Featured

ಯುವ ಬರಹಗಾರ, ಸಂಭಾಷಣೆಕಾರ ಟಿ.ಜಿ. ನಂದೀಶ್ ಹೃದಯಾಘಾತದಿಂದ ನಿಧನ -vishwanews24

ಯುವ ಬರಹಗಾರ, ಸಂಭಾಷಣೆಕಾರ ಟಿ.ಜಿ. ನಂದೀಶ್ ಹೃದಯಾಘಾತದಿಂದ ನಿಧನ

ತೀರ್ಥಹಳ್ಳಿ: ಕನ್ನಡ ಚಿತ್ರರಂಗ ಮತ್ತು ಕಿರುತೆರೆಯಲ್ಲಿ ಸಂಭಾಷಣೆಕಾರರಾಗಿ ಹೆಸರು ಮಾಡಿದ್ದ ಪ್ರತಿಭಾವಂತ ಬರಹಗಾರ ಟಿ.ಜಿ. ನಂದೀಶ್ ಅವರು ಬುಧವಾರ ಮಧ್ಯಾಹ್ನ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಅವರಿಗೆ 37 ವರ್ಷ ವಯಸ್ಸಾಗಿತ್ತು. ಸದಾ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದ ನಂದೀಶ್ ಅವರ ಅಕಾಲಿಕ ನಿಧನಕ್ಕೆ ಹಲವರು ಕಂಬನಿ ಮಿಡಿದಿದ್ದಾರೆ.

ಮೂಲತಃ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನವರಾದ ಟಿ.ಜಿ. ನಂದೀಶ್ ಅವರು ಆಶಾ ಮತ್ತು ಗಂಗಾಧರಯ್ಯ ದಂಪತಿಯ ಪುತ್ರರಾಗಿದ್ದರು. ಸಾಹಿತ್ಯದ ಮೇಲೆ ಅಪಾರ ಆಸಕ್ತಿ ಹೊಂದಿದ್ದ ಅವರು, ಬರವಣಿಗೆಯ ಮೂಲಕವೇ ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಅವರು ಹಂಚಿಕೊಳ್ಳುತ್ತಿದ್ದ “ನಂದಿ ರೈಟ್ಸ್” ಬರಹಗಳು ಅಪಾರ ಜನಪ್ರಿಯತೆ ಪಡೆದಿದ್ದವು.

ಚಿತ್ರರಂಗದಲ್ಲಿ ಸಾಧನೆ ಮಾಡುವ ಕನಸಿನೊಂದಿಗೆ ಬೆಂಗಳೂರಿಗೆ ಬಂದ ನಂದೀಶ್ ಅವರು ಆರಂಭದಲ್ಲಿ ಹಲವು ಸವಾಲುಗಳನ್ನು ಎದುರಿಸಿದ್ದರು. ಬಳಿಕ ಪ್ರಸಿದ್ಧ ‘ಚಿತ್ತಾರ’ ಸಿನಿಮಾ ಮ್ಯಾಗಝಿನ್‌ನಲ್ಲಿ ಕೆಲಸ ಮಾಡುವ ಮೂಲಕ ಚಿತ್ರರಂಗದೊಂದಿಗೆ ಆಪ್ತ ಸಂಪರ್ಕ ಬೆಳೆಸಿಕೊಂಡರು. ಈ ಅವಧಿಯಲ್ಲಿ ಅನೇಕ ನಿರ್ದೇಶಕರು, ನಟರು ಹಾಗೂ ತಂತ್ರಜ್ಞರೊಂದಿಗೆ ಉತ್ತಮ ಸ್ನೇಹ ಬೆಳೆಸಿಕೊಂಡಿದ್ದ ಅವರು, ತಮ್ಮ ಪ್ರತಿಭೆಯಿಂದಲೇ ಚಿತ್ರರಂಗದಲ್ಲಿ ಸ್ಥಾನ ಪಡೆದಿದ್ದರು.

2023ರಲ್ಲಿ ಬಿಡುಗಡೆಯಾಗಿ ವಿಮರ್ಶಕರ ಮೆಚ್ಚುಗೆ ಪಡೆದ ‘ಒಂದಂಕೆ ಕಾಡು’ ಸಿನಿಮಾಗೆ ಟಿ.ಜಿ. ನಂದೀಶ್ ಸಂಭಾಷಣೆ ಬರೆದಿದ್ದರು. ಅವರ ಸಂಭಾಷಣೆಯ ಶೈಲಿ ಹಾಗೂ ಪಾತ್ರಗಳಿಗೆ ನೀಡುತ್ತಿದ್ದ ಅಭಿವ್ಯಕ್ತಿ ಸಿನಿಪ್ರಿಯರ ಮೆಚ್ಚುಗೆಗೆ ಪಾತ್ರವಾಗಿತ್ತು. ಇದಲ್ಲದೆ ‘ದೂರದರ್ಶನ’ ಸೇರಿದಂತೆ ಹಲವು ಸಿನಿಮಾಗಳಿಗೆ ಸಂಭಾಷಣೆ ಬರೆಯುವ ಮೂಲಕ ಅವರು ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಗುರುತು ಮೂಡಿಸಿದ್ದರು.

ಬುಧವಾರ ಬೆಳಗ್ಗೆಯೂ ಎಂದಿನಂತೆ ನಂದೀಶ್ ಅವರು ಫೇಸ್‌ಬುಕ್‌ನಲ್ಲಿ ಪೋಸ್ಟ್ ಒಂದು ಹಂಚಿಕೊಂಡಿದ್ದರು. ಇದಾದ ಕೆಲವೇ ಗಂಟೆಗಳಲ್ಲಿ ಅವರಿಗೆ ಹೃದಯಾಘಾತವಾಗಿದೆ. ತೀವ್ರ ಅಸ್ವಸ್ಥಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ಮೃತ ನಂದೀಶ್ ಅವರಿಗೆ ಪತ್ನಿ ಹಾಗೂ ಇಬ್ಬರು ಪುಟ್ಟ ಮಕ್ಕಳಿದ್ದಾರೆ.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago