Featured

ಯುವ ಪೀಳಿಗೆಗೆ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸಿ : ಡಾ. ತಲ್ಲೂರ ಶಿವರಾಮ್ ಶೆಟ್ಟಿ -Vishwanews24

ಯುವ ಪೀಳಿಗೆಗೆ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸಿ : ಡಾ. ತಲ್ಲೂರ ಶಿವರಾಮ್ ಶೆಟ್ಟಿ -Vishwanews24

ಉಡುಪಿ : ಕ್ಯಾನ್ಸರ್ ಒಂದು ಮಾರಕ ಕಾಯಿಲೆಯಾಗಿದ್ದು, ಅದಕ್ಕೆ ವಯೋಮಿತಿಯ ನಿರ್ಬಂಧವಿಲ್ಲಾ. ಆದ್ದರಿಂದ ಇಂದಿನ ಯುವಪೀಳಿಗೆಗೆ ಕ್ಯಾನ್ಸರ್ ಬಗ್ಗೆ ಅರಿವು ಮೂಡಿಸುವುದು ಮತ್ತು ಅದನ್ನು ತಡೆಗಟ್ಟಲು ಅನುಸರಿಸಬೇಕಾದ ಕ್ರಮಗಳ ಕುರಿತು ಜಾಗೃತಿ ಮೂಡಿಸಬೇಕು ಎಂದು ಉಡುಪಿ ವಿಭಾಗದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಡಾ. ತಲ್ಲೂರ ಶಿವರಾಮ್ ಶೆಟ್ಟಿ ಹೇಳಿದರು.

ಅವರು ಗುರುವಾರ ರೆಡ್ ಕ್ರಾಸ್ ಭವನದಲ್ಲಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ ಹಾಗೂ ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ ಇವರ ಸಹಯೋಗದೊಂದಿಗೆ ನಡೆದ ವಿಶ್ವ ಕ್ಯಾನ್ಸರ್ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಡಾ.ಜಿ.ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಭಾಸ್ಕರ್ ಶೆಟ್ಟಿ, ಕ್ಯಾನ್ಸರ್ ಹರಡುವ ಸಂಭವ ಇದ್ದರೂ ಅದನ್ನು ಅರಿತುಕೊಳ್ಳದೆ ಯುವಜನತೆ, ಧೂಮಪಾನ, ಮದ್ಯಪಾನ ಮಾಡುತ್ತಾರೆ. ಪ್ರಸ್ತುತ ದಿನಗಳಲ್ಲಿ ಸ್ವಸ್ಥ ಮತ್ತು ಸ್ವಚ್ಛ ಸಮಾಜವನ್ನು ನಿರ್ಮಿಸುವ ಜವಾಬ್ದಾರಿ ಯುವಪೀಳಿಗೆ ಮೇಲಿದೆ. ಆ ನಿಟ್ಟಿನಲ್ಲಿ ಯುವಜನಾಂಗಕ್ಕೆ ಸೂಕ್ತ ಮಾರ್ಗದರ್ಶನವಾಗಬೇಕು ಎಂದರು.
ಜಿಲ್ಲಾ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಖಜಾಂಜಿ ಡಾ.ಅರವಿಂದ್ ನಾಯಕ್ ಅಮ್ಮುಂಜೆ ಮಾತನಾಡಿ, ಈ ಮೊದಲು ಎರಡು ಬಗೆಯ ಕ್ಯಾನ್ಸರ್ ಮಾತ್ರ ತಿಳಿದಿದ್ದು, ಈಗ 150 ಬಗೆಯ ಕ್ಯಾನ್ಸರ್‌ನ್ನು ಗುರುತಿಸಲಾಗಿದೆ. ಹಾಗೆಯೇ ಅದಕ್ಕೆ ತಕ್ಕಂತೆ ಚಿಕಿತ್ಸೆಯನ್ನೂ ಕೂಡಾ ಅಭಿವೃದ್ಧಿ ಪಡಿಸಲಾಗಿದೆ. ಆದರೆ ಕ್ಯಾನ್ಸರ್ ದೃಢಪಟ್ಟಿದ್ದರೆ ಭಯ ಬೀಳದೆ ಆತ್ಮ ವಿಶ್ವಾಸ ಮತ್ತು ಧೈರ್ಯದಿಂದ ಎದುರಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್‌ನ ಅಧ್ಯಕ್ಷ ಸುನೀಲ್ ಕುಮಾರ್ ಶೆಟ್ಟಿ, ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಮಾಲತಿ ತಂತ್ರಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಕೆ. ಜಯರಾಮ್ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು. ರೆಡ್‌ಕ್ರಾಸ್ ಸಂಸ್ಥೆಯ ಉಪಾಧ್ಯಕ್ಷ ಡಾ. ಅಶೋಕ ಕುಮಾರ್ ವೈ ಜಿ ಸ್ವಾಗತಿಸಿ ವಂದಿಸಿದರು.

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

7 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

7 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

7 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

7 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

12 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

12 hours ago