹೆಚ್‌ಐವಿ ಸೋಂಕಿತರ ಸಂಖ್ಯೆಯಲ್ಲಿ ಕರ್ನಾಟಕ ದೇಶದಲ್ಲೇ 3ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಸುಮಾರು 2.60 ಲಕ್ಷ ಮಂದಿ ಹೆಚ್‌ಐವಿ ಸೋಂಕಿನೊಂದಿಗೆ ಬದುಕುತ್ತಿದ್ದು, ಅವರಲ್ಲಿ ಸುಮಾರು 2.05 ಲಕ್ಷ ಮಂದಿ ಆಂಟಿ ರೆಟ್ರೋ ವೈರಲ್ ಥೆರಪಿ (ART) ಪಡೆಯುತ್ತಿದ್ದಾರೆ.
ಇನ್ನೂ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ವಿಶೇಷವಾಗಿ 18 ರಿಂದ 35 ವರ್ಷದ ಯುವ ಸಮೂಹದಲ್ಲಿ ಸೋಂಕು ವೇಗವಾಗಿ ಹರಡುತ್ತಿರುವುದು ಇಲಾಖೆಯ ಆತಂಕಕ್ಕೆ ಕಾರಣವಾಗಿದೆ. ಇದೇ ವಯೋಮಾನದೊಳಗಿನ 18 ರಿಂದ 25 ವರ್ಷದ ಸುಮಾರು 7 ಸಾವಿರ ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇದೆಲ್ಲದಕ್ಕಿಂತ ಮುಖ್ಯವಾಗಿ ರಾಜ್ಯದಲ್ಲಿ ಸುಮಾರು 54 ಸಾವಿರ ಮಂದಿಗೆ ತಮಗೆ ಸೋಂಕು ಇರುವುದೇ ತಿಳಿದಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಈ ಹಿನ್ನೆಲೆ ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ (College Students) ಹೆಚ್‌ಐವಿ ಪರೀಕ್ಷೆ ನಡೆಸುವ ಯೋಜನೆಯನ್ನು ಆರೋಗ್ಯ ಇಲಾಖೆ ಹಾಕಿಕೊಂಡಿದೆ. ಈ ವಿಶೇಷ ಅಭಿಯಾನಕ್ಕೆ ಆಯಾ ಕಾಲೇಜುಗಳ ಪ್ರಾಂಶುಪಾಲರು ಹಾಗೂ ವಿದ್ಯಾರ್ಥಿಗಳು ಸಹಕರಿಸುವಂತೆ ಆರೋಗ್ಯ ಇಲಾಖೆ ಮುಖ್ಯಸ್ಥರು ಮನವಿ ಮಾಡಿದ್ದಾರೆ.
ಗೌಪ್ಯತೆ ಕಾಪಾಡಲು ಕ್ಯೂಆರ್ ಕೋಡ್ (QR Code) ಆ್ಯಪ್ ಪರಿಚಯ:
ವಿದ್ಯಾರ್ಥಿಗಳಿಗೆ ಪರೀಕ್ಷೆ ಮಾಡಿಸಿಕೊಳ್ಳಲು ಮುಜುಗರ ಅಥವಾ ಸಾಮಾಜಿಕ ಭಯ ಇರಬಾರದು ಎಂಬ ಕಾರಣಕ್ಕೆ ಆರೋಗ್ಯ ಇಲಾಖೆಯು ಸಂಪೂರ್ಣ ಗೌಪ್ಯತೆ ಕಾಯ್ದುಕೊಳ್ಳಲು ವಿನೂತನ ಪ್ಲಾನ್ ಮಾಡಿದೆ.
ಇದಕ್ಕಾಗಿ ‘ನಿಮ್ಮ ಹೆಚ್‌ಐವಿ ಸ್ಥಿತಿ ತಿಳಿದುಕೊಳ್ಳಿ’ ಎಂಬ ಕ್ಯೂಆರ್ ಕೋಡ್ ಆಧಾರಿತ ಆ್ಯಪ್ ಪರಿಚಯಿಸಲಾಗುತ್ತಿದೆ. ವಿದ್ಯಾರ್ಥಿಗಳು ಮೊಬೈಲ್ ಮೂಲಕ ಈ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ತಮ್ಮ ಗುರುತನ್ನು ರಹಸ್ಯವಾಗಿಟ್ಟುಕೊಂಡು ಹೆಚ್‌ಐವಿ ಪರೀಕ್ಷೆಗೆ ನೋಂದಾಯಿಸಿಕೊಳ್ಳಬಹುದು. ಸೋಂಕು ಆರಂಭಿಕ ಹಂತದಲ್ಲೇ ಪತ್ತೆಯಾದರೆ ಸೂಕ್ತ ವೈದ್ಯಕೀಯ ಚಿಕಿತ್ಸೆನೀಡಿ ಸೋಂಕು ಪ್ರಸರಣವನ್ನು ತಡೆಯಬಹುದು. ಹೀಗಾಗಿ ರಾಜ್ಯದ ಯುವ ಸಮಾಜವನ್ನು ಏಡ್ಸ್ ಮಹಾಮಾರಿಯಿಂದ ರಕ್ಷಿಸಲು ಆರೋಗ್ಯ ಇಲಾಖೆ ಈ ಕ್ರಾಂತಿಕಾರಿ ಹೆಜ್ಜೆಯನ್ನಿಟ್ಟಿದೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…