ಬೆಂಗಳೂರು: ಈ ಬಾರಿ ವಿಶ್ವಬ್ಯಾಡ್ಮಿಂಟನ್ ಚಾಂಪಿಯನ್ ಪ್ರಶಸ್ತಿ ಪಡೆದ ಪಿ.ವಿ ಸಿಂಧು ಅವರನ್ನು ಯುವ ದಸರಾ ಕಾರ್ಯಕ್ರಮ ಉದ್ಘಾಟನೆ ಮಾಡಲು ಮುಖ್ಯಮಂತ್ರಿ ಸಿಎಂ ಯಡಿಯೂರಪ್ಪ ಅವರು ಆಹ್ವಾನ ಕೊಟ್ಟಿದ್ದಾರೆ.
ಅಕ್ಟೊಬರ್ 1 ರಂದು ಯುವ ದಸರಾ ಉದ್ಘಾಟನೆ ನಡೆಯಲಿದೆ ಈ ಒಂದು ಸಂದರ್ಭದಲ್ಲಿ ತಾವು ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಆಗಿ ಭಾರತದ ಕೀರ್ತಿ ಪತಾಕೆ ಪ್ರಪಂಚದಾದ್ಯಂತ ಹಾರಿಸಿದ್ದೀರಿ, ನೀವು ಲಕ್ಷಾಂತರ ಯುವ ಕ್ರೀಡಾ ಪ್ರತಿಭೆಗಳಿಗೆ ಸ್ಪೂರ್ತಿಯಾಗಿದ್ದೀರಿ ಹೀಗಾಗಿ ನೀವು ನಮ್ಮ ಮೈಸೂರು ದಸರಾ ಉದ್ಘಾಟನೆ ಮಾಡಬೇಕು ಎಂದು ಪತ್ರದ ಮುಖಂತರ ಕೋರಿಕೊಂಡಿದ್ದಾರೆ.
ಸದ್ಯ ನಮ್ಮ ಮೈಸೂರು ದಸರಾ ವಿಶ್ವವಿಖ್ಯಾತವಾಗಿದ್ದು ಪ್ರತಿವರ್ಷ ಸಡಗರ ಸಂಭ್ರಮದಿಂದ ಈ ನಾಡಹಬ್ಬ ದಸರಾವನ್ನು ಆಚರಿಸುತ್ತೇವೆ ಈ ಸಂದರ್ಭದಲ್ಲಿ ಹಲವು ಗಣ್ಯರು ಪ್ರತಿವರ್ಷ ದಸರಾ ಹಬ್ಬದ ವಿವಿಧ ಕಾರ್ಯಕ್ರಮಗಳನ್ನು ಉದ್ಘಾಟನೆ ಮಾಡುತ್ತಾರೆ, ಹೀಗಾಗಿ ಅಕ್ಟೋಬರ್ 1ರಂದು ಯುವ ದಸರಾ ಉದ್ಘಾಟನೆ ಮಾಡಲು ಬನ್ನಿ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಅವರು ಪಿ.ವಿ.ಸಿಂಧು ಅವರಿಗೆ ಆಹ್ವಾನ ನೀಡಿದ್ದಾರೆ.
ವಿಶ್ವವಿಖ್ಯಾತ ಮೈಸೂರು ಯುವ ದಸರಾ ಉದ್ಘಾಟನೆ ರಾಜ್ಯದ ಅತಿಥಿಯಾಗಿ ಆಗಮಿಸುವಂತೆ ಸಿಎಂ ಆಹ್ವಾನ ನೀಡಿದ್ದು, ಅಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಯುವದಸರಾ ಮತ್ತು ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ಚಿನ್ನದ ಹುಡುಗಿ ಪಿ.ವಿ.ಸಿಂಧು ಕರ್ನಾಟಕದ ಅತಿಥಿಯಾಗಿ ಆಗಮಿಸಲಿದ್ದಾರೆ. ಅವರ ಆಗಮನಕ್ಕೆ ಎಲ್ಲಾ ಸಿದ್ಧತೆಗಳನ್ನು ಅಧಿಕಾರಿಗಳು ಕೈಗೊಂಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…