ಬೆಂಗಳೂರು: ಮದುವೆಗೆ ಸಾಲ ಕೊಡುವುದಾಗಿ ಯುವತಿಯನ್ನು ಫ್ಲ್ಯಾಟ್‌ಗೆ ಕರೆದೊಯ್ದು ಮದ್ಯ ಕುಡಿಸಿ ಆಕೆಯ ಮೇಲೆ ಬಿಜೆಪಿ ಮುಖಂಡನೋರ್ವ ಅತ್ಯಾಚಾರವೆಸಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
26 ವರ್ಷದ ಯುವತಿ ನೀಡಿದ ದೂರಿನ ಆಧಾರದ ಮೇಲೆ ಬಿಜೆಪಿ ಮುಖಂಡ ಜಿಮ್ ಸೋಮ ಅಲಿಯಾಸ್ ಸೋಮಶೇಖರ್ ಮೇಲೆ ಅಶೋಕನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸಂತ್ರಸ್ತ ಯುವತಿಗೆ ಆಕೆಯ ಸ್ನೇಹಿತೆ ಮೂಲಕ ಸೋಮಶೇಖರ್ ಪರಿಚಯವಾಗಿತ್ತು. ಕಳೆದ ವರ್ಷ ಯುವತಿಗೆ ಮದುವೆ ಫಿಕ್ಸ್ ಆಗಿತ್ತು. ಈ ಸಮಯದಲ್ಲಿ ಯುವತಿ ಮದುವೆಗಾಗಿ ಸೋಮಶೇಖರ್ ಬಳಿ ಸುಮಾರು 6 ಲಕ್ಷ ಹಣದ ಸಹಾಯ ಕೇಳಿದ್ದರು.
ಕಳೆದ ವರ್ಷ ಅಕ್ಟೋಬರ್‌ನಲ್ಲಿ ಹಣ ಕೊಡುವುದಾಗಿ ಸಂತ್ರಸ್ತೆಯನ್ನು ಪಿಜಿಯಿಂದ ಲ್ಯಾಂಗ್ ಫೋರ್ಡ್ ರಸ್ತೆಯ ತನ್ನ ಫ್ಲಾಟ್‌ಗೆ ಕರೆದೊಯ್ದು ಇಚ್ಚೆಗೆ ವಿರುದ್ಧವಾಗಿ ಮದ್ಯಕುಡಿಸಿ ಅತ್ಯಾಚಾರವೆಸಗಿದ್ದಾನೆ. ಈ ವಿಚಾರ ಹೊರಗಡೆ ಹೇಳಿದರೆ ಪ್ರಾಣ ತೆಗೆಯೋದಾಗಿ ಬೆದರಿಕೆ ಹಾಕಿದ್ದು, ಮಾನ ಹರಾಜು ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತೆ ದೂರು ನೀಡಿದ್ದಾಳೆ.
ಘಟನೆ ನಡೆದು ಮೂರು ತಿಂಗಳ ಬಳಿಕ ಸಂತ್ರಸ್ತೆ ಅಶೋಕನಗರ ಠಾಣೆಗೆ ದೂರು ನೀಡಿದ್ದಾಳೆ. ಸಕಲೇಶಪುರ ಕ್ಷೇತ್ರದಿಂದ ಶಾಸಕ ಸ್ಥಾನಕ್ಕೆ ಸ್ಫರ್ಧಿಸಿ ಪರಾಜಯಗೊಂಡಿದ್ದ ಸೋಮಶೇಖರ್ ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…