Featured

ಯುವತಿಯರು ಶಬರಿಮಲೆಗೆ ಹೋಗುವುದರಿಂದ ಅಯ್ಯಪ್ಪ ಭಕ್ತರನ್ನು ಪ್ರಚೋದಿಸಿದಂತಾಗುತ್ತದೆ : ಖ್ಯಾತ ಗಾಯಕ ಕೆ.ಜೆ.ಯೇಸುದಾಸ್‌ -Vishwanews24

ಕೊಚ್ಚಿನ್: ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಖ್ಯಾತ ಗಾಯಕ ಕೆ.ಜೆ.ಯೇಸುದಾಸ್‌ ವಿರೋಧ ವ್ಯಕ್ತಪಡಿಸಿದ್ದು, ‘ಅಯ್ಯಪ್ಪ ಭಕ್ತರ ಪ್ರಚೋದಿಸಬೇಡಿ’ ಎಂದು ಎಚ್ಚರಿಕೆ ನೀಡಿದ್ದಾರೆ.

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿಚಾರಕ್ಕೆ ಸಂಬಂಧಿಸಿದ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ಅಂತಿಮ ಹಂತ ತಲುಪಿರುವಂತೆಯೇ ಇತ್ತ ಇದೇ ವಿಚಾರವಾಗಿ ಮಾತನಾಡಿರುವ ಖ್ಯಾತ ಗಾಯಕ ಯೇಸುದಾಸ್ ಅವರು, ಮಹಿಳೆಯರ ಉಪಸ್ಥಿತಿಯಿಂದ ಪುರುಷ ಭಕ್ತರ ಮನಸ್ಸಿಗೆ ಭಂಗವಾಗಲಿದೆ ಎಂದಾದರೆ, ಮಹಿಳೆಯರು ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಭೇಟಿ ನೀಡದಿರುವುದೇ ಉತ್ತಮ ಎಂದು ಹೇಳಿದ್ದಾರೆ.

ದೇವಾಲಯಕ್ಕೆ ಆಗಮಿಸುವ ಅಯ್ಯಪ್ಪ ಭಕ್ತರ ನೇಮ- ನಿಷ್ಠೆ ಪದ್ಧತಿಗಳ ಮೂಲಕ ಒಳ್ಳೆಯ ಉದ್ದೇಶದಿಂದ ಬರುತ್ತಾರೆ. ಹಾಗಾಗಿ ಯುವತಿಯರು ದೇವಾಲಯಕ್ಕೆ ಹೋಗುವುದರಿಂದ ಅಯ್ಯಪ್ಪ ಭಕ್ತರನ್ನು ಪ್ರಚೋದಿಸಿದಂತಾಗುತ್ತದೆ. ಹಾಗಾಗಿ ಭಕ್ತರನ್ನು ಪ್ರಚೋದಿಸಬೇಡಿ ಎಂಬುದಷ್ಟೇ ನನ್ನ ಮನವಿ. ಇದೇ ಕಾರಣಕ್ಕೆ 50 ವರ್ಷಕ್ಕಿಂತ ಕಿರಿಯ ಮಹಿಳೆಯರು ಅಯ್ಯಪ್ಪ ದೇವಾಲಯಕ್ಕೆ ಹೋಗಬಾರದು ಎಂಬುದು ನನ್ನ ಅಭಿಪ್ರಾಯ ಎಂದಿದ್ದಾರೆ.

‘ಸುಂದರವಾದ ಹುಡುಗಿಯೊಬ್ಬಳು, ಇಂದು ಆಕೆ ಧರಿಸುವ ಉಡುಪಿನಲ್ಲಿ ದೇಗುಲಕ್ಕೆ ತೆರಳಿದರೆ ಸ್ವಾಮಿ ಅಯ್ಯಪ್ಪನೇನೂ ಕಣ್ತೆರೆದು ನೋಡುವುದಿಲ್ಲ. ಆದರೆ, ಇತರೆ ಭಕ್ತರು ನೋಡುತ್ತಾರೆ, ಇದು ಸರಿಯಲ್ಲ. ಇದರಿಂದ ಭಕ್ತರ ಉದ್ದೇಶವೇ ಬದಲಾಗಲಿದೆ. ಇದೇ ಕಾರಣದಿಂದ ನೀವು ಬರಬೇಡಿ ಎಂದು ಅವರಿಗೆ (ಮಹಿಳೆಯರಿಗೆ) ನಾವು ಹೇಳುತ್ತಿದ್ದೇವೆ. ಇನ್ನೂ ಸಾಕಷ್ಟು ದೇವಸ್ಥಾನಗಳಿವೆ. ಮಹಿಳೆಯರು ಅಲ್ಲಿಗೆ ಹೋಗಲಿ. ಅಯ್ಯಪ್ಪ ಭಕ್ತರನ್ನು ಪ್ರಚೋದಿಸಬೇಡಿ ಎಂಬುದಷ್ಟೇ ಮಹಿಳೆಯರಿಗೆ ನನ್ನ ಮನವಿ ಎಂದು ಯೇಸುದಾಸ್ ಕಿಡಿಕಾರಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago