Featured

ಯುವ ದಸರಾ ಕಾರ್ಯಕ್ರಮ ಉದ್ಘಾಟನೆಗೆ ಪಿ.ವಿ.ಸಿಂಧುಗೆ ಸಿಎಂ ಆಹ್ವಾನ -Vishwanews24

ಬೆಂಗಳೂರು: ಈ ಬಾರಿ ವಿಶ್ವಬ್ಯಾಡ್ಮಿಂಟನ್ ಚಾಂಪಿಯನ್ ಪ್ರಶಸ್ತಿ ಪಡೆದ ಪಿ.ವಿ ಸಿಂಧು ಅವರನ್ನು ಯುವ ದಸರಾ ಕಾರ್ಯಕ್ರಮ ಉದ್ಘಾಟನೆ ಮಾಡಲು ಮುಖ್ಯಮಂತ್ರಿ ಸಿಎಂ ಯಡಿಯೂರಪ್ಪ ಅವರು ಆಹ್ವಾನ ಕೊಟ್ಟಿದ್ದಾರೆ.

ಅಕ್ಟೊಬರ್ 1 ರಂದು ಯುವ ದಸರಾ ಉದ್ಘಾಟನೆ ನಡೆಯಲಿದೆ ಈ ಒಂದು ಸಂದರ್ಭದಲ್ಲಿ ತಾವು ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಆಗಿ ಭಾರತದ ಕೀರ್ತಿ ಪತಾಕೆ ಪ್ರಪಂಚದಾದ್ಯಂತ ಹಾರಿಸಿದ್ದೀರಿ, ನೀವು ಲಕ್ಷಾಂತರ ಯುವ ಕ್ರೀಡಾ ಪ್ರತಿಭೆಗಳಿಗೆ ಸ್ಪೂರ್ತಿಯಾಗಿದ್ದೀರಿ ಹೀಗಾಗಿ ನೀವು ನಮ್ಮ ಮೈಸೂರು ದಸರಾ ಉದ್ಘಾಟನೆ ಮಾಡಬೇಕು ಎಂದು ಪತ್ರದ ಮುಖಂತರ ಕೋರಿಕೊಂಡಿದ್ದಾರೆ.

ಸದ್ಯ ನಮ್ಮ ಮೈಸೂರು ದಸರಾ ವಿಶ್ವವಿಖ್ಯಾತವಾಗಿದ್ದು ಪ್ರತಿವರ್ಷ ಸಡಗರ ಸಂಭ್ರಮದಿಂದ ಈ ನಾಡಹಬ್ಬ ದಸರಾವನ್ನು ಆಚರಿಸುತ್ತೇವೆ ಈ ಸಂದರ್ಭದಲ್ಲಿ ಹಲವು ಗಣ್ಯರು ಪ್ರತಿವರ್ಷ ದಸರಾ ಹಬ್ಬದ ವಿವಿಧ ಕಾರ್ಯಕ್ರಮಗಳನ್ನು ಉದ್ಘಾಟನೆ ಮಾಡುತ್ತಾರೆ, ಹೀಗಾಗಿ ಅಕ್ಟೋಬರ್ 1ರಂದು ಯುವ ದಸರಾ ಉದ್ಘಾಟನೆ ಮಾಡಲು ಬನ್ನಿ ಎಂದು ಸಿಎಂ ಬಿಎಸ್​ ಯಡಿಯೂರಪ್ಪ ಅವರು ಪಿ.ವಿ.ಸಿಂಧು ಅವರಿಗೆ ಆಹ್ವಾನ ನೀಡಿದ್ದಾರೆ.

ವಿಶ್ವವಿಖ್ಯಾತ ಮೈಸೂರು ಯುವ ದಸರಾ ಉದ್ಘಾಟನೆ ರಾಜ್ಯದ ಅತಿಥಿಯಾಗಿ ಆಗಮಿಸುವಂತೆ ಸಿಎಂ ಆಹ್ವಾನ ನೀಡಿದ್ದು, ಅಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಯುವದಸರಾ ಮತ್ತು ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ಚಿನ್ನದ ಹುಡುಗಿ ಪಿ.ವಿ.ಸಿಂಧು ಕರ್ನಾಟಕದ ಅತಿಥಿಯಾಗಿ ಆಗಮಿಸಲಿದ್ದಾರೆ. ಅವರ ಆಗಮನಕ್ಕೆ ಎಲ್ಲಾ ಸಿದ್ಧತೆಗಳನ್ನು ಅಧಿಕಾರಿಗಳು ಕೈಗೊಂಡಿದ್ದಾರೆ.

 

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

19 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago