Featured

ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲು – vishwanews24

ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲು

ಬೆಂಗಳೂರು: ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಹಾಗೂ ಅತ್ಯಾಚಾರ ಪ್ರಕರಣ ಸಂಬಂಧ ಕೋರ್ಟ್ ಆದೇಶ ಉಲ್ಲಂಘಿಸಿ ಎರಡನೆ ವಿಡಿಯೊ ಬಿಟ್ಟಿರುವ ಆರೋಪ ಹಿನ್ನೆಲೆ ʼದೂತʼ ಹೆಸರಿನ ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಾಗಿದೆ.

ಸೌಜನ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕ್ಷೇತ್ರದ ಧರ್ಮಸ್ಥಳವನ್ನು ಗುರಿಯಾಗಿಸಿಕೊಂಡು ಈ ಹಿಂದೆ ಮಾಡಿರುವ ವಿಡಿಯೊ ತೆಗೆದುಹಾಕುವಂತೆ ಮತ್ತು ಈ ಕುರಿತು ವಿಡಿಯೊ ಮಾಡದಂತೆ ತಡೆಯಾಜ್ಞೆ ನೀಡಿತ್ತು. ಆದರೆ, ನ್ಯಾಯಾಲಯದ ತಡೆಯಾಜ್ಞೆ ಅದೇಶವನ್ನು ಉಲ್ಲಂಘಿಸಿ, ಎರಡನೆ ವಿಡಿಯೋ ಬಿಟ್ಟಿರುವ ಹಿನ್ನೆಲೆ ಸಮೀರ್ ಎಂಡಿ ಮೇಲೆ ಮಾನಷ್ಟ ಮೊಕದ್ದಮೆ ದಾಖಲಾಗಿದೆ.

ಪ್ರರಕಣ ಸಂಬಂಧ 10 ಕೋಟಿ ಮಾನನಷ್ಟ ಮೊಕದ್ದಮೆಯನ್ನು ಧರ್ಮಸ್ಥಳ ಡಿ.ಹರ್ಷೇಂದ್ರ ಕುಮಾರ್ ಮತ್ತು ನಿಶ್ಚಲ್ ಡಿ.ಹೂಡಿದ್ದಾರೆ. ನ್ಯಾಯಾಲಯವು ಯೂಟ್ಯೂಬರ್ ಗೆ ನೋಟೀಸ್ ಜಾರಿ ಮಾಡಿ, ಹಾಜರಾಗುವಂತೆ ಸೂಚನೆಯನ್ನು ನೀಡಿದೆ. ಮುಖ್ಯವಾಗಿ ನ್ಯಾಯಾಲಯದ ಆದೇಶ ಉಲ್ಲಂಘಿಸಿ ಹರಿಬಿಟ್ಟಿದ್ದ ವಿಡಿಯೊ ತಕ್ಷಣ ಡಿಲೀಟ್ ಮಾಡಲು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಆದೇಶ ಮಾಡಿದೆ. ಧರ್ಮಸ್ಥಳ ಪರ ರಾಜಶೇಖರ ಹಿಲ್ಯಾರ್ ಮಂಡಿಸಿದ ವಾದವನ್ನು ಆಲಿಸಿದ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಧೀಶ ಎಸ್. ನಟರಾಜ್ ಈ ಆದೇಶ ಮಾಡಿದ್ದಾರೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

7 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

9 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

9 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

9 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

9 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

10 hours ago